ತಮಿಳುನಾಡಿನ ಸ್ಟಾಲಿನ್ ನೇತೃತ್ವದ ಡಿಎಂಕೆ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಮೇಕೆದಾಟು ಜಲಾಶಯ ನಿರ್ಮಾಣ ವಿರೋಧಿಸುವ ಅಂಶ ಸೇರಿಸಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರತಮಿಳುನಾಡಿನ ಸ್ಟಾಲಿನ್ ನೇತೃತ್ವದ ಡಿಎಂಕೆ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಮೇಕೆದಾಟು ಜಲಾಶಯ ನಿರ್ಮಾಣ ವಿರೋಧಿಸುವ ಅಂಶ ಸೇರಿಸಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಕ್ರೋಶ ವ್ಯಕ್ತಪಡಿಸಿದರು.ತಾಲೂಕಿನ ಮರಿಯಾಲ ಗ್ರಾಮದಲ್ಲಿ ಸಂಘಕ್ಕೆ ಸೇರ್ಪಡೆಯಾದ ರೈತರನ್ನು ಬರಮಾಡಿಕೊಂಡು ನಂತರ ಮಾತನಾಡಿದ ಅವರು, ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳಿಂದ ಹರಿಯುವ ನೀರನ್ನು ಬೆಂಗಳೂರು, ರಾಮನಗರ, ಚೆನ್ನಪಟ್ಟಣಗಳಿಗೆ ಕುಡಿಯುವ ನೀರಿಗಾಗಿ ಪೂರೈಕೆ ಮಾಡುವ ಹಾಗೂ ನ್ಯಾಯಾಧೀಕರಣದ ಸಂಕಷ್ಟ ಸಂದರ್ಭದಲ್ಲಿ ನೀರನ್ನು ಬಳಕೆ ಮಾಡುವ ಉದ್ದೇಶದಿಂದ ಮೇಕೆದಾಟು ಜಲಾಶಯ ನಿರ್ಮಾಣ ಅವಶ್ಯಕತೆ ಇದೆ ಎಂದರು.
ಸಿಎಂ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆಗೆ ನಮ್ಮ ವಿರೋಧವಿದ್ದು ಡ್ಯಾಂ ನಿರ್ಮಾಣಕ್ಕೆ ಅವಕಾಶ ಕೊಡುವುದಿಲ್ಲ ಎಂದು ಘೋಷಣೆ ಮಾಡಿರುವುದು ಎರಡು ರಾಜ್ಯಗಳ ಸಾಮರಸ್ಯವನ್ನು ಕದಡಿದಂತಾಗುತ್ತದೆ ಎಂದು ತಿಳಿಸಿದರು.ರಾಜ್ಯದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಕಾಂಗ್ರೆಸ್ ಸರ್ಕಾರದ ನಾಯಕರು ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆ ಜಾರಿಗೆ ತರುವುದಾಗಿ ಭರವಸೆ ನೀಡಿದ್ದು ಅದರಂತೆ ಸರ್ಕಾರ ಕೂಡಲೇ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.ಈ ಯೋಜನೆಯಿಂದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಕೆರೆ ಕಟ್ಟೆಗಳಿಗೆ ನೀರು ತುಂಬಿಸಲು ಪೂರಕವಾಗಿದೆ. ಆದ್ದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜಕೀಯ ಕೆಸರೆರಚಾಟ ನಡೆಸದೇ ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಬೇಕು. ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಕ್ಯಾತೆ ತೆಗೆದರೆ ರೈತರು ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಿನ ನಾಗರಾಜು, ಜಿಲ್ಲಾ ಕಾರ್ಯದರ್ಶಿ ಮಲೆಯೂರು ಮಹೇಂದ್ರ, ವಕೀಲ ಪೃಥ್ವಿ, ಪದಾಧಿಕಾರಿಗಳಾದ ಪ್ರಕಾಶ್‌ಗಾಂಧಿ, ಗುರುವಿನಪುರ ಚಂದ್ರು, ಶ್ಯಾನಾಡ್ರಹಳ್ಳಿ ಬಸವರಾಜು, ರಾಜು, ಶ್ರೀಕಂಠ, ಚಿಕ್ಕಲಿಂಗಪ್ಪ, ವೀರಭದ್ರಸ್ವಾಮಿ, ಕುಮಾರ್, ಮಹೇಂದ್ರ, ಮಂಟನಾಯಕ, ಮಾದಪ್ಪ, ನಾಗರಾಜಪ್ಪ, ಮಹದೇವಸ್ವಾಮಿ ಸೇರಿದಂತೆ ಇತರರಿದ್ದರು.