ಪ್ರತ್ಯೇಕ ಧರ್ಮದ ಹೆಸರಲ್ಲಿ ಸಮಾಜ ಒಡೆಯುವ ಕೆಲಸವಾಗದಿರಲಿ: ಶೆಟ್ಟರ

| Published : Dec 26 2023, 01:32 AM IST

ಪ್ರತ್ಯೇಕ ಧರ್ಮದ ಹೆಸರಲ್ಲಿ ಸಮಾಜ ಒಡೆಯುವ ಕೆಲಸವಾಗದಿರಲಿ: ಶೆಟ್ಟರ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತ್ಯೇಕ ಧರ್ಮ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಪ್ರತಿಕ್ರಿಯೆ ನೀಡಿ, ಪ್ರತ್ಯೇಕ ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವಂತಹ ಕೆಲಸವನ್ನು ಯಾರೂ ಮಾಡಬಾರದು ಎಂದಿದ್ದಾರೆ.

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ಪ್ರತ್ಯೇಕ ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವಂತಹ ಕೆಲಸವನ್ನು ಯಾರೂ ಮಾಡಬಾರದು. ಈ ಹಿಂದೆಯೂ ನಾನು ಇದನ್ನೇ ಹೇಳಿದ್ದೇನೆ, ಈಗಲೂ ಅದನ್ನೇ ಹೇಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸ್ಪಷ್ಟಪಡಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜವು ಒಂದು ಮನೆ ಇದ್ದಂತೆ. ಅದನ್ನು ಒಡೆಯುವ ಕೆಲಸ ಯಾರೂ ಮಾಡಬಾರದು. ಸಮಾಜವನ್ನು ಒಟ್ಟಾಗಿಸಿಕೊಂಡು ಹೋಗಬೇಕು ಎಂದರು.

ವೀರಶೈವ ಮತ್ತು ಲಿಂಗಾಯತ ಎರಡು ಬೇರೆ- ಬೇರೆ ಎಂಬ ಅರ್ಥದಲ್ಲಿ ಬಿಂಬಿಸಲಾಗುತ್ತಿತ್ತು. ಎಲ್ಲರೂ ಸೇರಿ ಸ್ವತಂತ್ರ ಧರ್ಮದ ಬಗ್ಗೆ ಹೋರಾಟ ಮಾಡಿ ಅಂತಾ ನಾನು ಹೇಳಿದ್ದೇ. ವೀರಶೈವ ಮಹಾಸಭಾ ಲೀಡ್‌ ತೆಗೆದುಕೊಳ್ಳಬೇಕು. ಸಮಾಜದಲ್ಲಿ ಒಡಕು ಉಂಟಾಗುವುದು ಬೇಡ ಎಂಬುದು ನನ್ನ ಅಭಿಪ್ರಾಯವಾಗಿದೆ ಎಂದರು.

ದಾವಣಗೆರೆ ಸಮಾವೇಶದಲ್ಲಿ ಕೆಲ ನಿರ್ಣಯಗಳನ್ನು ಅಂಗೀಕರಿಸಲಾಗಿದೆ. ಅದರಂತೆ ವೀರಶೈವ ಲಿಂಗಾಯತರ ಬೇಡಿಕೆಗಳಿಗಾಗಿ ಒಗ್ಗಟ್ಟು ಪ್ರದರ್ಶಿಸಲಾಗಿದೆ ಎಂದರು.