ಸಾರಾಂಶ
ಕಾರವಾರ: ತಾಲೂಕಿನ ದೇವಬಾಗ ಮಾವಳ ಕಡಲ ತೀರದಲ್ಲಿ ಡಾಲ್ಫಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.
ಇಂಡೋ ಫೆಸಿಫಿಕ್ ಹಂಪ್ ಬ್ಯಾಕ್ ಪ್ರಭೇದಕ್ಕೆ ಸೇರಿದ ಗಂಡು ಡಾಲ್ಫಿನ್ ಆಗಿದ್ದು, ಕಳೆಬರವು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿತ್ತು. ಅರಣ್ಯ ಇಲಾಖೆಯ ಅಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿದ್ದು, ಮೃತ ಡಾಲ್ಫಿನ್ 2.05 ಮೀ. ಉದ್ದವಿದ್ದು, ಹೊಟ್ಟೆಯಲ್ಲಿ ಯಾವುದೇ ತರಹದ ಪ್ಲಾಸ್ಟಿಕ್ ಕಂಡುಬಂದಿಲ್ಲ. ಕೊಳೆತ ಸ್ಥಿತಿಯಲ್ಲಿದ್ದ ಕಾರಣ ಸಾವಿನ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ.ಮದುವೆ ವಿಚಾರದಲ್ಲಿ ನೊಂದು ಯುವಕ ಆತ್ಮಹತ್ಯೆಶಿರಸಿ: ಮದುವೆಯಾಗಿಲ್ಲ ಎಂದು ಮಾನಸಿಕವಾಗಿ ನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.ಇಲ್ಲಿನ ಕಸ್ತೂರಬಾನಗರದ ಇಬ್ರಾಹಿಂ ಬಾಷಾಸಾಬ ಮಲ್ಲಕ್ಕನವರ(25) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಈತ ಮಹಿಳೆಯೊಬ್ಬಳನ್ನು ಪ್ರೀತಿಸುತ್ತಿದ್ದ. ಆಕೆಯನ್ನು ಮದುವೆಯಾಗುವ ವಿಚಾರ ಮಾಡುತ್ತಿದ್ದ. ಆದರೆ ಆಕೆಗೆ ತನ್ನ ಗಂಡನಿಂದ ವಿಚ್ಛೇದನ ಸಿಗದೇ ತನ್ನ ಮದುವೆ ವಿಳಂಬವಾಗುತ್ತಿರುವುದನ್ನು ಮನಸ್ಸಿಗೆ ಹಚ್ಚಿಕೊಂಡಿದ್ದ. ಇದರಿಂದ ಕೊರಗಿ ಜೂ. 24ರಂದು ರಾತ್ರಿ 11.30 ಗಂಟೆಯ ಸುಮಾರಿಗೆ ತನ್ನ ಮಲಗುವ ಕೋಣೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಆಗ ಕುಟುಂಬಸ್ಥರು ಆತನನ್ನು ಚಿಕಿತ್ಸೆಗೆ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾನೆ. ಈತನ ತಾಯಿ ಸಾಹೀರಬಾನು ಬಾಷಾಸಾಬ ಮಲ್ಲಕ್ಕನವರ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.