ಸಾರಾಂಶ
ಶಿಕ್ಷಣ ಕ್ಷೇತ್ರದ ಬುದ್ಧಿವಂತಿಕೆಯ ಪರೀಕ್ಷೆ ಮೊದಲ ಹಂತವೇ ಎಸ್ಸೆಸ್ಸೆಲ್ಸಿ. ಮಕ್ಕಳನ್ನು ಸತ್ಪ್ರಜೆ ಮಾಡಬೇಕೆಂಬು ಪೋಷಕರ ಕನಸು. ಅವರ ಕನಸು, ಕಷ್ಟವನ್ನು ಅರ್ಥ ಮಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ನಾನು ಓದಬೇಕಿತ್ತು ಎಂದು ನೊಂದುಕೊಳ್ಳುವ ಮುನ್ನಾ ಇರುವ ಅವಕಾಶವನ್ನು ಪ್ರಯೋಜನ ಪಡೆದುಕೊಳ್ಳಬೇಕು.
ಕನ್ನಡಪ್ರಭ ವಾರ್ತೆ ಮಳವಳ್ಳಿ
ನಿರ್ಲಕ್ಷ್ಯ ವಹಿಸದೆ ವಿದ್ಯಾರ್ಥಿಗಳು ಶಿಕ್ಷಣದ ಆಧಾರದ ಮೇಲೆ ಉದ್ಯೋಗ ಪಡೆದು ಜೀವನವನ್ನು ಕಟ್ಟಿಕೊಳ್ಳಬೇಕು ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.ಪಟ್ಟಣದ ಬಾಯ್ಸ್ ಹೋಂ ಶಾಲಾ ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಎಸ್ಸೆಸ್ಸೆಲ್ಸಿ ಅನುರ್ತೀಣಗೊಂಡ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿರುವ ಉಚಿತ ಸನಿವಾಸ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.ಕೆಲವೊಂದು ತಪ್ಪುಗಳಿಂದ ಅನುತೀರ್ಣರಾಗಿರುವುದು ಸಹಜ. ತಪ್ಪನ್ನು ತಿದ್ದುಕೊಂಡು ಪರೀಕ್ಷೆಯಲ್ಲಿ ಪಾಸು ಮಾಡುವ ಮೂಲಕ ಭವಿಷ್ಯವನ್ನು ರೂಪಿಸಿಕೊಳ್ಳುವುದು ಭವಿಷತ್‌ಗೆ ಉತ್ತಮ ಬೆಳವಣಿಗೆಯಾಗುತ್ತದೆ ಎಂದರು.
ಶಿಕ್ಷಣ ಕ್ಷೇತ್ರದ ಬುದ್ಧಿವಂತಿಕೆಯ ಪರೀಕ್ಷೆ ಮೊದಲ ಹಂತವೇ ಎಸ್ಸೆಸ್ಸೆಲ್ಸಿ. ಮಕ್ಕಳನ್ನು ಸತ್ಪ್ರಜೆ ಮಾಡಬೇಕೆಂಬು ಪೋಷಕರ ಕನಸು. ಅವರ ಕನಸು, ಕಷ್ಟವನ್ನು ಅರ್ಥ ಮಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ನಾನು ಓದಬೇಕಿತ್ತು ಎಂದು ನೊಂದುಕೊಳ್ಳುವ ಮುನ್ನಾ ಇರುವ ಅವಕಾಶವನ್ನು ಪ್ರಯೋಜನ ಪಡೆದುಕೊಳ್ಳಬೇಕೆಂದು ಹೇಳಿದರು.ಅನುತೀರ್ಣಗೊಂಡ ವಿದ್ಯಾರ್ಥಿಗಳ ಬದುಕನ್ನು ಹಸನು ಮಾಡಲು ತರಬೇತಿ ಕೊಡಿಸಲು ಸಂಪೂರ್ಣ ಬೆಂಬಲ ನೀಡಿದ್ದೇನೆ. ಉಚಿತ ತರಬೇತಿಯಲ್ಲಿ ಭಾಗವಹಿಸಿ ಉತ್ತೀರ್ಣಗೊಂಡರೇ ಬಹುಮಾನ ನೀಡಲಾಗುವುದು ಎಂದು ಆತ್ಮಸ್ಥೈರ್ಯ ತುಂಬಿದರು.
ಈ ವೇಳೆ ತಾಪಂ ಇಒ ಶ್ರೀನಿವಾಸ್, ಬಿಇಒ ವಿ.ಈ.ಉಮಾ, ಕ್ಷೇತ್ರ ಸಮಾನ್ವಯಾಧಿಕಾರಿ ಶ್ರೀನಿವಾಸ್ ಸೇರಿದಂತೆ ಇತರರು ಇದ್ದರು.