ಸಾರಾಂಶ
ರಾಜಕೀಯದಲ್ಲಿ ಮತ್ತೊಮ್ಮೆ ಪುನರ್ಜನ್ಮ ನೀಡಿದ ಬಾಗಲಕೋಟೆ ಜಿಲ್ಲೆಯನ್ನು ಗಮನದಲ್ಲಿಟ್ಟುಕೊಂಡು ಬರುವ ರಾಜ್ಯ ಬಜೆಟ್‌ನಲ್ಲಿ ಹೆಚ್ಚಿನ ಅನುದಾನವನ್ನು ಜಿಲ್ಲೆಗೆ ನೀಡಬೇಕು. ವೈದ್ಯಕೀಯ ಕಾಲೇಜು ಆರಂಭಿಸುವುದು, ಸಂತ್ರಸ್ತರಿಗೆ ಪರಿಹಾರ ನೀಡುವುದು, ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಒಂದು ವೇಳೆ ಸಿಎಂ ಜಿಲ್ಲೆಗೆ ಆದ್ಯತೆ ಕೊಡದಿದ್ದರೆ ರಾಜಕೀಯ ಪುನರ್ಜನ್ಮ ನೀಡಿದ ಜಿಲ್ಲೆಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಹೇಳಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ರಾಜಕೀಯದಲ್ಲಿ ಮತ್ತೊಮ್ಮೆ ಪುನರ್ಜನ್ಮ ನೀಡಿದ ಬಾಗಲಕೋಟೆ ಜಿಲ್ಲೆಯನ್ನು ಗಮನದಲ್ಲಿಟ್ಟುಕೊಂಡು ಬರುವ ರಾಜ್ಯ ಬಜೆಟ್‌ನಲ್ಲಿ ಹೆಚ್ಚಿನ ಅನುದಾನವನ್ನು ಜಿಲ್ಲೆಗೆ ನೀಡಬೇಕು. ವೈದ್ಯಕೀಯ ಕಾಲೇಜು ಆರಂಭಿಸುವುದು, ಸಂತ್ರಸ್ತರಿಗೆ ಪರಿಹಾರ ನೀಡುವುದು, ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಒಂದು ವೇಳೆ ಸಿಎಂ ಜಿಲ್ಲೆಗೆ ಆದ್ಯತೆ ಕೊಡದಿದ್ದರೆ ರಾಜಕೀಯ ಪುನರ್ಜನ್ಮ ನೀಡಿದ ಜಿಲ್ಲೆಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಹೇಳಿದರು.ನವನಗರದ ಪತ್ರಿಕಾಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡಲಸಂಗಮದಲ್ಲಿ ಆಣೆ ಪ್ರಮಾಣ ಮಾಡಿದಂತೆ ಇದುವರೆಗೆ ಕೃಷ್ಣಾ ಮೇಲ್ದಂಡೆ ಯೋಜನೆಗೆ ಪ್ರತಿವರ್ಷ ₹10 ಸಾವಿರ ಕೋಟಿ ಕೊಡುತ್ತೇನೆ ಎಂದು ಹೇಳಿದ್ದು, ಕೇವಲ ಭರವಸೆಯಾಗಿದೆ. ಹಣ ಮಾತ್ರ ನೀಡಲಿಲ್ಲ. ಈ ಬಜೆಟ್‌ನಲ್ಲಿಯಾದರೂ ಹಣ ನೀಡುತ್ತಾರೆ ಎಂಬ ಭರವಸೆ ಸಿಎಂ ಮೇಲಿದೆ ಎಂದರು.
ಭೂಮಿಯ ಉತಾರದಲ್ಲಿ ಕೆಬಿಜೆಎನ್ಎಲ್ ಎಂದು ದಾಖಲಾಗಿದ್ದು, ಉತಾರದಿಂದ ಅದನ್ನು ತೆಗೆದು ಹಾಕಬೇಕು. 2014ರಲ್ಲಿ ತಾವೇ ಘೋಷಣೆ ಮಾಡಿರುವ ಬಾಗಲಕೋಟೆ ಜಿಲ್ಲೆಗೆ ವೈದ್ಯಕೀಯ ಕಾಲೇಜು ಆರಂಭ ಮಾಡಬೇಕು. ನೇಕಾರರ ಕಲ್ಯಾಣಕ್ಕೆ ಯೋಜನೆ ರೂಪಿಸಬೇಕು. ಪ್ರವಾಸೋದ್ಯಮ ಅಭಿವೃದ್ಧಿಗೆ ₹1800 ಕೋಟಿ ನೀಡಬೇಕು. ರಾಜ್ಯದ ಪಾಲಿನ ರೈಲ್ವೆ ಕಾಮಗಾರಿಗೆ ಹೆಚ್ಚಿನ ಹಣ ನೀಡಬೇಕುಎಂದು ಹೇಳಿದರು.ಸತ್ಯನಾರಾಯಣ ಹೇಮಾದ್ರಿ ಮಾತನಾಡಿ, ಕ್ಯಾಬಿನೆಟ್ ಸಚಿವರಾದ ಸಂತೋಷ ಲಾಡ್ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಸಣ್ಣತನದ ಮಾತು ಆಡುವುದನ್ನುನಿಲ್ಲಿಸಬೇಕು ಎಂದು ಹೇಳಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಮಲ್ಲಯ್ಯ ಮೂಗನೂರಮಠ ಇದ್ದರು.
ನಾಲಿಗೆ ಹರಿಬಿಟ್ಟರೆ ತಕ್ಕ ಪಾಠ : ಬಾಗಲಕೋಟೆ: ದೇಶದ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು. ನಾಲಿಗೆ ಹರಿಬಿಟ್ಟರೆ ಬಿಜೆಪಿ ಕಾರ್ಯಕರ್ತರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಹೇಳಿದರು.ರಾಜ್ಯದಲ್ಲಿ ಬಸ್ ದರ ಏರಲು ಪ್ರಧಾನಿ ನರೇಂದ್ರ ಮೋದಿಯವರು ಕಾರಣ ಹಾಗೂ ಬಜೆಟ್ ಕಾಫಿ ಓದದೇ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು, ದೇಶದ ಪ್ರಧಾನಿ ಹುದ್ದೆಯಿಂದ ಮೋದಿಯವರನ್ನು ಕೆಳಗಿಳಿಸಿ ಭಾರತ ಉಳಿಸಿ ಎಂದು ಹೇಳುವ ಲಾಡ್ ಹೇಳಿಕೆಯನ್ನು ಖಂಡಿಸಿದರು.