ಸಾರಾಂಶ
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಂಡರು.
ಉಡುಪಿಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಖಡಕ್ ಸೂಚನೆ
ಉಡುಪಿ: ಸರ್ಕಾರದ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಆಗಷ್ಟೇ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಶುಕ್ರವಾರ ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಸಾರ್ವಜನಿಕ ಸ್ನೇಹಿಯಾಗಿ, ಬದ್ಧತೆಯಿಂದ ಜನರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದರು.ರಾಜ್ಯದಲ್ಲಿ ಅತಿವೃಷ್ಟಿ ಹಾನಿ ಪರಿಹಾರಕ್ಕೆ ಸರ್ಕಾರ 8000 ಕೋಟಿ ರು.ಗಳ ಯೋಜನೆ ಸಿದ್ಧಪಡಿಸಿದೆ. ಇದರಲ್ಲಿ ಉಡುಪಿ ಜಿಲ್ಲೆಯ ಮಳೆಹಾನಿಗೆ ಪರಿಹಾರ ಸಿಗುತ್ತದೆ. ಅಧಿಕಾರಿಗಳು ಮಳೆ ಹಾನಿಯ ಬಗ್ಗೆ ಸರಿಯಾದ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.ಮನೆ ಅಥವಾ ಕಟ್ಟಡ ಕಟ್ಟುವ ಕೆಂಪು ಕಲ್ಲು ತೆಗೆಯಲು ಅರಣ್ಯ ಇಲಾಖೆ ಆಕ್ಷೇಪಣೆ ಸಲ್ಲಿಸಿದ್ದು, ಜಿಲ್ಲಾಧಿಕಾರಿ 3 ದಿನಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ಕೊಟ್ಟು ಅಗತ್ಯ ಕ್ರಮ ವಹಿಸಬೇಕು ಎಂದ ವಾರಾಹಿ ನೀರಾವರಿ ಯೋಜನೆಗೆ ಸ್ವಾಧೀನಪಡಿಸಲಾದ ಜಮೀನಿಗೆ ಪರಿಹಾರ ಬಿಡುಗಡೆಗೆ ಪ್ರಯತ್ನಿಸುವುದಾಗಿ ಹೇಳಿದರು. ಈ ಯೋಜನೆ ಡೀಮ್ಡ್ ಫಾರೆಸ್ಟ್ ಹಾಗೂ ಮೀಸಲು ಅರಣ್ಯ ಪ್ರದೇಶದಲ್ಲಿ ಹಾದು ಹೋಗುತ್ತಿರುವುದರಿಂದ ಅರಣ್ಯ ಇಲಾಖೆ ಅನುಮತಿ ನೀಡಬೇಕು ಎಂದು ಸೂಚನೆ ನೀಡಿದರು. ಬಂದರು ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿಯಾಗಿರುವ ಸಿಆರ್‌ಝಡ್ ನ ಅನುಮತಿಯ ಸಮಸ್ಯೆ ಪರಿಹಾರಕ್ಕೆ ರಾಜ್ಯ ಮಟ್ಟದ ಸಮಿತಿ ರಚಿಸಬೇಕಾಗಿದೆ, ಅದಕ್ಕೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವೆ ಹೇಳಿದರು.ಹೆರಿಗೆ ಸಂಖ್ಯೆ ಕಡಿಮೆ!ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಹಿಂದಿನ ವರ್ಷಕ್ಕಿಂತ ಈಗ ಹೆರಿಗೆ ಸಂಖ್ಯೆ ಕಡಿಮೆಯಾಗುತ್ತಿದೆ. ಇದಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆ ತಜ್ಞರ ಕೊರತೆಯೂ ಕಾರಣವಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.ಸಭೆಯಲ್ಲಿ ಶಾಸಕರಾದ ಸುನೀಲ್ ಕುಮಾರ್, ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ವಿಪ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ.ಧನಂಜಯ್ ಸರ್ಜಿ, ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ, ಜಿಪಂ ಸಿಇಒ ಪ್ರತೀಕ್ ಬಾಯಲ್, ಎಸ್ಪಿ ಹರಿರಾಮ್ ಶಂಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))