ದೊಡ್ಡಬಳ್ಳಾಪುರ: ಹೊಸಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಹೊನ್ನಮ್ಮ

| Published : Nov 10 2025, 01:15 AM IST

ದೊಡ್ಡಬಳ್ಳಾಪುರ: ಹೊಸಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಹೊನ್ನಮ್ಮ
Share this Article
  • FB
  • TW
  • Linkdin
  • Email

ಸಾರಾಂಶ

ದೊಡ್ಡಬಳ್ಳಾಪುರ: ಗ್ರಾಪಂ ಅಧ್ಯಕ್ಷೆಯಾಗಿದ್ದ ನಾಗರತ್ನಮ್ಮ ಲಕ್ಷ್ಮೀನಾರಾಯಣಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಹೊಸಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹೊನ್ನಮ್ಮ ಚಿಕ್ಕಪಾಪಯ್ಯ ಆಯ್ಕೆಯಾಗಿದ್ದಾರೆ.

ದೊಡ್ಡಬಳ್ಳಾಪುರ: ಗ್ರಾಪಂ ಅಧ್ಯಕ್ಷೆಯಾಗಿದ್ದ ನಾಗರತ್ನಮ್ಮ ಲಕ್ಷ್ಮೀನಾರಾಯಣಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಹೊಸಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹೊನ್ನಮ್ಮ ಚಿಕ್ಕಪಾಪಯ್ಯ ಆಯ್ಕೆಯಾಗಿದ್ದಾರೆ.

24 ಸದಸ್ಯತ್ವ ಬಲದ ಹೊಸಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾಧಿಕಾರಿ ಕೃಷಿ ಇಲಾಖೆಯ ರಾಘವೇಂದ್ರ ನೇತೃತ್ವದಲ್ಲಿ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ಈ ವೇಳೆ ಬಿಜೆಪಿ ಬೆಂಬಲಿತ ಹೊನ್ನಮ್ಮ ಚಿಕ್ಕಪಾಪಯ್ಯ ಹಾಗೂ ಕಾಂಗ್ರೆಸ್ ಬೆಂಬಲಿತ ನಾಗವೇಣಿ ನರಸಿಂಹಮೂರ್ತಿ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಓರ್ವ ಸದಸ್ಯ ಗೈರಾಗಿ 23 ಸದಸ್ಯರು ಮತದಾನ ಮಾಡಿದರು.

ಬಳಿಕ ನಡೆದ ಮತ ಎಣಿಕೆ ಕಾರ್ಯದಲ್ಲಿ ಕಾಂಗ್ರೆಸ್ ಬೆಂಬಲಿತ ನಾಗವೇಣಿ ನರಸಿಂಹ ಮೂರ್ತಿ 8 ಮತಗಳನ್ನು ಪಡೆದರೆ, ಬಿಜೆಪಿ ಬೆಂಬಲಿತ ಹೊನ್ನಮ್ಮ ಚಿಕ್ಕಪಾಪಯ್ಯ ಅವರು 15 ಮತ ಪಡೆದು7 ಮತಗಳ ಅಂತರದಿಂದ ಅಧ್ಯಕ್ಷರಾಗಿ ಆಯ್ಕೆಯಾದರು. ನೂತನ ಅಧ್ಯಕ್ಷರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹೆಚ್.ಎಸ್. ಅಶ್ವತ್ಥ್‌ ನಾರಾಯಣಕುಮಾರ್, ಮುಖಂಡರಾದ ಲಕ್ಷ್ಮೀನಾರಾಯಣಪ್ಪ, ತಿಮ್ಮೇಗೌಡ, ಪ್ರಕಾಶ್ ರೆಡ್ಡಿ, ಮಂಜುನಾಥ್, ರಂಗಾಚಾರಿ, ಪ್ರಭು, ಅಶ್ವಥ್ ನಾರಾಯಣ, ಬಿಜೆಪಿ ಬೆಂಬಲಿತ ಸದಸ್ಯರು ಅಭಿನಂದನೆ ಸಲ್ಲಿಸಿದರು.

8ಕೆಡಿಬಿಪಿ6- ದೊಡ್ಡಬಳ್ಳಾಪುರ ಹೊಸಹಳ್ಳಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹೊನ್ನಮ್ಮ ಅವರನ್ನು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹೆಚ್.ಎಸ್. ಅಶ್ವತ್ಥ್‌ ನಾರಾಯಣಕುಮಾರ್, ಮುಖಂಡರಾದ ಲಕ್ಷ್ಮೀನಾರಾಯಣಪ್ಪ, ತಿಮ್ಮೇಗೌಡ, ಪ್ರಕಾಶ್ ರೆಡ್ಡಿ, ಮಂಜುನಾಥ್, ರಂಗಾಚಾರಿ, ಪ್ರಭು, ಅಶ್ವಥ್ ನಾರಾಯಣ ಅಭಿನಂದಿಸಿದರು.