ಡಾಲ್ಫಿನ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಬೇಸಿಗೆ ಹಾಕಿ ಶಿಬಿರವನ್ನು ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಟರ್ಫ್ ಮೈದಾನದಲ್ಲಿ ಹಿರಿಯ ಹಾಕಿ ಆಟಗಾರ ಶಶಿಧರ್ ಉದ್ಘಾಟಿಸಿದರು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಡಾಲ್ಫಿನ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಬೇಸಿಗೆ ಹಾಕಿ ಶಿಬಿರವನ್ನು ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಟರ್ಫ್ ಮೈದಾನದಲ್ಲಿ ಹಿರಿಯ ಹಾಕಿ ಆಟಗಾರ ಶಶಿಧರ್ ಉದ್ಘಾಟಿಸಿದರು.ಸಂಸ್ಥೆಯಿಂದಲೇ ತರಬೇತಿ ಪಡೆದು ಹೊರ ಜಿಲ್ಲೆಯಲ್ಲಿ ನೆಲೆ ಕಂಡಿರುವ ಕ್ರೀಡಾಪಟುಗಳು ತರಬೇತಿ ನೀಡಲು ಮುಂದೆ ಬಂದಿರುವುದುರಿಂದ ಮಕ್ಕಳಿಗೆ ಹೆಚ್ಚಿನ ಸಹಕಾರಿಯಾಗಲಿದೆ ಎಂದರು.
ಪಿಎಲ್‌ಡಿ ಬ್ಯಾಂಕ್ ವ್ಯವಸ್ಥಾಪಕ ಶಿವಕುಮಾರ್ ಮಾತನಾಡಿ, ಇಂದು ತಮ್ಮ ಬಿಡುವಿಲ್ಲದ ಕೆಲಸದಲ್ಲಿ ಯಾರೂ ಕ್ರೀಡೆಯತ್ತ ಬರುತ್ತಿಲ್ಲ ಎಂದರು.ಡಾಲ್ಫಿನ್ಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಬಿ.ಆರ್. ಮಹೇಶ್, ಕಾರ್‍ಯದರ್ಶಿ ಬಿ.ಎನ್. ಮಂಜುನಾಥ್, ಬ್ಲೂ ಸ್ಟಾರ್ ಹಾಕಿ ಸಂಸ್ಥೆಯ ಹಿರಿಯ ಆಟಗಾರರಾದ ಹಾಲಪ್ಪ, ಸ್ಪೋರ್ಟ್ಸ್ ಕ್ಲಬ್ ಸ್ಥಾಪಕ ಅಧ್ಯಕ್ಷ ಅಶೋಕ್, ಮಾಜಿ ಅಧ್ಯಕ್ಷ ಮಹೇಶ್, ಓಂಪ್ರಕಾಶ್ ಇದ್ದರು.