ಸಾರಾಂಶ
ತಾಲೂಕಿನ ದೊಡ್ಡಗುಣಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ನೇರಳೆಕೆರೆಯ ನರಸಿಂಹಮೂರ್ತಿ ಅವಿರೋಧವಾಗಿ ಆಯ್ಕೆಯಾದರು.
ಕನ್ನಡಪ್ರಭ ವಾರ್ತೆ ಗುಬ್ಬಿ
ತಾಲೂಕಿನ ದೊಡ್ಡಗುಣಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ನೇರಳೆಕೆರೆಯ ನರಸಿಂಹಮೂರ್ತಿ ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಮಾತನಾಡಿದ ನರಸಿಂಹಮೂರ್ತಿ, ಶಾಸಕರ ಸಹಕಾರದಿಂದ ಹಾಗೂ ಎಲ್ಲಾ ಸದಸ್ಯರ ಸಹಕಾರದಿಂದ ಅವಿರೋಧವಾಗಿ ಆಯ್ಕೆಯಾಗಿದ್ದು ಐದು ತಿಂಗಳ ಅವಧಿಯಲ್ಲಿ ಹೆಚ್ಚಿನ ರೀತಿಯ ಕೆಲಸವನ್ನು ಮಾಡುತ್ತೇನೆ ಎಂದು ತಿಳಿಸಿದರು.ದಲಿತ ಮುಖಂಡ ಕೊಡಿಯಾಲ ಮಹದೇವ ಮಾತನಾಡಿ ದಲಿತ ಸಮುದಾಯದ ನರಸಿಂಹಮೂರ್ತಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ನಮ್ಮ ಸಮುದಾಯಕ್ಕೆ ಹೆಚ್ಚಿನ ಎಲ್ಲರ ಸಹಕಾರ ಮತ್ತು ಎಲ್ಲ ಸಮುದಾಯಗಳ ಏಳಿಗೆಗೆ ಅವರು ದುಡಿಯಲಿ ಎಂದು ಹಾರೈಸಿದರು.
ಸದಸ್ಯ ರೇಣುಕಾ ಪ್ರಸಾದ್ ಮಾತನಾಡಿ ಶಾಸಕರ ಸಂಸದರ ಹಾಗೂ ಎಲ್ಲ ಸದಸ್ಯರ ಸಹಕಾರವನ್ನು ಪಡೆದುಕೊಂಡು ಗ್ರಾಮ ಪಂಚಾಯಿತಿಯನ್ನು ಉಳಿದಿರುವ ಅವಧಿಗೆ ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಜಗನ್ನಾಥ್, ಮುಖಂಡ ಚೇಳೂರು ಶಿವಾನಂಜಯ್ಯ, ಸೇರಿದಂತೆ ಹಲವು ದಲಿತ ಮುಖಂಡರು ಗ್ರಾಮ ಪಂಚಾಯತಿಯ ಉಪಾಧ್ಯಕ್ಷರು ಸದಸ್ಯರುಗಳು ಗ್ರಾಮಸ್ಥರು ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಅಭಿನಂದನೆ ಸಲ್ಲಿಸಿದರು. ಚುನಾವಣಾಧಿಕಾರಿಯಾಗಿ ಜಗನ್ನಾಥಗೌಡ ಅಭಿವೃದ್ಧಿ ಅಧಿಕಾರಿಯ ರಂಗರಾಜು ಪರಮೇಶ ಸೇರಿದಂತೆ ಇನ್ನಿತರರು ಇದ್ದರು.