ಕೋಲ್ಕತ್ತಾದಲ್ಲಿ ವೈದ್ಯರ ಮೇಲಿನ ಹೇಯಕೃತ್ಯ ಖಂಡಿಸಿ ವೈದ್ಯರ ಪ್ರತಿಭಟನೆ

| Published : Aug 18 2024, 01:50 AM IST

ಸಾರಾಂಶ

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ವೈದ್ಯರ ಮೇಲೆ ಸಾಕಷ್ಟು ಅಮಾನುಷ ಘಟನೆಗಳು ನಡೆಯುತ್ತಿವೆ. ಕೊಲ್ಕತ್ತಾದಲ್ಲಿ ರಾತ್ರಿ ವೇಳೆ ಕೆಲಸ ಮಾಡುತ್ತಿದ್ದ ವೈದ್ಯೆ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಹಾಗೂ ಅಮಾನುಷ ಕೊಲೆ ಮಾಡಿರುವ ಕ್ರಮವನ್ನು ಖಂಡಿಸಿದರು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಜೀವದ ಹಂಗು ತೊರೆದು ರೋಗಿಗಳ ಸೇವೆಯಲ್ಲಿ ತೊಡಗುವ ವೈದ್ಯರ ಮೇಲಿನ ಹೇಯಕೃತ್ಯಗಳನ್ನು ಆರೋಗ್ಯ ಸಿಬ್ಬಂದಿ ಎಂದಿಗೂ ಸಹಿಸುವುದಿಲ್ಲ ಎಂದು ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಶಶಿಧರ್ ಅಭಿಪ್ರಾಯಪಟ್ಟರು.

ಪಟ್ಟಣದ ದುಂಡಶೆಟ್ಟಿಲಕ್ಷ್ಮಮ್ಮ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆ ವೈದ್ಯೆ ಮೇಲೆ ದುಷ್ಕರ್ಮಿಗಳ ಅತ್ಯಾಚಾರ ಹಾಗೂ ಅಮಾನುಷ ಕೊಲೆ ಖಂಡಿಸಿ ಓಪಿಡಿ ಬಂದ್ ಮಾಡಿ ವೈದ್ಯರು ಪ್ರತಿಭಟನೆ ನಡೆಸಿದರು.

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ವೈದ್ಯರ ಮೇಲೆ ಸಾಕಷ್ಟು ಅಮಾನುಷ ಘಟನೆಗಳು ನಡೆಯುತ್ತಿವೆ. ಕೊಲ್ಕತ್ತಾದಲ್ಲಿ ರಾತ್ರಿ ವೇಳೆ ಕೆಲಸ ಮಾಡುತ್ತಿದ್ದ ವೈದ್ಯೆ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಹಾಗೂ ಅಮಾನುಷ ಕೊಲೆ ಮಾಡಿರುವ ಕ್ರಮವನ್ನು ಖಂಡಿಸಿದರು.

ಇದೇ ರೀತಿ ಹಲವು ಬಾರಿ ವೈದ್ಯರ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಿದ್ದರೂ ಸರ್ಕಾರಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ. ದುಷ್ಕರ್ಮಿಗಳ ಕೃತ್ಯಕ್ಕೆ ಬಲಿಯಾದ ವೈದ್ಯೆ ಆತ್ಮಕ್ಕೆ ಚಿರಶಾಂತಿ ದೊರಕಲಿ, ಸ್ವಾಸ್ಥ್ಯ ಸಮಾಜದಲ್ಲಿ ಇಂಥಹ ಘಟನೆಗಳು ಮರುಕಳಿಸದಿರಲಿ ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಡಾ.ಶ್ರೀಕಾಂತ್, ಡಾ.ಜ್ಞಾನೇಶ್ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.