ರೈತ ಸಮುದಾಯವನ್ನು ನಿರ್ಲಕ್ಷಿಸದಿರಿ: ಗುಂಡ್ಮಿ ರಾಮಚಂದ್ರ ಐತಾಳ್

| Published : Mar 24 2025, 12:30 AM IST

ರೈತ ಸಮುದಾಯವನ್ನು ನಿರ್ಲಕ್ಷಿಸದಿರಿ: ಗುಂಡ್ಮಿ ರಾಮಚಂದ್ರ ಐತಾಳ್
Share this Article
  • FB
  • TW
  • Linkdin
  • Email

ಸಾರಾಂಶ

ಪಾಂಡೇಶ್ವರ ಯಡಬೆಟ್ಟಿನಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಮತ್ತು ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ಗೀತಾನಂದ ಫೌಂಡೇಶನ್ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಅವರುಗಳ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 44ನೇ ಪಂಚವರ್ಣ ರೈತ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಕೋಟ

ದೇಶದ ಬೆನ್ನೆಲೆಬಾಗಿರುವ ರೈತರನ್ನು ನಿರ್ಲಕ್ಷಿಸಬಾರದು ಅವರಿಗೆ ಸರ್ಕಾರ ಹೆಚ್ಚಿನ ಸೌಲಭ್ಯ ಒದಗಿಸುವಂತಾಗಬೇಕು ಎಂದು ಬ್ರಹ್ಮಾವರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ರಾಮಚಂದ್ರ ಐತಾಳ್ ಹೇಳಿದರು.ಶುಕ್ರವಾರ ಪಾಂಡೇಶ್ವರ ಯಡಬೆಟ್ಟಿನಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಮತ್ತು ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ಗೀತಾನಂದ ಫೌಂಡೇಶನ್ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಅವರುಗಳ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 44ನೇ ಪಂಚವರ್ಣ ರೈತ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪಾಂಡೇಶ್ವರ ಯಡಬೆಟ್ಟು ಹಿರಿಯ ಕೃಷಿಕ ರಾಮಕೃಷ್ಣ ಐತಾಳ್ ಇವರಿಗೆ ಪಂಚವರ್ಣ ರೈತ ಪುರಸ್ಕಾರ ನೀಡಿ ಗೌರವಿಸಲಾಯಿತು.ವಿಶೇಷವಾಗಿ ಗಿಡ ನಡುವ ಮೂಲಕ ಕಾರ್ಯಕ್ರಮ ಪ್ರಾರಂಭಗೊಂಡಿತು. ಪಾಂಡೇಶ್ವರ ಗ್ರಾಪಂ ಅಧ್ಯಕ್ಷೆ ಸುಶೀಲ ಸದಾನಂದ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿದರು.ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ವಹಿಸಿದ್ದರು.

ಸಾಸ್ತಾನ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಗೋವಿಂದ ಪೂಜಾರಿ ಅಭಿನಂದನಾ ನುಡಿಗಳನ್ನಾಡಿದರು. ಅಭ್ಯಾಗತರಾಗಿ ಪಾಂಡೇಶ್ವರ ಪಂಚಾಯಿತಿ ಸದಸ್ಯೆ ಕಲ್ಪನಾ ದಿನಕರ್, ರೈತಧ್ವನಿ ಸಂಘದ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ, ಸ್ನೇಹಕೂಟ ಸಂಚಾಲಕಿ ಭಾರತಿ ವಿ ಮಯ್ಯ, ರೋಟರಿ ಕ್ಲಬ್ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ಮಹಿಳಾ ಮಂಡಲದ ಅಧ್ಯಕ್ಷ ಲಲಿತಾ ಪೂಜಾರಿ ಉಪಸ್ಥಿತರಿದ್ದರು.

ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿದರು. ಪಂಚವರ್ಣದ ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಪ್ರಾಸ್ತಾವಿಕವಾಗಿ ನುಡಿಗಳನ್ನಾಡಿದರು. ಸಂಚಾಲಕಿ ಸುಜಾತ ಎಂ ಬಾಯರಿ ಕಾರ್ಯಕ್ರಮ ನಿರೂಪಿಸಿದರು. ಸದಸ್ಯ ಮಹೇಶ್ ಬೆಳಗಾವಿ ವಂದಿಸಿದರು.