ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

| Published : Nov 21 2023, 12:45 AM IST

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
Share this Article
  • FB
  • TW
  • Linkdin
  • Email

ಸಾರಾಂಶ

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯತೋರಿದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕಿ ಡಾ.ಶಮ್ಲಾ ಇಕ್ಬಾಲ್ ಎಚ್ಚರಿಕೆ ನೀಡಿದರು. ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮ ಸಂಬಂಧ ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ವಿವಿಧ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 17 ಹಾಗೂ 18 ವರ್ಷ ತುಂಬಿರುವ ಎಲ್ಲ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಹಮ್ಮಿಕೊಳ್ಳಲಾಗುವ ಕಾರ್ಯಗಳ ಕುರಿತು ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸಬೇಕು ಎಂದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮತದಾರರ ಪಟ್ಟಿ ವೀಕ್ಷಕಿ ಡಾ.ಶಮ್ಲಾ ಇಕ್ಬಾಲ್ ಎಚ್ಚರಿಕೆಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯತೋರಿದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕಿ ಡಾ.ಶಮ್ಲಾ ಇಕ್ಬಾಲ್ ಎಚ್ಚರಿಕೆ ನೀಡಿದರು.

ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮ ಸಂಬಂಧ ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ವಿವಿಧ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 17 ಹಾಗೂ 18 ವರ್ಷ ತುಂಬಿರುವ ಎಲ್ಲ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಹಮ್ಮಿಕೊಳ್ಳಲಾಗುವ ಕಾರ್ಯಗಳ ಕುರಿತು ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸಬೇಕು ಎಂದರು.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ಸ್ಥಳಾಂತರ ಸೇರಿದಂತೆ ವಿವಿಧ ಹಕ್ಕು ಮತ್ತು ಆಕ್ಷೇಪಣೆ ಸಂಬಂಧದ ಅರ್ಜಿ ನಮೂನೆ ಸಲ್ಲಿಸಲು ಡಿಸೆಂಬರ್ 9 ರವರೆಗೂ ಕಾಲಾವಕಾಶ ನೀಡಲಾಗಿದೆ. ಕಳೆದ ಜನವರಿ 1ರಿಂದ ಅಕ್ಟೋಬರ್ 27 ರವರೆಗಿನ ಅಂಕಿ ಅಂಶದ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 46,906 ಯುವ ಮತದಾರರನ್ನು ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ. ಅ.27 ರಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಪ್ರಾರಂಭಗೊಂಡಿದ್ದು, 2006ರ ಡಿಸೆಂಬರ್ 31ರ ಒಳಗೆ ಜನಿಸಿದವರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅರ್ಹರಿದ್ದಾರೆ. ಅಧಿಕಾರಿಗಳು ಕೇವಲ 18 ವರ್ಷ ಪೂರ್ಣಗೊಂಡವರಿಗೆ ಆದ್ಯತೆ ನೀಡುವುದರ ಜೊತೆ ಜೊತೆಗೆ 17 ವರ್ಷ ಪೂರ್ಣಗೊಂಡವರನ್ನೂ ಕೂಡ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ನಮೂನೆ-06 ಅರ್ಜಿ ಪಡೆದು, ಪ್ರಕ್ರಿಯೆ ಪ್ರಾರಂಭಿಸಬೇಕು ಎಂದರು.

14,01,830 ಮತದಾರರುಜಿಲ್ಲಾಧಿಕಾರಿ ದಿವ್ಯಾಪ್ರಭು ಮಾತನಾಡಿ, ಪ್ರಕಟಿತ ಕರಡು ಮತದಾರರ ಪಟ್ಟಿಯನ್ವಯ ಜಿಲ್ಲೆಯಲ್ಲಿ 6,98,024-ಪುರುಷ, 7,03,728-ಮಹಿಳೆ, ಇತರೆ 78 ಸೇರಿದಂತೆ ಒಟ್ಟು 14,01,830 ಮತದಾರರಿದ್ದಾರೆ. ನಗರ-299, ಗ್ರಾಮೀಣ-1362 ಸೇರಿದಂತೆ ಒಟ್ಟು 1661 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 1,510 ಜನ ಶಿಕ್ಷಕರು, 151 ಜನ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಈ ಹಿಂದೆ ಒಬ್ಬರು ಬಿಎಲ್‍ಒ 2 ರಿಂದ 3 ಮತ ಗಟ್ಟೆ ನೋಡಿಕೊಳ್ಳುವ ಪರಿಸ್ಥಿತಿ ಇತ್ತು. ಆದರೆ ಈಗ ಪ್ರತಿ ಮತಗಟ್ಟೆಗೆ ಒಬ್ಬರಂತೆ ಬಿಎಲ್‍ಒ ನೇಮಿಸಲಾಗಿದೆ. ಕಳೆದ ಜೂನ್ 5ರಿಂದ ನ.18ರವರೆಗೆ ನಮೂನೆ 6,7,8 ಮತ್ತಿತರೆ ಒಟ್ಟು 79,582 ಅರ್ಜಿಗಳು ಸಲ್ಲಿಕೆಯಾಗಿದ್ದು, 59815 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಪ್ರಸಕ್ತ ಪರಿಷ್ಕರಣೆ ಕಾರ್ಯಕ್ರಮದಲ್ಲಿ 5,692 ಅರ್ಜಿಗಳು ಸಲ್ಲಿಕೆಯಾಗಿವೆ. ಕೇವಲ 18 ವರ್ಷ ತುಂಬಿದವರು ಮಾತ್ರವಲ್ಲದೆ, 17 ವರ್ಷ ಪೂರ್ಣಗೊಂಡವರಿಂದಲೂ ನಮೂನೆ-6 ಪಡೆದುಕೊಳ್ಳಲು ಬಿಎಲ್‍ಒ ಗಳಿಗೆ, ತಹಸೀಲ್ದಾರ್‌ಗೆ ಸೂಚನೆ ನೀಡಲಾಗಿದೆ ಎಂದರು. ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್ ಮಾತನಾಡಿ, ಯುವ ಜನರನ್ನು ಮತದಾರರ ಪಟ್ಟಿಗೆ ಹೆಚ್ಚು ಸೇರ್ಪಡೆಗೊಳಿಸಲು, ಜಿಲ್ಲೆಯ ಎಲ್ಲ ಪದವಿ, ಡಿಪ್ಲೋಮಾ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಸೇರಿದಂತೆ ವಿವಿಧ ಕಾಲೇಜುಗಳಲ್ಲಿ ವಿಶೇಷ ಅಭಿಯಾನವನ್ನು ಆರಂಭಿಸಲಾಗಿದೆ. ಯುವಜನರಿಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಸೇರಿದಂತೆ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಸೀಲ್ದಾರರು , ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ---------------------

ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಿ

ಜಿಲ್ಲೆಯ ಐಟಿಐ, ಪಾಲಿಟೆಕ್ನಿಕ್, ಇಂಜಿನಿಯರಿಂಗ್, ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಎಲ್ಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು ಹಾಗೂ ಆಯಾ ಕಾಲೇಜುಗಳ ಹಂತದಲ್ಲಿಯೇ ಅರ್ಜಿಗಳನ್ನು ವಿದ್ಯಾರ್ಥಿಗಳಿಂದ ಪಡೆಯಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಗೆ ಪ್ರಸಕ್ತ ಪರಿಷ್ಕರಣಾ ಅವಧಿಯಲ್ಲಿ 22 ಸಾವಿರ ಯುವ ಮತದಾರರನ್ನು ಸೇರ್ಪಡೆಗೊಳಿಸುವ ಗುರಿ ಇದ್ದು, ಇದನ್ನು ಸಾಧಿಸಲು ಆಯಾ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಹೀಗಾಗಿ ಗುರಿ ಸಾಧನೆಗೆ ಕೈಗೊಳ್ಳಲಾಗುವ ಕಾರ್ಯಕ್ರಮಗಳ ಕುರಿತು ಕ್ರಿಯಾ ಯೋಜನೆ ರೂಪಿಸಿ, ಕೂಡಲೆ ಸಲ್ಲಿಸಬೇಕು ಎಂದರು.