ಸಾರಾಂಶ
ಹಾವೇರಿ: ಉದ್ಯೋಗ ಮೇಳಗಳ ಮೂಲಕ ಅನೇಕ ಉದ್ಯೋಗಾವಕಾಶಗಳು ಯುವಕ, ಯುವತಿಯನ್ನು ಹುಡುಕಿಕೊಂಡು ಬರುತ್ತಿದ್ದು, ಇದರ ಸದ್ಬಳಕೆ ಪಡೆದು ಉತ್ತಮ ಜೀವನ ಕಟ್ಟಿಕೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ ತಿಳಿಸಿದರು.ನಗರದ ಮುನ್ಸಿಪಲ್ ಪ್ರೌಢಶಾಲೆ ಆವರಣದಲ್ಲಿ ರಾಜ್ಯ ಪದವೀಧರರ ಹಿತರಕ್ಷಣಾ ವೇದಿಕೆ ಹಾಗೂ ಉತ್ತರ ಕನ್ನಡ ಜಿಲ್ಲಾ ಶಿಕ್ಷಕ ಶಿಕ್ಷಕಿಯರ ನಿರಂತರ ಸಹಾಯವಾಣಿ ಶಿರಸಿ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳದಲ್ಲಿ ಮಾತನಾಡಿದರು.ಈ ಮೊದಲು ಲಂಚ ತೆಗೆದುಕೊಂಡು ಉದ್ಯೋಗ ಕೊಡುತ್ತಿದ್ದರು. ಈಗ ಅಂತಹ ಕಾಲ ಇಲ್ಲ. ನಿಮ್ಮ ವಿದ್ಯಾಭ್ಯಾಸ, ತರಬೇತಿ, ಅರ್ಹತೆಗೆ ಅನುಗುಣವಾಗಿ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಪಡೆದುಕೊಂಡು, ಉತ್ತಮವಾಗಿ ಕೆಲಸ ಮಾಡಿ. ಸರ್ಕಾರಿ ನೌಕರಿಯೇ ಬೇಕು ಎಂದು ಕಾಲಹರಣ ಮಾಡಬೇಡಿ. ಎಲ್ಲರಿಗೂ ಸರ್ಕಾರಿ ನೌಕರಿ ಸಿಗುವುದು ಅಸಾಧ್ಯ. ಸಿಕ್ಕ ಖಾಸಗಿ ಉದ್ಯೋಗಕ್ಕೆ ಸೇರಿ ಸುಂದರವಾದ ಜೀವನ ನಡೆಸಬೇಕು ಎಂದರು. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಮಾತನಾಡಿ, ರಾಜ್ಯ ಸರ್ಕಾರ ನಿರುದ್ಯೋಗಿ ಯುವಕರ ಅನುಕೂಲಕ್ಕಾಗಿ ಯುವನಿಧಿ ಯೋಜನೆ ಜಾರಿಗೊಳಿಸಿದೆ. ನಿರುದ್ಯೋಗಿಗಳು ಇಂತಹದ್ದೇ ಉದ್ಯೋಗ ಬೇಕು ಎಂದು ಸಮಯ ವ್ಯರ್ಥ ಮಾಡದೇ, ಸಿಕ್ಕ ಅವಕಾಶಗಳನ್ನು ಮೆಟ್ಟಿಲುಗಳನ್ನಾಗಿ ಮಾಡಿಕೊಂಡು, ಉನ್ನತ ಹುದ್ದೆ ಪಡೆಯಬೇಕು ಎಂದರು.
ರಾಜ್ಯ ಪದವೀಧರರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ರಾಘವೇಂದ್ರ ಬಾಸೂರ ಮಾತನಾಡಿ, ಉದ್ಯೋಗ ಮೇಳದಲ್ಲಿ 56 ಕಂಪನಿಗಳು ಭಾಗವಹಿಸಿದ್ದವು. 1,000ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು. 300ಕ್ಕೂ ಅಧಿಕ ಅಭ್ಯರ್ಥಿಗಳು ಸ್ಥಳದಲ್ಲೇ ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ. ಸೆಕೆಂಡ್ ರೌಂಡ್‌ನಲ್ಲಿ ಮತ್ತಷ್ಟು ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ. ಅಂಗವಿಕಲರಿಗೆ ವಿಶೇಷ ಅವಕಾಶಗಳು ದೊರೆತಿದ್ದು, ಉದ್ಯೋಗ ಮೇಳ ಅತ್ಯಂತ ಯಶಸ್ವಿಯಾಗಿ ಜರುಗಿದ್ದು, ನಮ್ಮ ಶ್ರಮ ಸಾರ್ಥಕವಾಗಿದೆ ಎಂದರು.ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ ಮಾತನಾಡಿದರು. ಉತ್ತಮ ಶಿಕ್ಷಕರು ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೇಳದಲ್ಲಿ ಮುತ್ತೂಟ್ ಫೈನಾನ್ಸ್, ರಿಲಯನ್ಸ್, ವಾಯ್ಸ ಆಫ್ ನೀಡಿ ಫೌಂಡೇಶನ್ ಸೇರಿದಂತೆ 50ಕ್ಕೂ ಅಧಿಕ ಕಂಪನಿಗಳು ಭಾಗವಹಿಸಿದ್ದವು. ಸಾವಿರಾರು ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗೆಣ್ಣಿ, ಹಿತರಕ್ಷಣಾ ವೇದಿಕೆ ಉಪಾಧ್ಯಕ್ಷ ಶಂಕರ ಮೆಹರವಾಡೆ, ಪ್ರಧಾನ ಕಾರ್ಯದರ್ಶಿ ತಾರಕೇಶ ಮಠದ, ಎಂ.ಎಂ. ಮೈದೂರ, ಪ್ರಭು ಬಿಷ್ಟನಗೌಡ್ರ, ಬಸವರಾಜ ಕುರಿಯವರ, ಶಿವಕುಮಾರ ಪಾಟೀಲ ಇತರರು ಇದ್ದರು. ಇಂದು ಹೇಮರಡ್ಡಿ ಮಲ್ಲಮ್ಮ ಜಯಂತಿಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ರೆಡ್ಡಿ ಜನಸಂಘದ ಸಹಯೋಗದಲ್ಲಿ ಶಿವಶರಣೆ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಮೇ 10ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಜರುಗಲಿದೆ.
ಹೊಸಮಠದ ಬಸವಶಾಂತಲಿಂಗ ಸ್ವಾಮಿಗಳು ಸಾನ್ನಿಧ್ಯ ವಹಿಸುವರು. ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ. ಹಿರೇಮಠ, ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ. ಮೈದೂರ ಪಾಲ್ಗೊಳ್ಳಲಿದ್ದಾರೆ. ಹಿರೇಕೆರೂರು ಸರ್ಕಾರಿ ಪ್ರಥಮದರ್ಜೆ ಕಾಲೇಜು ಉಪನ್ಯಾಸಕ ಡಾ. ಕಾಂತೇಶರೆಡ್ಡಿ ಗೋಡಿಹಾಳ ಅವರು ಉಪನ್ಯಾಸಕರಾಗಿ ಭಾಗವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ ಹಾವೇರಿ ಜಿಲ್ಲಾ ರೆಡ್ಡಿ ಜನಸಂಘದ ಕಾರ್ಯದರ್ಶಿ ಜಿ.ವಿ. ದೊಡ್ಡಗೌಡ್ರ ಅವರು ಪಾಲ್ಗೊಳ್ಳಲಿದ್ದಾರೆ.