ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಅಧ್ಯಯನಕ್ಕೆ ಸೀಮಿತವಾಗದೇ ಕ್ರೀಡೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ನಿವೃತ್ತಿ ಪ್ರಥಮ ದರ್ಜೆ ಕಾಲೇಜ್ ದೈಹಿಕ ನಿರ್ದೇಶಕ, ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭದ ಸುವರ್ಣ ಕನ್ನಡಿಗ ಪ್ರಶಸ್ತಿ ಪುರಸ್ಕೃತ ಡಾ.ಅಶೋಕ ಜಾಧವ ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಅಧ್ಯಯನಕ್ಕೆ ಸೀಮಿತವಾಗದೇ ಕ್ರೀಡೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ನಿವೃತ್ತಿ ಪ್ರಥಮ ದರ್ಜೆ ಕಾಲೇಜ್ ದೈಹಿಕ ನಿರ್ದೇಶಕ, ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭದ ಸುವರ್ಣ ಕನ್ನಡಿಗ ಪ್ರಶಸ್ತಿ ಪುರಸ್ಕೃತ ಡಾ.ಅಶೋಕ ಜಾಧವ ಸಲಹೆ ನೀಡಿದರು.

ಎಆರ್‌ಜೆ ಇಂಟರ್‌ನ್ಯಾಷನಲ್‌ ಶಾಲೆಯ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳು ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುತ್ತವೆ. ಕ್ರೀಡೆಯಿಂದ ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ತಂಡದ ಮನೋಭಾವ ಬೆಳೆಸಿಕೊಳ್ಳಲು ಸಾಧ್ಯ ಎಂದರು.ಅಂತಾರಾಷ್ಷ್ರೀಯ ಕ್ರಿಕೆಟ್‌ ಆಟಗಾರ ರಾಜೇಶ ಕನ್ನೂರ ಮಾತನಾಡಿ, ಕ್ರೀಡೆಯು ಆರೋಗ್ಯಕರ ಜೀವನಕ್ಕೆ ಉತ್ತಮ ಮಾರ್ಗವಾಗಿದೆ ಎಂದು ತಿಳಿಸಿದರು.

ಶಾಲೆಯ ಅಧ್ಯಕ್ಷ ಶ್ರೀಶೈಲ ಹೊರ್ತಿಕರ ಮಾತನಾಡಿ, ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಏಕತೆ, ಸಹಕಾರ, ಪರಸ್ಪರ ಗೌರವ ಮತ್ತು ಸ್ಪರ್ಧಾತ್ಮಕ ಮನೋಭಾವ ಬೆಳೆಸುತ್ತವೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಎಂದರು.ಶಾಲೆಯ ಪ್ರಾಂಶುಪಾಲ ಧನರಾಜ್ ಬಸವಂತಿ ಮಾತನಾಡಿ, ಕ್ರೀಡೆ ಎನ್ನುವುದು ಕೇವಲ ಮನರಂಜನೆಯ ಚಟುವಟಿಕೆಯಲ್ಲ. ಅದು ಜೀವನದಲ್ಲಿ ಶಿಸ್ತು, ಸಂಯಮ, ಪರಿಶ್ರಮ ಮತ್ತು ಆತ್ಮವಿಶ್ವಾಸ ಕಲಿಸುವ ಅತ್ಯುತ್ತಮ ವೇದಿಕೆಯಾಗಿದೆ. ಕ್ರೀಡೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನಲ್ಲಿರುವ ಪ್ರತಿಭೆ ಗುರುತಿಸಿಕೊಂಡು ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕು. ಗೆಲುವೊಂದೇ ಮುಖ್ಯವಲ್ಲ, ಸ್ಪರ್ಧೆಯಲ್ಲಿ ಭಾಗವಹಿಸುವ ಉತ್ಸಾಹ ಮತ್ತು ಪ್ರಯತ್ನವೂ ಅಷ್ಟೇ ಮುಖ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಉಪಪ್ರಾಂಶುಪಾಲ ಶಾರುಖ್ ತಸೀಲ್ದಾರ್‌ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆ ಅನಾವರಣಗೊಳಿಸಬೇಕು. ಕ್ರೀಡೆಯು ಭವಿಷ್ಯದಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು.ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ದಿಲೀಪಕುಮಾರ್ ಚೌಧರಿ, ಭೀಮು ಹಟ್ಟಿ, ಬಾಪುರಾಯ ಮೆದೆಗಾರ, ವಿನಿತಾ ಬನ್ಸೋಡೆ, ವಿಠ್ಠಲ್ ಬನ್ಸೋಡೆ, ಕಲ್ಯಾಣಿ ಸಾಳುಂಖೆ, ವಿಠ್ಠಲ್ ನಡವಂಡಿ, ತಹಸೀನ್ ಮುಲ್ಲಾ, ಪ್ರದೀಪ್ ಕಿರಂಗಿ, ದೀಪಲಿ ಜಬಾ, ಸಮೀರ್ ಪಾನಪರೋಶ್‌, ಸುರೇಶ ವಾಘಮೋಡೆ, ಶಾಲೆಯ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ತಾಸಿನ್ ಮುಲ್ಲಾ ಕಾರ್ಯಕ್ರಮ ನಿರೂಪಿಸಿದರು. ಪ್ರದೀಪ್ ಕಿರಣಗಿ ಮತ್ತು ಸಮೀರ ಪಾನಪರೋಶ ಸ್ವಾಗತಿಸಿ, ವರದಿ ವಾಚನ ಮತ್ತು ಪ್ರತಿಜ್ಞಾ ವಿಧಿ ಭೋದಿಸಿದರು. ವಿನಿತಾ ಬನಸೋಡೆ ವಂದಿಸಿದರು.ಕ್ರೀಡೆಗಳು ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುತ್ತವೆ. ಕ್ರೀಡೆಯಿಂದ ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ತಂಡದ ಮನೋಭಾವ ಬೆಳೆಸಿಕೊಳ್ಳಲು ಸಾಧ್ಯ.

-ಡಾ.ಅಶೋಕ ಜಾಧವ,

ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭದ ಸುವರ್ಣ ಕನ್ನಡಿಗ ಪ್ರಶಸ್ತಿ ಪುರಸ್ಕೃತರು.