ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಸುಂಟಿಕೊಪ್ಪ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬುಧವಾರ ಸಂಜೆ ಕನ್ನಡ ವೃತ್ತದಲ್ಲಿ ಜಮಾಯಿಸಿ ರಾಷ್ಟ್ರೀಯ ಮತ್ತು ರಾಜ್ಯ ನಾಯಕರಿಗೆ ಘೋಷಣೆಗಳನ್ನು ಕೂಗಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.ಕಾಂಗ್ರೆಸ್ ಸುಂಟಿಕೊಪ್ಪ ನಗರಾಧ್ಯಕ್ಷ ರಫೀಕ್‌ ಖಾನ್ ಸೇರಿದಂತೆ ಕಾರ್ಯಕರ್ತರು ಕನ್ನಡ ವೃತ್ತದಲ್ಲಿ ಜಮಾಯಿಸಿ, ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ರಾಜ್ಯದ ನಾಯಕರಾದ ಸಿದ್ಧರಾಮಯ್ಯ ಹಾಗೂ ಶಾಸಕರಾದ ಡಾ. ಮಂತರ್‌ ಗೌಡ, ಎ.ಎಸ್. ಪೊನ್ನಣ್ಣ ಅವರಿಗೆ ಜಯ ಘೋಷ ಕೂಗಿದರು.ಗ್ರಾಪಂ ಮಾಜಿ ಅಧ್ಯಕ್ಷ ಕೆ.ಇ. ಕರೀಂ, ಮಾಜಿ ಅಧ್ಯಕ್ಷೆ ಶಿವಮ್ಮ ಮಹೇಶ್, ಗ್ರಾಪಂ ಮಾಜಿ ಸದಸ್ಯ ಕೆ.ಎಂ. ಆಲಿಕುಟ್ಟಿ, ಹೋಬಳಿ ಅಧ್ಯಕ್ಷ ರಜಾಕ್, ಯುವ ಕಾಂಗ್ರೆಸ್ ಅಧ್ಯಕ್ಷ ಯಂಕನ. ಶ್ರೀರಾಮ್, ನಗರ ಕಾಂಗ್ರೆಸ್ ಕಾರ್ಯದರ್ಶಿ ಯಂಕನ ಕೌಶಿಕ್, ನಗರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಜೀಜ್, ಕಾನ್‌ಬೈಲ್ ವಿಭಾಗದ ಅಧ್ಯಕ್ಷ ಆದಂ, ಮಹಿಳಾ ಘಟಕದ ಅಧ್ಯಕ್ಷೆ ರಮಣಿ, ಜಿಪಂ ಮಾಜಿ ಸದಸ್ಯೆ ಭಾನುಮತಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯರ್ತರು ಇದ್ದರು.