ಗ್ಯಾರಂಟಿ ನಂಬಬೇಡಿ, ಬಿಜೆಪಿಗೆ ಮತ ಹಾಕಿ

| Published : Apr 29 2024, 01:30 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಗುಳೇದಗುಡ್ಡ: ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಜಿಲ್ಲೆಗೆ ದೊಡ್ಡ ಕೊಡುಗೆ ನೀಡಿದ್ದಾರೆ. ವಿರೋಧ ಪಕ್ಷಗಳು ಮೊದಲು ಅದನ್ನು ತಿಳಿದುಕೊಳ್ಳಲಿ. ಪ್ರವಾಸಿ ತಾಣ, ರೈಲ್ವೆ ನಿಲ್ದಾಣ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಹೀಗೆ ಹಲವಾರು ಯೋಜನೆಗಳಿಗೆ ಸಾವಿರಾರು ಕೋಟಿ ತಂದು ಅಭಿವೃದ್ಧಿ ಮಾಡಿದ್ದಾರೆ. ಹೀಗಾಗಿ ಪ್ರತಿಯೊಬ್ಬರು ಬಿಜೆಪಿ ಬೆಂಬಲಿಸಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹನುಮಂತ ಮಾವಿನಮರದ ಹೇಳಿದರು.

ಕನ್ನಡಪ್ರಭ ವಾರ್ತೆ ಗುಳೇದಗುಡ್ಡ

ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಜಿಲ್ಲೆಗೆ ದೊಡ್ಡ ಕೊಡುಗೆ ನೀಡಿದ್ದಾರೆ. ವಿರೋಧ ಪಕ್ಷಗಳು ಮೊದಲು ಅದನ್ನು ತಿಳಿದುಕೊಳ್ಳಲಿ. ಪ್ರವಾಸಿ ತಾಣ, ರೈಲ್ವೆ ನಿಲ್ದಾಣ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಹೀಗೆ ಹಲವಾರು ಯೋಜನೆಗಳಿಗೆ ಸಾವಿರಾರು ಕೋಟಿ ತಂದು ಅಭಿವೃದ್ಧಿ ಮಾಡಿದ್ದಾರೆ. ಹೀಗಾಗಿ ಪ್ರತಿಯೊಬ್ಬರು ಬಿಜೆಪಿ ಬೆಂಬಲಿಸಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹನುಮಂತ ಮಾವಿನಮರದ ಹೇಳಿದರು.

ಪರ್ವತಿ ಗ್ರಾಮದಲ್ಲಿ ನಡೆದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಪ್ರಚಾರ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಎಲ್ಲ ಭಾಗ್ಯಗಳು ಮಾಯವಾಗಿವೆ. ಈಗ ಗ್ಯಾರಂಟಿ ಹಿಡಿದುಕೊಂಡು ಬರುತ್ತಿದ್ದಾರೆ. ಯಾರೂ ಗ್ಯಾರಂಟಿಗಳನ್ನು ನಂಬಬೇಡಿ. ದೇಶದ ಉಜ್ವಲ ಭವಿಷ್ಯಕ್ಕಾಗಿ ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದರು.

ಮಾಜಿ ಶಾಸಕ ಎಂ. ಕೆ.ಪಟ್ಟಣಶೆಟ್ಟಿ ಮಾತನಾಡಿ, ನರೇಂದ್ರ ಮೋದಿ ರೈತರ, ನೇಕಾರರ, ಕೂಲಿ ಕಾರ್ಮಿಕರ ಹಿತರಕ್ಷಣೆಗೆ ಸಾಕಷ್ಟು ಯೋಜನೆ ಜಾರಿಗೆ ತಂದಿದ್ದಾರೆ. ಆರೋಗ್ಯ, ಕೃಷಿ, ಶಿಕ್ಷಣ, ಪಡಿತರ, ಮಕ್ಕಳ ಭವಿಷ್ಯಕ್ಕೆ ಅನೇಕ ಯೋಜನೆ ಜಾರಿಗೆ ತಂದಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಿಟ್ಟಿ ಭಾಗ್ಯಗಳಿಗೆ ಬೆಲೆ ಕೊಡಬಾರದು. ದೇಶದ ರಕ್ಷಣೆಗೆ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಅವರಿಗೆ ಮತ ನೀಡಿ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು ಎಂದರು.

ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿದರು.ನಾಗರಾಜ ಕಾಚಟಿ, ಸವಿತಾ ಉಂಕಿ, ಸಂಜೀವ ಕಾರಕೂನ, ಯಮನಪ್ಪ, ಬಂಡಿವಡ್ಡರ, ಗಂಗಾಧರ ಆಸಂಗಿ, ಹನಮಂತ ಹುನಗುಂದ, ಮುದಕಪ್ಪ ನರಿ, ರಂಗಪ್ಪ ಗುನ್ನಳ್ಳಿ, ಕೋನಪ್ಪ ಹಲಕುರ್ಕಿ, ಈರಣ್ಣ ಗುನ್ನಳ್ಳಿ ಸೇರಿದಂತೆ ಅನೇಕರು ಇದ್ದರು.