ಮಕ್ಕಳ ಮೇಲೆ ಒತ್ತಡ ಶೈಕ್ಷಣಿಕ ಒತ್ತಡ ಹಾಕದಿರಿ

| Published : Oct 30 2024, 12:37 AM IST

ಸಾರಾಂಶ

ಮಕ್ಕಳ ಮೇಲೆ ಪೋಷಕರು, ಶಿಕ್ಷಕರು ಶೈಕ್ಷಣಿಕ ಒತ್ತಡ ಹಾಕದೇ ಮಕ್ಕಳು ಕ್ರೀಡಾ ಚಟುವಟಿಕೆ, ಸಾಂಸ್ಕೃತಿ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಆಭಿವೃದ್ಧಿ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಕನ್ನಡಪ್ರಭ ವಾರ್ತೆ ರಿಪ್ಪನ್‍ಪೇಟೆ

ಮಕ್ಕಳ ಮೇಲೆ ಪೋಷಕರು, ಶಿಕ್ಷಕರು ಶೈಕ್ಷಣಿಕ ಒತ್ತಡ ಹಾಕದೇ ಮಕ್ಕಳು ಕ್ರೀಡಾ ಚಟುವಟಿಕೆ, ಸಾಂಸ್ಕೃತಿ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಆಭಿವೃದ್ಧಿ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.ಪಟ್ಟಣದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿ ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ಮಕ್ಕಳಲ್ಲಿ ಶಿಕ್ಷಣದೊಂದಿಗೆ ಕ್ರೀಡೆಯಲ್ಲಿಯೂ ಪ್ರತಿಭೆ ಗುರುತಿಸಿಕೊಳ್ಳುವ ಸಾಮರ್ಥ್ಯ ಇರುತ್ತದೆ. ಆದ್ದರಿಂದ ರಾಷ್ಟ್ರಿಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೆ ಏರಿಸಿದ್ದೀರಿ. ನಿಮ್ಮ ಈ ಸಾದನೆ ಮಕ್ಕಳ ವ್ಯಕ್ತಿತ್ವ ವಿಕಾಸನಕ್ಕೆ ಮಾರ್ಗದರ್ಶಿಯಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.ಕ್ರೀಡಾ ಸಾಧನೆ ಮಾಡಿರುವ ಮಕ್ಕಳನ್ನು ಸನ್ಮಾನಿಸಿ ಪ್ರೋತ್ಸಾಹಿಸುವುದರಿಂದ ಇನ್ನೊಬ್ಬರಿಗೆ ಪ್ರೇರಣೆಯಾಗುತ್ತದೆ. ತ್ಯಾಗ ಪರಿಶ್ರಮ ವಿನಿಯೋಗಿಸಿ ಸಾಧನೆ ಮೆರೆದಿದ್ದಾರೆ. ದೇಶದಲ್ಲಿ ಶಿಕ್ಷಣ ಕ್ರಾಂತಿ ನಡೆಯುತ್ತಿದ್ದು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳುವಂತಾಗಲಿ ಎಂದು ಶುಭ ಹಾರೈಸಿದರು.

ಶಾರದಾ ರಾಮಕೃಷ್ಣ ವಿದ್ಯಾಲಯದ ಸಂಸ್ಥಾಪಕ ಡಿ.ಎಂ. ದೇವರಾಜ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಂಡಿ ರಾಮಚಂದ್ರ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ, ಗ್ರಾಮ ಪಂಚಾಯಿತಿ ಸದಸ್ಯರಾದ ಡಿ. ಈ .ಮಧುಸೂಧನ್, ಎನ್. ಚಂದ್ರೇಶ್, ಸುಂದರೇಶ್, ಅಶೀಫ್ ಭಾಷಾ, ಸಾರಭಿ ಹೈದರಾಲಿಖಾನ್, ನಿರೂಪಮರಾಕೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣಪತಿ, ಕಲಾಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ರವೀಂದ್ರಕೆರೆಹಳ್ಳಿ, ನರಸಿಂಹ, ಪ್ರಕಾಶಪಾಲೇಕರ್, ಸಿ.ಆರ್.ಪಿ. ಮಂಜುನಾಥ, ಸರಿತಾ ದೇವರಾಜ್ ಇನ್ನಿತರರು ಹಾಜರಿದ್ದರು.ವಿದ್ಯಾರ್ಥಿಗಳಾದ ಆಶಿಕಾ ಸಂಗಡಿಗರು ಪ್ರಾರ್ಥಿಸಿದರು. ಡಿ.ಎಂ. ದೇವರಾಜ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಶಿಕ್ಷಕಿ ಕೆ.ಜಿ. ಶಾಲಿನಿ ನಿರೂಪಿಸಿದರು. ಮುಖ್ಯೋಪಾಧ್ಯಾಯ ರವಿ ವಂದಿಸಿದರು.