ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ: ಸಚಿವ ದರ್ಶನಾಪೂರ

| Published : Nov 21 2023, 12:45 AM IST

ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ: ಸಚಿವ ದರ್ಶನಾಪೂರ
Share this Article
  • FB
  • TW
  • Linkdin
  • Email

ಸಾರಾಂಶ

ಸಾಮಾಜಿಕ ನ್ಯಾಯದ ಅಡಿ ನಿಷ್ಠೆ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ, ಸೂರಿಲ್ಲದ ನಿಜವಾದ ಫಲಾನುಭವಿಗಳನ್ನು ಗುರುತಿಸಿ ನಿವೇಶನಗಳನ್ನು ಕಲ್ಪಿಸಬೇಕು. ಪಕ್ಷದ ಘನತೆಗೆ ಧಕ್ಕೆ ತರುವ ಕೆಲಸ ಮಾಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಅವರು ನೂತನ ನಗರ ಆಶ್ರಯ ಸಮಿತಿ ಅಧ್ಯಕ್ಷರಿಗೆ ಸೂಚಿಸಿದರು.ತಾಲೂಕಿನ ಭೀಮರಾಯನ ಗುಡಿಯಲ್ಲಿ 2ನೇ ಬಾರಿಗೆ ನಗರ ಆಶ್ರಯ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ವಸಂತಕುಮಾರ ಸುರಪುರಕರ್ ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿ, ಸನ್ಮಾನಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಶಹಾಪುರ

ಸಾಮಾಜಿಕ ನ್ಯಾಯದ ಅಡಿ ನಿಷ್ಠೆ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ, ಸೂರಿಲ್ಲದ ನಿಜವಾದ ಫಲಾನುಭವಿಗಳನ್ನು ಗುರುತಿಸಿ ನಿವೇಶನಗಳನ್ನು ಕಲ್ಪಿಸಬೇಕು. ಪಕ್ಷದ ಘನತೆಗೆ ಧಕ್ಕೆ ತರುವ ಕೆಲಸ ಮಾಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಅವರು ನೂತನ ನಗರ ಆಶ್ರಯ ಸಮಿತಿ ಅಧ್ಯಕ್ಷರಿಗೆ ಸೂಚಿಸಿದರು.

ತಾಲೂಕಿನ ಭೀಮರಾಯನ ಗುಡಿಯಲ್ಲಿ 2ನೇ ಬಾರಿಗೆ ನಗರ ಆಶ್ರಯ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ವಸಂತಕುಮಾರ ಸುರಪುರಕರ್ ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿ, ಸನ್ಮಾನಿಸಿ ಮಾತನಾಡಿದರು.

ವಸಂತಕುಮಾರ ಸಚಿವರ ಕೆಲವೇ ಕೆಲವು ಪರಮಾಪ್ತರಲ್ಲಿ ಒಬ್ಬರು. ಈ ಮೊದಲ ಬಾರಿಗೆ ನ.30 2020 ರಂದು ನಗರ ಆಶ್ರಯ ಸಮಿತಿ ಅಧ್ಯಕ್ಷರಾಗಿದ್ದಾಗ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದ್ದರು. ಅದರಂತೆ ಈಗ ಎರಡನೇ ಬಾರಿಯೂ ನಗರ ಆಶ್ರಯ ಸಮಿತಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ.

ಮರಿಗೌಡ ಹುಲ್ಕಲ್, ಶಿವಮಾಂತಪ್ಪ ಸಾಹು, ಬಸವರಾಜಪ್ಪಗೌಡ ತಂಗಡಗಿ, ವೆಂಕಟೇಶ ಆಲೂರು, ವಿಜಯಕುಮಾರ, ಶಾಂತಪ್ಪ ಕಟ್ಟಿಮನಿ, ರಾಮಣ್ಣ ಸಾದ್ಯಾಪುರ, ರವಿ ಎದುರು ಮನಿ, ಮಲ್ಲೇಶಿ ಮಮದಾಪುರ, ಮಲ್ಲಣ್ಣ ಗೋಗಿ, ಈರಣ್ಣಗೌಡ ಮಲ್ಲಾಬಾದಿ, ಬಸವರಾಗೇರಾ, ಸೇರಿ ಇತರರಿದ್ದರು.