ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ: ಅಶೋಕ ಹೆಗಡೆ

| Published : Jan 15 2024, 01:48 AM IST

ಸಾರಾಂಶ

ಗುಳೇದಗುಡ್ಡ: ನಾನು ಬಡವ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿದ್ದೇತ್ತೇನೆ ಎಂಬ ಕೀಳರಿಮೆ ಮಕ್ಕಳಲ್ಲಿ ಇರಬಾರದು. ಸರ್ಕಾರಿ ಶಾಲೆಯಲ್ಲಿಯೂ ಉತ್ತಮ ಕಲಿಕೆಗೆ ಪೂರಕವಾದ ವಾತಾವರಣ ಇದೆ. ಮಕ್ಕಳಲ್ಲಿ ನಿರಂತರ ಕಲಿಕೆ, ಪರಿಶ್ರಮ ಇದ್ದರೆ ಸರ್ಕಾರಿ ಶಾಲೆಯಲ್ಲಿಯೇ ಉನ್ನತ ಸಾಧನೆ ಮಾಡಬಹುದು ಎಂದು ಸಾಮಾಜಿಕ ಹೋರಾಟಗಾರ ಅಶೋಕ ಹೆಗಡೆ ಹೇಳಿದರು. ಪಟ್ಟಣದ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆ ನಂ.1ರಲ್ಲಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಮಕ್ಕಳಿಗೆ ನೋಟ್ ಬುಕ್, ಪೆನ್, ಬಟಿಂಗ್ಸ್, ಕಂಪಾಸ್ ಹಾಗೂ ಸಿಹಿ ವಿತರಿಸಿ ಮಾತನಾಡಿದರು.

ಕನ್ನಡಪ್ರಭವಾರ್ತೆ ಗುಳೇದಗುಡ್ಡ

ನಾನು ಬಡವ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿದ್ದೇತ್ತೇನೆ ಎಂಬ ಕೀಳರಿಮೆ ಮಕ್ಕಳಲ್ಲಿ ಇರಬಾರದು. ಸರ್ಕಾರಿ ಶಾಲೆಯಲ್ಲಿಯೂ ಉತ್ತಮ ಕಲಿಕೆಗೆ ಪೂರಕವಾದ ವಾತಾವರಣ ಇದೆ. ಮಕ್ಕಳಲ್ಲಿ ನಿರಂತರ ಕಲಿಕೆ, ಪರಿಶ್ರಮ ಇದ್ದರೆ ಸರ್ಕಾರಿ ಶಾಲೆಯಲ್ಲಿಯೇ ಉನ್ನತ ಸಾಧನೆ ಮಾಡಬಹುದು ಎಂದು ಸಾಮಾಜಿಕ ಹೋರಾಟಗಾರ ಅಶೋಕ ಹೆಗಡೆ ಹೇಳಿದರು.

ಪಟ್ಟಣದ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆ ನಂ.1ರಲ್ಲಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಮಕ್ಕಳಿಗೆ ನೋಟ್ ಬುಕ್, ಪೆನ್, ಬಟಿಂಗ್ಸ್, ಕಂಪಾಸ್ ಹಾಗೂ ಸಿಹಿ ವಿತರಿಸಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಕಲಿತ ಸಾಕಷ್ಟು ಜನರು ದೊಡ್ಡ ದೊಡ್ಡ ಸಾಧನೆ ಮಾಡಿದ್ದಾರೆ. ಅವರು ಕೂಡ ಸರ್ಕಾರಿ ಶಾಲೆಯಲ್ಲಿ ಕಲಿತು, ಕಠಿಣ ಪರಿಶ್ರಮ ಪಟ್ಟು ಜೀವನದಲ್ಲಿ ದೊಡ್ಡ ಸಾಧನೆ ಮಾಡಿದ್ದಾರೆ. ಅಂತಹ ಮಹಾನ್ ವ್ಯಕ್ತಿಗಳ ಜೀವನ ನಮಗೆ ಪ್ರೇರಣೆ ಆಗಲಿ ಎಂದರು.

ಲಕ್ಷ್ಮೀ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಂಪತ್ತಕುಸ್ರ್‌ ರಾಠಿ ಮಾತನಾಡಿ, ಅಶೋಕ ಹೆಗಡೆ ಅವರು ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದ್ದಾರೆ. ಮಕ್ಕಳ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದು, ಪ್ರತಿವರ್ಷ ತಮ್ಮ ಹುಟ್ಟು ಹಬ್ಬಕ್ಕೆ ವಿನೂತನ ಕಾರ್ಯಕ್ರಮ ರೂಪಿಸುತ್ತಿರುವುದು ಶ್ಲಾಘನೀಯ ಎಂದರು.

ನಿವೃತ್ತ ಪ್ರಾಚಾರ್ಯ ಕೆ.ಎಂ.ಶೆಟ್ಟರ, ಶಾಲೆ ಎಸ್.ಡಿ.ಎಂ.ಸಿ. ಅಧ್ಯಕ್ಷ ಶ್ರೀಧರ ಚೆಟ್ಟೆರ, ಶಾಲೆ ಮುಖ್ಯಶಿಕ್ಷಕಿ ಪ್ರೇಮಾ ಶೆಲ್ಲಿಕೇರಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಅಶೋಕ ಪರಗಿ, ಭಾರತಿ ತಾಂಡೂರ, ಎಸ್.ಕೆ. ನದಾಫ್, ಟಿ.ಎನ್.ಮಡಿವಾಳರ ಹಾಗೂ ಶಾಲೆ ಸಿಬ್ಬಂದಿ ಇದ್ದರು.