(ಈ ಸುದ್ದಿ ತೆಗೆದುಕೊಳ್ಳುವುದು ಬೇಡ)ಮತ ಚಲಾಯಿಸದೆ ಹಕ್ಕು ವಂಚಿವರಾಗಬೇಡಿ

| Published : Jan 26 2025, 01:32 AM IST

(ಈ ಸುದ್ದಿ ತೆಗೆದುಕೊಳ್ಳುವುದು ಬೇಡ)ಮತ ಚಲಾಯಿಸದೆ ಹಕ್ಕು ವಂಚಿವರಾಗಬೇಡಿ
Share this Article
  • FB
  • TW
  • Linkdin
  • Email

ಸಾರಾಂಶ

ದೊಡ್ಡಬಳ್ಳಾಪುರ: 18 ವರ್ಷ ತುಂಬಿದ ಪ್ರತಿಯೊಬ್ಬ ಪ್ರಜೆಯು ನಿರ್ಭೀತರಾಗಿ, ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಪ್ರಜಾಪ್ರಭುತ್ವದ ಉಳಿವಿಗಾಗಿ ಕಡ್ಡಾಯವಾಗಿ ಮತದಾನ ಮಾಡುವದು ಅವಶ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ ಭೋಲಾ ಪಂಡಿತ್‌ ಹೇಳಿದರು.

ದೊಡ್ಡಬಳ್ಳಾಪುರ: 18 ವರ್ಷ ತುಂಬಿದ ಪ್ರತಿಯೊಬ್ಬ ಪ್ರಜೆಯು ನಿರ್ಭೀತರಾಗಿ, ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಪ್ರಜಾಪ್ರಭುತ್ವದ ಉಳಿವಿಗಾಗಿ ಕಡ್ಡಾಯವಾಗಿ ಮತದಾನ ಮಾಡುವದು ಅವಶ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ ಭೋಲಾ ಪಂಡಿತ್‌ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ 2024ರ ಮತದಾರರ ಪಟ್ಟಿ ಪ್ರಕಾರ 27 ಕೋಟಿಯಷ್ಟು ಯುವ ಮತದಾರರು ಇದ್ದಾರೆ. ಭಾರತ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ. ನಮ್ಮ ಒಂದು ಮತದಿಂದ ದೇಶಕ್ಕೆ ಉತ್ತಮ ನಾಯಕನನ್ನು ಆಯ್ಕೆ ಮಾಡಿಕೊಳ್ಳುವ ಶಕ್ತಿವಿದೆ. ಯಾರು ಮತ ಚಲಾಯಿಸದೆ ಅಮೂಲ್ಯವಾದ ಹಕ್ಕಿನಿಂದ ವಂಚಿವರಾಗಬಾರದು ಎಂದರು.

ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್‌ ಮಾತನಾಡಿ, ಜಿಲ್ಲೆಯ 18 ವರ್ಷ ಮೇಲ್ಪಟ್ಟ ಅರ್ಹ ಪ್ರಜೆಗಳು ಮತದಾರರಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಯಾಗುವ ಜೊತೆಗೆ ಪ್ರತಿ ಚುನಾವಣೆಯಲ್ಲಿ ಭಾಗಿಯಾಗಿ ಮತ ಚಲಾಯಿಸಬೇಕು. ಈ ದಿನದ ಉದ್ದೇಶ ಮತದಾನ ಬಗ್ಗೆ ತಿಳುವಳಿಕೆ, ಜಾಗೃತಿ ನೀಡುವುದು. ಯುವ ಮತದಾರರ ನೋಂದಾಯಿಸಲು ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಮಟ್ಟದಲ್ಲಿ ಸಾಕಷ್ಟು ಕಾರ್ಯಕ್ರಮ ಮಾಡಲಾಗಿದೆ ಎಂದು ಹೇಳಿದರು.

ಮತದಾನವನ್ನು ನಿರ್ಭಿತಿಯಿಂದ ಯಾವುದೇ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು. ಮತದಾನವನ್ನು ಹಬ್ಬದಂತೆ ಯುವ ಜನತೆ ಸಹ ಉತ್ಸುಕರಾಗಿ ಮತದಾನದ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ಶಾಲಾ ಮಕ್ಕಳು ತಮ್ಮ ಪೋಷಕರು ಹಾಗೂ ಸುತ್ತಮುತ್ತಲಿನ ಜನರಲ್ಲಿ ಮತ ಚಲಾಯಿಸುವ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು.

ಜಿಪಂ ಸಿಇಒ ಡಾ.ಕೆ.ಎನ್ ಅನುರಾಧ ಮಾತನಾಡಿ, ಎಲ್ಲಾ ಪ್ರಜೆಗಳಿಗೆ ಮತದಾನ ಹಕ್ಕು ಮಾತ್ರವಲ್ಲ, ಅದು ಜವಾಬ್ದಾರಿ. ಜಿಲ್ಲೆಯಲ್ಲಿನ 18 ವರ್ಷ ತುಂಬಿದ ಎಲ್ಲಾ ಪ್ರಜೆಗಳು ಕೂಡ ಮತದಾರರಾಗಿ ನೊಂದಣಿ ಮಾಡಿಸಿಕೊಂಡು ಮತದಾನ ಮಾಡಬೇಕು. ಪ್ರತಿಯೊಂದು ಬಾರಿ ಒಂದೊಂದು ಧ್ಯೇಯ ವಾಕ್ಯದೊಂದಿಗೆ ಕಾರ್ಯಕ್ರಮ ಆಚರಿಸಲಾಗುತ್ತದೆ. ಈ ಬಾರಿ ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುತ್ತೇನೆ ಎಂಬ ಧ್ಯೇಯ ವಾಕ್ಯ ನೀಡಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ 9 ಲಕ್ಚದ 5 ಸಾವಿರ ರಷ್ಟು ಮತದಾರರು ಇದ್ದು, ಯುವ ಮತದಾರರು ಹೆಚ್ಚಾಗಿ ಮತದಾನದಲ್ಲಿ ಪಾಲ್ಗೊಳ್ಳಬೇಕು. ಸ್ವೀಪ್ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನದ ಪ್ರಮಾಣ ಮತ್ತಷ್ಟು ಹೆಚ್ಚಿಸಲು ಮತದಾರರಲ್ಲಿ ಪ್ರೇರೇಪಿಸಲಾಗುತ್ತಿದೆ. ಜಿಲ್ಲೆಯ ಸ್ವೀಪ್ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ ಅಧಿಕಾರಿಗಳು ಕೆಲಸ ಮಾಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಹೊಸದಾಗಿ ನೊಂದಣಿಯಾದ ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಮತದಾನದ ಜಾಗೃತಿ ಬಗ್ಗೆ ನಡೆಸಲಾದ ಕಿರುಚಿತ್ರ, ಪ್ರಬಂಧ, ರಸಪ್ರಶ್ನೆ ಸೇರಿದಂತೆ ಸಾಕಷ್ಟು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್‌ ಬೋಧಿಸಿದರು. ಅಪರ ಜಿಲ್ಲಾಧಿಕಾರಿ ಅಮರೇಶ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬೈಲಾಂಜನಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.ಫೋಟೋ-25ಕೆಡಿಬಿಪಿ1-

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಶನಿವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ ಭೋಲಾ ಪಂಡಿತ್‌ ಉದ್ಘಾಟಸಿದರು. ಡಿಸಿ ಡಾ. ಶಿವಶಂಕರ್‌, ಜಿಪಂ ಸಿಇಒ ಡಾ. ಅನುರಾಧ ಇತರರಿದ್ದರು.