ದೊಡ್ಡಬಳ್ಳಾಪುರ: ಮೋರಿ ಬಳಿ ಹೆಣ್ಣು ಮಗುವಿನ ಶವ ಪತ್ತೆ

| Published : Dec 05 2023, 01:30 AM IST

ದೊಡ್ಡಬಳ್ಳಾಪುರ: ಮೋರಿ ಬಳಿ ಹೆಣ್ಣು ಮಗುವಿನ ಶವ ಪತ್ತೆ
Share this Article
  • FB
  • TW
  • Linkdin
  • Email

ಸಾರಾಂಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೋರಿಯೊಂದರ ಬಳಿ ಸೋಮವಾರ ಸುಮಾರು 2 ವರ್ಷ ವಯಸ್ಸಿನ ಹೆಣ್ಣು ಮಗುವಿನ ಶವ ಪತ್ತೆಯಾಗಿದೆ.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೋರಿಯೊಂದರ ಬಳಿ ಸೋಮವಾರ ಸುಮಾರು 2 ವರ್ಷ ವಯಸ್ಸಿನ ಹೆಣ್ಣು ಮಗುವಿನ ಶವ ಪತ್ತೆಯಾಗಿದೆ.

ದೊಡ್ಡಬಳ್ಳಾಪುರ-ಬೆಂಗಳೂರು ರಾಜ್ಯ ಹೆದ್ದಾರಿಯ ಜವಾಹರ್‌ ನವೋದಯ ವಿದ್ಯಾಲಯ ಮತ್ತು ಬಾಶೆಟ್ಟಿಹಳ್ಳಿ ಗ್ರಾಮದ ನಡುವೆ ಇರುವ ಮೋರಿಯೊಂದರ ಬಳಿ ಶವ ಪತ್ತೆಯಾಗಿದ್ದು ಅನೇಕ ಅನುಮಾನಗಳಿಗೆ ಕಾರಣವಾಗಿದೆ.

ಮಗುವಿನ ಬಗ್ಗೆ ಈವರೆಗೆ ಮಾಹಿತಿ ಲಭ್ಯವಾಗಿಲ್ಲ. ವಾರಸುದಾರ ಪತ್ತೆಗೆ ಪೊಲೀಸರು ಪ್ರಯತ್ನ ನಡೆಸಿದ್ದು, ಶವವನ್ನು ಶವಾಗಾರದಲ್ಲಿ ಇಡಲಾಗಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.