ನಾಗರಹಾವು, ಕಾಳಿಂಗ ಸರ್ಪ ವಿಷಕಾರಿಯಾಗಿದ್ದು, ಹಪ್ಪಟೆ, ಕೇರೆ ಹಾವು, ಹಸಿರು ಹಾವು ಮುಂತಾದವು ವಿಷಕಾರಿಯಲ್ಲ. ಕೆಲವು ಹಾವುಗಳು ಹೆಚ್ಚು ವಿಷಕಾರಿಯಲ್ಲದಿದ್ದರೂ, ಹಪ್ಪಟೆ ಹಾವು ಕಚ್ಚಿದರೆ ವೈದ್ಯರ ಬಳಿ ತೆರಳಿ ಚಿಕಿತ್ಸೆ ಪಡೆಯಬೇಕು. ಹಾವುಗಳ ಬಗ್ಗೆ ಅನಗತ್ಯ ಭಯ ಬೇಡ.
ಕನ್ನಡಪ್ರಭ ವಾರ್ತೆ ಮೈಸೂರು
ಹಾವುಗಳ ಬಗ್ಗೆ ಅನಗತ್ಯ ಭಯದಿಂದ ಅವುಗಳನ್ನು ಸಾಯಿಸಲಾಗುತ್ತಿದೆ. ಎಲ್ಲಾ ಹಾವುಗಳು ವಿಷಕಾರಿಯಲ್ಲ ಎಂದು ಉರಗ ತಜ್ಞ ಸ್ನೇಕ್ ಶ್ಯಾಮ್ ಹೇಳಿದರು.ನಗರದ ಆರ್ ಟಿಒ ಬಳಿ ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಪರಿಸರ ಸ್ನೇಹಿ ತಂಡದಿಂದ ವಿಶ್ವ ಹಾವುಗಳ ದಿನಾಚರಣೆ ಅಂಗವಾಗಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಅರಣ್ಯ ಇಲಾಖೆ ಪರಿಸರ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಮುಂದಾಗಿರುವುದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದರು.
ನಾಗರಹಾವು, ಕಾಳಿಂಗ ಸರ್ಪ ವಿಷಕಾರಿಯಾಗಿದ್ದು, ಹಪ್ಪಟೆ, ಕೇರೆ ಹಾವು, ಹಸಿರು ಹಾವು ಮುಂತಾದವು ವಿಷಕಾರಿಯಲ್ಲ. ಕೆಲವು ಹಾವುಗಳು ಹೆಚ್ಚು ವಿಷಕಾರಿಯಲ್ಲದಿದ್ದರೂ, ಹಪ್ಪಟೆ ಹಾವು ಕಚ್ಚಿದರೆ ವೈದ್ಯರ ಬಳಿ ತೆರಳಿ ಚಿಕಿತ್ಸೆ ಪಡೆಯಬೇಕು. ಹಾವುಗಳ ಬಗ್ಗೆ ಅನಗತ್ಯ ಭಯ ಬೇಡ ಎಂದು ಸಲಹೆ ನೀಡಿದರು.ಹಾವು ಕಚ್ಚಿದಾಗ ಬಹುತೇಕ ಜನರು ಭಯದಿಂದ ಹೃದಯಾಘಾತದಿಂದ ಸಾವನ್ನಪ್ಪುತ್ತಾರೆ. ಹಾವು ಕಚ್ಚಿದಾಗ ವ್ಯಕ್ತಿಗೆ ಧೈರ್ಯ ತುಂಬಬೇಕು. ಸಾಧ್ಯವಾದಷ್ಟು ಬೇಗ ಸಮೀಪದ ಆಸ್ಪತ್ರೆಗೆ ಕರೆದೊಯ್ಯಬೇಕು. ಆಸ್ಪತ್ರೆಗಳಲ್ಲಿ ಹಾವು ಕಡಿತಕ್ಕೆ
ಚಿಕಿತ್ಸೆಗಾಗಿ ಪ್ರತ್ಯಕ ಚಿಕಿತ್ಸಾ ಕೊಠಡಿಗಳನ್ನು ಮೀಸಲಿಡಬೇಕು ಎಂದರು.ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಡಾ.ಕೆ.ಬಿ. ಲಿಂಗರಾಜು ಮಾತನಾಡಿ, ಕೋವಿಡ್ ನಂತಹ ಕಷ್ಡಕಾಲದಲ್ಲೂ ಮನೆಗಳಿಗೆ ಹಾವು ಬಂದಾಗ ಸ್ನೇಕ್ ಶ್ಯಾಮ್ ಅವರು ಹಾವನ್ನ ಸಂರಕ್ಷಿಸಿದ್ದಾರೆ. 98 ಸಾವಿರಕ್ಕೂ ಹೆಚ್ಚು ಹಾವನ್ನ ಸಂರಕ್ಷಿಸಿದ್ದಾರೆ. ಪಠ್ಯಪುಸ್ತಕಗಳಲ್ಲಿ ಸ್ನೇಕ್ ಶ್ಯಾಮ್ ಅವರ ಸೇವೆ ಮತ್ತು ಪರಿಸರ ಕಾಳಜಿಯನ್ನು ರಾಜ್ಯ ಸರ್ಕಾರ ಅಳವಡಿಸಿ, ಮಕ್ಕಳಲ್ಲಿ ಉರಗ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಮೃಗಾಲಯ ಪ್ರಾಧಿಕಾರ ಮಾಜಿ ಅಧ್ಯಕ್ಷ ಶಿವಕುಮಾರ್, ಕೆ.ಆರ್. ಬ್ಯಾಂಕ್ ಅಧ್ಯಕ್ಷ ಬಸವರಾಜ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಮುಖಂಡರಾದ ಜಿ. ರಾಘವೇಂದ್ರ, ಎಸ್.ಎನ್. ರಾಜೇಶ್, ಸಂದೇಶ್, ಪ್ರಮೋದ್ ಗೌಡ, ವಾಣೀಶ್, ಎಚ್.ಪಿ. ಚೇತನ್, ನಂದಕುಮಾರ್, ಸಂದೇಶ್, ಸುಪ್ರೀತ್, ಮಹಾನ್ ಶ್ರೇಯಸ್ ಮೊದಲಾದವರು ಇದ್ದರು.