ಬೀದಿ ನಾಯಿಗಳಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ತಪ್ಪಿಸಲು ಹಾಗೂ ಬೀದಿ ನಾಯಿಗಳ ಪೋಷಣೆಗಾಗಿ ವ್ಯವಸ್ಥೆ ಕೈಗೊಳ್ಳುವ ನಿಟ್ಟಿನಲ್ಲಿ ಪುತ್ತೂರಿನಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಡಾಗ್ ಶೆಲ್ಟರ್ ನಿರ್ಮಾಣ ಮಾಡಲಾಗುವುದು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಪುತ್ತೂರು : ಬೀದಿ ನಾಯಿಗಳಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ತಪ್ಪಿಸಲು ಹಾಗೂ ಬೀದಿ ನಾಯಿಗಳ ಪೋಷಣೆಗಾಗಿ ವ್ಯವಸ್ಥೆ ಕೈಗೊಳ್ಳುವ ನಿಟ್ಟಿನಲ್ಲಿ ಪುತ್ತೂರಿನಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಡಾಗ್ ಶೆಲ್ಟರ್ ನಿರ್ಮಾಣ ಮಾಡಲಾಗುವುದು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಅವರು ಶನಿವಾರ ಮಾದ್ಯಮದೊಂದಿಗೆ ಮಾತನಾಡಿ, ಜನರ ಸುರಕ್ಷತೆ ಮತ್ತು ಬೀದಿ ನಾಯಿಗಳ ಸುರಕ್ಷತೆ ಇವೆರಡನ್ನೂ ಮನಗಂಡು ಪುತ್ತೂರಿನಲ್ಲಿ ಡಾಗ್ ಶೆಲ್ಟರ್ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ೨.೫ ಎಕ್ರೆ ಜಾಗವನ್ನು ನೋಟಿಫೈ ಮಾಡಲಾಗಿದೆ ಎಂದರು.ಒಂದು ತಿಂಗಳ ಒಳಗಾಗಿ ಫಾರೆಸ್ಟ್ ಪಕ್ಕದಲ್ಲಿ ಸಾರ್ವಜನಿಕರ ಅಭಿಪ್ರಾಯ ಪಡೆದುಕೊಂಡು ಡಾಗ್ ಶೆಲ್ಟರ್ ನಿರ್ಮಾಣ ಮಾಡುತ್ತೇವೆ. ಪುತ್ತೂರಿನಲ್ಕಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಡಾಗ್ ಶೆಲ್ಟರ್ ಇದಾಗಲಿದ್ದು, ಇದನ್ನು ಮಾದರಿ ಶೆಲ್ಟರ್ ಆಗಿ ರೂಪಿಸುವ ಪ್ರಯತ್ನ ನಡೆಸಲಾಗುವುದು ಎಂದು ತಿಳಿಸಿದ್ದಾರೆ.