ಕನ್ನಡಪ್ರಭವಾರ್ತೆ ಮಡಿಕೇರಿ

ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಕೂಡಿಗೆ ವ್ಯಾಪ್ತಿಯಲ್ಲಿ 1 ಕೋಟಿ ರು. ವೆಚ್ಚದ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಿದರು.

ಜೇನುಕಲ್ಲು ಬೆಟ್ಟ ಭುವನ ಗಿರಿ ಗ್ರಾಮದಲ್ಲಿ 44.60 ವೆಚ್ಚದ ಕಾಂಕ್ರೀಟ್ ರಸ್ತೆ, ಸೀಗೆ ಹೊಸೂರು ಕಾಲೋನಿಯಲ್ಲಿ 25.5 ಲಕ್ಷ ರು. ವೆಚ್ಚದ ಕಾಂಕ್ರೀಟ್ ರಸ್ತೆ ಹಾಗೂ ಹುಣಸೆಪಾರೆ ಪರಿಶಿಷ್ಟ ಪಂಗಡದ ಕಾಲೋನಿಯ 30 ಲಕ್ಷ ರು.ಗಳ ಕಾಂಕ್ರೀಟ್ ಕಾಮಗಾರಿ ಉದ್ಘಾಟಿಸಿ ಮಾತನಾಡಿದರು.

ಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ನಾಗರಿಕರು ಹಲವಾರು ಬೇಡಿಕೆಗಳನ್ನು ಸಲ್ಲಿಸುತ್ತಿದ್ದು ಎಲ್ಲವನ್ನೂ ಹಂತ ಹಂತವಾಗಿ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಅಕ್ರಮ ಸಕ್ರಮ ಅರ್ಜಿದಾರರು ತಮ್ಮ ಜಮೀನು ಸಕ್ರಮಕ್ಕೆ ಸಂಬಂಧಿಸಿದಂತೆ ಯಾರಿಗೂ ಒಂದು ರುಪಾಯಿ ಕೂಡ ನೀಡಬಾರದು ಎಂದು ಮನವಿ ಮಾಡಿದರು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ವಲಯ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಅನಂತ್, ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ, ಮಾಜಿ ಪಂಚಾಯಿತಿ ಸದಸ್ಯರಾದ ಚಂದ್ರ,


ಗುತ್ತಿಗೆದಾರರಾದ ಕುಮಾರ್, ಸೇರಿದಂತೆ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.