ಸಾರಾಂಶ
ರಾಯಚೂರಿನ ಆಜಾದ್ ನಗರದಲ್ಲಿ ಡೆಂಘೀ ಜ್ವರ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿ ವಾರಕ್ಕೆ ಒಂದು ದಿನ-ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಮಾಡುವ ದಿನದ 2ನೇ ಕಾರ್ಯಕ್ರಮವನ್ನು ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ರಾಯಚೂರು
ಡೆಂಘೀ ಜ್ವರವು ಸೊಳ್ಳೆಯಿಂದ ಹರಡುವ ಕಾಯಿಲೆಯಾಗಿದ್ದು, ಈಡಿಸ್ ಜಾತಿ ಸೊಳ್ಳೆಗಳ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾಗಿದೆ. ಸಾರ್ವಜನಿಕರು ಡೆಂಘೀ ಜ್ವರದ ಕುರಿತು ಭಯ ಹಾಗೂ ಆತಂಕಕ್ಕೆ ಒಳಗಾಗದೇ ಮುಂಜಾಗ್ರತಾ ಕ್ರಮ ವಹಿಸಿಸಿಕೊಳ್ಳುವುದರ ಮುಖಾಂತರ ಡೆಂಘೀ ಜ್ವರದಿಂದ ಸಂರಕ್ಷಿಸಿಕೊಳ್ಳಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಸುರೇಂದ್ರ ಬಾಬು ಹೇಳಿದರು.ಸ್ಥಳೀಯ ಆಜಾದ್ ನಗರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡೆಂಘೀ ಜ್ವರ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿ ವಾರಕ್ಕೆ ಒಂದು ದಿನ-ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಮಾಡುವ ದಿನದ 2ನೇ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಕ್ರವಾರ ಮಾತನಾಡಿದರು. ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಮಾಡುವ ಜಾಗೃತಿ ಮೂಡಿಸುವ ಸಲುವಾಗಿ ತಮ್ಮ ಮನೆಗೆ ಅಥವಾ ಬಡಾವಣೆಗೆ ಬಂದಾಗ ಸಾರ್ವಜನಿಕರು ಇಲಾಖೆಗೆ ಸಹಕಾರ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ, ವಿವಿಧ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತೆಯರು ಸೇರಿ ಇತರರು ಇದ್ದರು.