ಸಾರಾಂಶ
ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಚುನಾವಣೆ ಮತ್ತು ಅದರ ನಿಯಮಗಳನ್ನು ತಿಳಿಯುವುದರೊಂದಿಗೆ ಮತದಾನದ ಮಹತ್ವವನ್ನು ಪ್ರತಿಯೊಬ್ಬ ಪ್ರಜೆಯೂ ಅರಿಯುವಂತಾಗಬೇಕು. ಎಂದಿಗೂ ಮತವನ್ನು ಹಣಕ್ಕಾಗಿ ಮಾರಿಕೊಳ್ಳಬಾರದು ಎಂದು ಬೆಳ್ತಂಗಡಿಯ ವಕೀಲ ಬಿ.ಕೆ ಧನಂಜಯರಾವ್ ಹೇಳಿದ್ದಾರೆ.ಕಲ್ಲಬೆಟ್ಟು ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ನಾಯಕರನ್ನಆಯ್ಕೆ ಮಾಡಿದ ನಂತರ ಸುಮ್ಮನೆ ಕುಳಿತುಕೊಳ್ಳಬೇಡಿ. ನಾಯಕನಾದವನು ನಿಯಮಗಳನ್ನು ಮಾನವೀಯ ಮೌಲ್ಯಗಳನ್ನು ಗೌರವಿಸುವಂತವನಾಗಬೇಕು. ಅವರು ಮಾಡುವ ತಪ್ಪುಗಳನ್ನು ನೇರವಾಗಿ ಅವರಿಗೆ ತಿಳಿಸುವುದು ಪ್ರಜೆಗಳಾದ ನಿಮ್ಮಕರ್ತವ್ಯವಾಗಿದೆ. ವಿರೋಧ ಪಕ್ಷದ ನಾಯಕನಾದವನು ಆಡಳಿತ ಪಕ್ಷದ ಆಡಳಿತವನ್ನು ಸದಾ ವೀಕ್ಷಿಸುತ್ತಿರಬೇಕು ಎಂದು ಕಿವಿಮಾತು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ತುಂಬಾ ಮುಖ್ಯವಾದದ್ದು. ಮತದಾನ ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಒಬ್ಬಉತ್ತಮ ನಾಯಕನಾಗುವ ಸಾಮರ್ಥ್ಯ ಎಲ್ಲರಲ್ಲಿಯೂ ಇರುತ್ತದೆ. ಅದಕ್ಕೆ ಬೇಕಾದ ಮೌಲ್ಯಗಳನ್ನು ಜ್ಞಾನವನ್ನುಆತ್ಮ ವಿಶ್ವಾಸ, ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು.
ಮುಖ್ಯೊಪಾಧ್ಯಾಯ ಶಿವಪ್ರಸಾದ್ ಭಟ್ ನೂತನ ವಿದ್ಯಾರ್ಥಿ ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಉಪ ಮುಖ್ಯೋಪಾಧ್ಯಾಯ ಜಯಶೀಲ ಅತಿಥಿಗಳನ್ನು ಪರಿಚಯಿಸಿದರು. ಶಿಕ್ಷಕ ದಾಮೋದರ್ ಸಚಿವರಿಗೆ ಖಾತೆಗಳನ್ನು ಹಂಚಿದರು.ಶಾಲಾ ಸಂಸತ್ತಿನ ನಾಯಕನಾಗಿ ಶಶಾಂಕ್ ಎಸಿ, ವಿರೋಧ ಪಕ್ಷದ ನಾಯಕನಾಗಿ ಗ್ಯಾನ್ ಕೆ. ಕಾಳೆ, ಸಭಾಪತಿಯಾಗಿ ಯಶಸ್ವಿನಿ, ಉಪ ನಾಯಕಿ ಚಿನ್ಮಯಿಅರುಣ್, ಕ್ರೀಡೆ- ಮನ್ವಿತ್‌ರಾಜ್‌ಜೈನ್, ಆರೋಗ್ಯ- ಲಿಖಿತ್‌ಗೌಡ, ಸಾಂಸ್ಕೃತಿಕ- ಸೋನಿಕ, ಶಿಸ್ತು-ತ್ರಿಶೂಲ್, ಆಹಾರ-ಧ್ರುತಿ ಪಾಟೀಲ್, ಪರಿಸರ-ಜೋವಿನ್, ಜಲ ಮತ್ತು ವಿದ್ಯುತ್- ಖಾತೆಗಳ ಸಚಿವರಾಗಿ ಧನ್ಯತಾ ಆಯ್ಕೆಗೊಂಡರು ವಿದ್ಯಾರ್ಥಿನಿ ಅದಿತಿ ನಿರೂಪಿಸಿದರು.