ಸಿಎಂ ಸಿದ್ದರಾಮಯ್ಯರ ಬಗ್ಗೆ ಹಗುರ ಮಾತು ಸಲ್ಲದು: ಅಧ್ಯಕ್ಷ ಡಿ.ಹುಚ್ಚೇಗೌಡ

| Published : Jan 19 2024, 01:45 AM IST

ಸಿಎಂ ಸಿದ್ದರಾಮಯ್ಯರ ಬಗ್ಗೆ ಹಗುರ ಮಾತು ಸಲ್ಲದು: ಅಧ್ಯಕ್ಷ ಡಿ.ಹುಚ್ಚೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಕೊಟ್ಟ 5 ಗ್ಯಾರಂಟಿಗಳನ್ನು ಈಡೇರಿಸಿ ಜನಸಾಮಾನ್ಯರು, ಮಹಿಳೆಯರು, ವಿದ್ಯಾರ್ಥಿಗಳಿಗೆ ನೆರವಾಗಿದ್ದಾರೆ. ಹಣಕಾಸು ಸಚಿವರಾಗಿ 14 ಬಾರಿ ಬಜೆಟ್ ಮಂಡಿಸಿದ್ದಾರೆ. ಇಂತಹ ನಾಯಕನ ಬಗ್ಗೆ ಸಂಸದ ಅನಂತ್‌ ಕುಮಾರ್ ಹೆಗಡೆ ಹಗುರವಾಗಿ ಮಾತನಾಡಿರುವುದು ಸರಿಯಲ್ಲ.

ಸಂಸದ ಹೆಗಡೆ ಕ್ಷಮೆಯಾಚನೆಗೆ ಆಗ್ರಹ । ತಾಲೂಕು ಕುರುಬ ಸಂಘದಿಂದ ಆಗ್ರಹ

ಕನ್ನಡಪ್ರಭ ವಾರ್ತೆ ಪಾಂಡವಪುರ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಹಗುರವಾಗಿ ಮಾತನಾಡಿರುವ ಸಂಸದ ಅನಂತ್‌ಕುಮಾರ್ ಹೆಗಡೆ ಕ್ಷಮೆಯಾಚಿಸದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ತಾಲೂಕು ಕುರುಬರ ಸಂಘದ ಅಧ್ಯಕ್ಷ ಡಿ.ಹುಚ್ಚೇಗೌಡ ಎಚ್ಚರಿಕೆ ನೀಡಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ಧರಾಮಯ್ಯ ಅವರು ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಗಳಾಗಿ ಉತ್ತಮ ಆಡಳಿತ ನಡೆಸಿ, ಕೊಟ್ಟಿದ್ದ 165 ಭರವಸೆಗಳಲ್ಲಿ 160 ಭರವಸೆಗಳನ್ನು ಈಡೇರಿಸಿದ ನಾಯಕರು. ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಕೊಟ್ಟ 5 ಗ್ಯಾರಂಟಿಗಳನ್ನು ಈಡೇರಿಸಿ ಜನಸಾಮಾನ್ಯರು, ಮಹಿಳೆಯರು, ವಿದ್ಯಾರ್ಥಿಗಳಿಗೆ ನೆರವಾಗಿದ್ದಾರೆ. ಹಣಕಾಸು ಸಚಿವರಾಗಿ 14 ಬಾರಿ ಬಜೆಟ್ ಮಂಡಿಸಿದ್ದಾರೆ. ಇಂತಹ ನಾಯಕನ ಬಗ್ಗೆ ಸಂಸದ ಅನಂತ್‌ ಕುಮಾರ್ ಹೆಗಡೆ ಹಗುರವಾಗಿ ಮಾತನಾಡಿರುವುದು ಸರಿಯಲ್ಲ ಎಂದು ಕಿಡಿಕಾರಿದರು.

ಈ ಬಾರಿ ಲೋಕಸಭೆ ಟಿಕೆಟ್ ಪಡೆಯುವುದಕ್ಕಾಗಿ ಪ್ರಧಾನಿ ಮೋದಿ, ಅಮಿತ್ ಶಾರನ್ನು ಮೆಚ್ಚಿಸಲು ಸಿದ್ದರಾಮಯ್ಯನವರ ಬಗ್ಗೆ ಹಗುರವಾದ ಹೇಳಿಕೆ ನೀಡಿದ್ದಾರೆ. ಹೆಗ್ಗಡೆಯವರು ಜವಾಬ್ದಾರಿಯುತ ಸ್ಥಾನದಲ್ಲಿದ್ದು ಇಷ್ಟೊಂದು ಕೀಳುಮಟ್ಟದಲ್ಲಿ ಮಾತನಾಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿಮ್ಮ ಹೇಳಿಕೆ ನೋಡಿಕೊಂಡು ಕುರುಬ ಸಮಾಜ ಸುಮ್ಮನೆ ಕೂರುವುದಿಲ್ಲ. ನೀವು ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕ್ಷಮೆಯಾಚಿಸದಿದ್ದರೆ ನಿಮ್ಮ ವಿರುದ್ಧ ಪ್ರತಿ ತಾಲೂಕುಗಳಲ್ಲಿ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸುದ್ಧಿಗೋಷ್ಠಿಯಲ್ಲಿ ಕುರುಬರ ಸಂಘದ ಜಿಲ್ಲಾ ಉಪಾಧ್ಯಕ್ಷ ರೇವಣ್ಣ, ಮುಖಂಡರಾದ ಸಿ.ಸ್ವಾಮೀಗೌಡ, ಪಾಲಾಕ್ಷ, ಹುಚ್ಚೇಗೌಡ, ಕಿಸಾನ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್.ರಮೇಶ್ ಇದ್ದರು.

------------

18ಕೆಎಂಎನ್ ಡಿ25

ಸುದ್ಧಿಗೋಷ್ಠಿಯಲ್ಲಿ ತಾಲೂಕು ಕುರುಬರ ಸಂಘದ ಪದಾಧಿಕಾರಿಗಳು ಮಾತನಾಡಿದರು.