ಸಾರಾಂಶ
ಬೇಲೂರು ತಾಲೂಕಿನ ಗೆಂಡೇಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಜಿಲ್ಲಾ ಕುರುಬ ಸಂಘದ ನಿರ್ದೇಶಕ ಬಿ ಎಂ ಸಂತೋ ಷ್ಅವರ ಹುಟ್ಟುಹಬ್ಬದ ಅಂಗವಾಗಿ ಗೆಳೆಯರ ಬಳಗ ವತಿಯಿಂದ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಿಸಲಾಯಿತು. ಸರ್ಕಾರಿ ಶಾಲೆಗಳೆಂದರೆ ಅಸಡ್ಡೆ ತೋರುವ ದಿನಮಾನದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದಂತಹ ವಿದ್ಯಾರ್ಥಿಗಳು ಐಪಿಎಸ್, ಐಎಎಸ್ ಅಧಿಕಾರಿಗಳಾಗಿದ್ದಾರೆ. ನಾಗರಿಕರು ಸರ್ಕಾರಿ ಶಾಲೆಗಳೆಂದು ಕೀಳಾಗಿ ಕಾಣಬಾರದು ಎಂದರು.
ಕನ್ನಡಪ್ರಭ ವಾರ್ತೆ ಬೇಲೂರು
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದಿರುವ ವ್ಯಕ್ತಿಗಳು ವಿವಿಧ ಕ್ಷೇತ್ರದಲ್ಲಿ ಗಮನ ಸೆಳೆಯುವ ಸಾಧನೆ ಮಾಡಿದ್ದು, ಸರ್ಕಾರಿ ಶಾಲೆಗಳ ಬಗ್ಗೆ ಅಸಡ್ಡೆ ಬೇಡ ಎಂದು ಕಾಂಗ್ರೆಸ್ ಮುಖಂಡ ಹಾಗೂ ಜಿಲ್ಲಾ ಕುರುಬ ಸಂಘದ ನಿರ್ದೇಶಕ ಬಿ ಎಂ ಸಂತೋಷ್ ಹೇಳಿದರು.ತಾಲೂಕಿನ ಗೆಂಡೇಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಅವರ ಹುಟ್ಟುಹಬ್ಬದ ಅಂಗವಾಗಿ ಗೆಳೆಯರ ಬಳಗ ವತಿಯಿಂದ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳೆಂದರೆ ಅಸಡ್ಡೆ ತೋರುವ ದಿನಮಾನದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದಂತಹ ವಿದ್ಯಾರ್ಥಿಗಳು ಐಪಿಎಸ್, ಐಎಎಸ್ ಅಧಿಕಾರಿಗಳಾಗಿದ್ದಾರೆ. ನಾಗರಿಕರು ಸರ್ಕಾರಿ ಶಾಲೆಗಳೆಂದು ಕೀಳಾಗಿ ಕಾಣಬಾರದು ಎಂದರು.
ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳು ಅನುಕೂಲವಿಲ್ಲದೆ ಶಿಕ್ಷಣವನ್ನು ನಿಲ್ಲಿಸಿರುತ್ತಾರೆ. ಯಾವುದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಿಕ್ಷವನ್ನು ಅರ್ಧಕ್ಕೆ ನಿಲ್ಲಿಸಬಾರದು. ಕಷ್ಟದಲ್ಲಿ ವಿದ್ಯಾಭ್ಯಾಸ ಮಾಡುವವರಿಗೆ ನಮ್ಮ ಬಿ ಸಿ ಮಂಜುನಾಥ್ ಕುಟುಂಬದ ವತಿಯಿಂದ ಆರ್ಥಿಕ ಸಹಾಯವನ್ನು ನೀಡಲು ಸಿದ್ಧರಿದ್ದೇವೆ. ಪೋಷಕರು ನಿಮ್ಮ ವಿದ್ಯೆಗಾಗಿ ತಮ್ಮ ದುಡಿಮೆಯ ಅರ್ಧ ಭಾಗವನ್ನು ಮೀಸಲು ಇಟ್ಟಿರುತ್ತಾರೆ. ಅವರ ಕನಸನ್ನು ನನಸು ಮಾಡುವ ಮೂಲಕ ಉತ್ತಮ ವಿದ್ಯಾರ್ಥಿಗಳಾಗಿ ಸಮಾಜದಲ್ಲಿ ಒಳ್ಳೆಯ ಹೆಸರು ಪಡೆದು ತಾವು ಓದಿದಂತ ಶಾಲೆ ಹಾಗೂ ಪೋಷಕರಿಗೆ ಹೆಸರು ತರಬೇಕು ಎಂದರು.