ಸಾರಾಂಶ
ದೊಡ್ಡಬಳ್ಳಾಪುರ: ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ದೊಡ್ಡಬಳ್ಳಾಪುರ ತಾಲೂಕು ಕಚೇರಿಗೆ ಖುದ್ದು ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಸ್ಥಳದಲ್ಲೇ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.
ದೊಡ್ಡಬಳ್ಳಾಪುರ: ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ದೊಡ್ಡಬಳ್ಳಾಪುರ ತಾಲೂಕು ಕಚೇರಿಗೆ ಖುದ್ದು ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಸ್ಥಳದಲ್ಲೇ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.
ತಾಲೂಕು ಕಚೇರಿಯಲ್ಲಿ ಅಕ್ರಮಗಳ ಬಗ್ಗೆ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿದರು. ಈ ವೇಳೆ ಲೋಕಾಯುಕ್ತ ತುಮಕೂರು ವಿಭಾಗದ ಎಸ್ಪಿ ವಲೀ ಬಾಷಾ ಹಾಗೂ ಅಧಿಕಾರಿಗಳ ಮುಂದೆ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಸಾಕಷ್ಟು ದೂರು ಹೇಳಿಕೊಂಡರು. ಆಗ ಲೋಕಾಯುಕ್ತ ಪೊಲೀಸರು ಉಪ ಲೋಕಾಯುಕ್ತರಿಗೆ ತಾಲೂಕು ಕಚೇರಿಯಲ್ಲಿ ಕೇಳಿಬಂದ ದೂರುಗಳ ಕುರಿತು ವಿವರಿಸಿದರು.ಅಧಿಕಾರಿಗಳ ವಿರುದ್ಧ ಕೇಳಿಬಂದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಖುದ್ದು ಉಪ ಲೋಕಾಯುಕ್ತರಾದ ನ್ಯಾ.ಕೆ.ಎನ್.ಫಣೀಂದ್ರ, ಜಿಲ್ಲಾಧಿಕಾರಿ ಡಾ.ಶಿವಶಂಕರ್ ಆಗಮಿಸಿ ತಹಶೀಲ್ದಾರ್ ಕಚೇರಿಯಲ್ಲಿ ಅಹವಾಲು ಆಲಿಸಿದರು.
ಸಾಮಾಜಿಕ ಭದ್ರತಾ ಯೋಜನೆಗಳಾದ ವೃದ್ಧಾಪ್ಯ ವೇತನ, ವಿಧವಾ ವೇತನ, ಪಹಣಿ ಸಮಸ್ಯೆ ಗೋಮಾಳ ಜಮೀನು ಒತ್ತುವರಿ ಸೇರಿದಂತೆ ಹಲವು ದೂರುಗಳು ಕೇಳಿಬಂದವು. ಸಮಸ್ಯೆ ಆಲಿಸಿದ ನ್ಯಾಯಮೂರ್ತಿಗಳು, ಕಾಲಮಿತಿಯಲ್ಲಿ ಸಮಸ್ಯೆ ಬಗೆಹರಿಸುವಂತೆ ಹಾಗೂ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.20ಕೆಡಿಬಿಪಿ1-
ದೊಡ್ಡಬಳ್ಳಾಪುರ ತಾಲೂಕು ಕಚೇರಿಗೆ ಶನಿವಾರ ಭೇಟಿ ನೀಡಿದ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದರು.