ಚನ್ನಪಟ್ಟಣದಲ್ಲಿ ಡಿಕೆಶಿ ಟೆಂಪಲ್ ರನ್

| Published : Jun 20 2024, 01:07 AM IST

ಸಾರಾಂಶ

ಚನ್ನಪಟ್ಟಣ: ಬುಧವಾರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ತಾಲೂಕಿನಲ್ಲಿ ಟೆಂಪಲ್ ರನ್ ನಡೆಸಿದರು.

ಚನ್ನಪಟ್ಟಣ: ಬುಧವಾರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ತಾಲೂಕಿನಲ್ಲಿ ಟೆಂಪಲ್ ರನ್ ನಡೆಸಿದರು.

ಬುಧವಾರ ಬೆಳಗ್ಗೆ ೧೧ ಗಂಟೆಗೆ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಶಿವಕುಮಾರ್ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತಾದರೂ ಅವರು ಆಗಮಿಸಿದಾದ ೧ ಗಂಟೆಯಾಗಿತ್ತು. ದೇಗುಲದಲ್ಲಿ ವಿಶೇಷ ಪೂಜೆ ಸಲಿಸಿದ ಅವರು, ನಂತರ ನಗರದ ಕೋಟೆಯ ಶ್ರೀ ನೀಲಕಂಠೇಶ್ವರ ಸ್ವಾಮಿ ದೇವಾಲಯ, ಶ್ರೀ ಕಾಳಮ್ಮ ದೇವಾಲಯ, ಶ್ರೀ ವರದರಾಜ ಸ್ವಾಮಿ ದೇವಾಲಯ, ರಾಘವೇಂದ್ರ ಸ್ವಾಮಿ ದೇವಾಲಯ, ತಾಲೂಕಿನ ದೊಡ್ಡ ಮಳೂರು ಗ್ರಾಮದಲ್ಲಿನ ಶ್ರೀ ಅಪ್ರಮೇಯ ಸ್ವಾಮಿ ದೇವಾಲಯ, ದೇವರಹಳ್ಳಿಯ ಶ್ರೀ ಬೀರೇಶ್ವರ ದೇವಾಲಯ, ಗೌಡಗೆರೆಯ ಶ್ರೀ ಚಾಮುಂಡೇಶ್ವರಿ ದೇವಾಲಯ, ದೇವಹೊಸಹಳ್ಳಿ ಗ್ರಾಮದ ಶ್ರೀ ಸಂಜೀವರಾಯಸ್ವಾಮಿ ದೇವಾಲಯ, ನಗರದ ಹೌಸಿಂಗ್ ಬೋರ್ಡ್‌ನಲ್ಲಿನ ಶ್ರೀ ಮಹದೇಶ್ವರ ದೇವಾಲಯ, ಬಿ.ವಿ.ಹಳ್ಳಿಯ ಶ್ರೀ ಧರ್ಮರಾಯಸ್ವಾಮಿ ದೇವಾಲಯ, ಹುಣಸನಹಳ್ಳಿಯ ಶ್ರೀ ಬಿಸಿಲೇಶ್ವರಿ ದೇವಾಲಯ, ನೇರಳೂರಿನ ಶ್ರೀ ವೈದ್ಯನಾಥಶ್ವೇರ ದೇವಾಲಯ, ಕೂರಣಗೆಯ ಶ್ರೀ ಯೋಗನರಸಿಂಹಸ್ವಾಮಿ ದೇವಾಲಯ, ಕೂಡ್ಲೂರಿನ ಶ್ರೀ ರಾಮಮಂದಿಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ತಾಲೂಕಿನಲ್ಲಿ ಒಂದೇ ದಿನ ಸುಮಾರು ೧೫ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ಆರ್ಶೀವಾದ ಪಡೆದರು.

(ಒಂದು ಫೋಟೋ ಮಾತ್ರ ಬಳಸಿ)

ಪೊಟೋ೧೯ಸಿಪಿಟಿ೬: ಚನ್ನಪಟ್ಟಣ ತಾಲೂಕಿನ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಡಿ.ಕೆ.ಶಿವಕುಮಾರ್ ಪೂಜೆ ಸಲ್ಲಿಸಿದರು.

ಪೊಟೋ೧೯ಸಿಪಿಟಿ೭: ತಾಲೂಕಿನ ಗೌಡಗೆರೆಯಲ್ಲಿನ ಶ್ರೀ ಚಾಮುಂಡೇಶ್ವರಿ ಬಸವಪ್ಪನವರ ದೇವಸ್ಥಾನದಲ್ಲಿ ಡಿ.ಕೆ.ಶಿವಕುಮಾರ್ ಪೂಜೆ ಸಲ್ಲಿಸಿದರು.

ಪೊಟೋ೧೯ಸಿಪಿಟಿ೮: ತಾಲೂಕಿನ ದೊಡ್ಡಮಳೂರಿನ ಶ್ರೀ ಅಪ್ರಮೇಯಸ್ವಾಮಿ ದೇವಸ್ಥಾನದಲ್ಲಿ ಡಿ.ಕೆ.ಶಿವಕುಮಾರ್ ಪೂಜೆ ಸಲ್ಲಿಸಿದರು.