ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಆಸ್ತಿ ಎಂದು ನೋಟಿಸ್‌ ಬಂದಿರುವುದಕ್ಕೆ ರೈತರು ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಗ್ರಾಮಸ್ಥರಿಗೆ ಧೈರ್ಯ ಹೇಳಿದರು. ಭಾನುವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ಕೆಲವು ಜಮೀನುಗಳನ್ನು ವಕ್ಫ್ ಆಸ್ತಿ ಎಂದು ನೋಟಿಸ್ ಜಾರಿ ಮಾಡಲಾಗಿದೆ ಎಂಬ ಆತಂಕದ ಹಿನ್ನೆಲೆಯಲ್ಲಿ ತಮ್ಮನ್ನು ಭೇಟಿ ಮಾಡಿದ ಹೊನವಾಡದ ಗ್ರಾಮಸ್ಥರು ಮತ್ತು ರೈತರೊಂದಿಗೆ ಅವರು ಮಾತನಾಡಿದರು. ಈ ವಿಷಯದ ಬಗ್ಗೆ ನಾನು ಈಗಾಗಲೇ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಅನಗತ್ಯವಾಗಿ ಯಾವುದೇ ಖಾಸಗಿ ಆಸ್ತಿ ಅಥವಾ ಜಮೀನುಗಳು ವಕ್ಫ್ ಹೆಸರಿನಲ್ಲಿ ದಾಖಲಾಗುವುದಿಲ್ಲ.

ಕನ್ನಡಪ್ರಭ ವಾರ್ತೆ ವಿಜಯಪುರ

ವಕ್ಫ್ ಆಸ್ತಿ ಎಂದು ನೋಟಿಸ್‌ ಬಂದಿರುವುದಕ್ಕೆ ರೈತರು ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಗ್ರಾಮಸ್ಥರಿಗೆ ಧೈರ್ಯ ಹೇಳಿದರು.

ಭಾನುವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ಕೆಲವು ಜಮೀನುಗಳನ್ನು ವಕ್ಫ್ ಆಸ್ತಿ ಎಂದು ನೋಟಿಸ್ ಜಾರಿ ಮಾಡಲಾಗಿದೆ ಎಂಬ ಆತಂಕದ ಹಿನ್ನೆಲೆಯಲ್ಲಿ ತಮ್ಮನ್ನು ಭೇಟಿ ಮಾಡಿದ ಹೊನವಾಡದ ಗ್ರಾಮಸ್ಥರು ಮತ್ತು ರೈತರೊಂದಿಗೆ ಅವರು ಮಾತನಾಡಿದರು. ಈ ವಿಷಯದ ಬಗ್ಗೆ ನಾನು ಈಗಾಗಲೇ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಅನಗತ್ಯವಾಗಿ ಯಾವುದೇ ಖಾಸಗಿ ಆಸ್ತಿ ಅಥವಾ ಜಮೀನುಗಳು ವಕ್ಫ್ ಹೆಸರಿನಲ್ಲಿ ದಾಖಲಾಗುವುದಿಲ್ಲ. ಯಾವುದೇ ನೋಟಿಸ್ ಪಡೆದರೆ ಅದಕ್ಕೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದರೆ ಸಾಕು. ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಈ ವಿಷಯ ಚರ್ಚಿಸಿದ್ದೇನೆ. ಮುಂದಿನವಾರ ಜಿಲ್ಲಾ ಮಟ್ಟದ ಸಭೆಯನ್ನು ನಡೆಸಿ, ಕೂಲಂಕಷವಾಗಿ ಎಲ್ಲ ವಿಷಯಗಳನ್ನು ಚರ್ಚಿಸಲಾಗುವುದು. ಜನರು ಹಾಗೂ ರೈತರು ಅನಗತ್ಯವಾಗಿ ಯಾವುದೇ ಆತಂಕ ಪಡುವ ಅವಶ್ಯಕತೆಯೇ ಇಲ್ಲ ಎಂದು ತಿಳಿಸಿದರು.

ಈ ವೇಳೆ ಹೊನವಾಡದ ರೈತರು ತಮ್ಮ ಆತಂಕವನ್ನು ಸಚಿವರ ಮುಂದೆ ತೋಡಿಕೊಂಡರು. ನಾಲ್ಕೈದು ತಲೆಮಾರಿನಿಂದ ಹೊನವಾಡದಲ್ಲಿ ಸಾಗುವಳಿ ಮಾಡಿಕೊಂಡು ಬಂದಿರುವ ನಾವು ನಮ್ಮ ಕಬ್ಜೆಯಲ್ಲಿರುವ 89 ಸರ್ವೇಗಳ ಜಮೀನುಗಳ 1200 ಎಕರೆ ಪ್ರದೇಶವು ವಕ್ಫ್ ಆಸ್ತಿ ಎಂದು ಜಿಲ್ಲಾ ವಕ್ಫ್ ಸಂಸ್ಥೆ ಹೇಳುತ್ತಿದೆ. ಸಚಿವರು ಮಧ್ಯ ಪ್ರವೇಶಿಸಿ ನಮಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಗ್ರಾಮಸ್ಥರಾದ ಬಸವರಾಜ ಪಾಂಡೆಗಾವಿ, ವಿಠ್ಠಲ ಚವಳಚಿ, ಭೀಮು ದೇವನಾಯಕ, ಮಹಾದೇವ ಜಾಧವ, ಬಾಪು ಮೋಳೆ, ಭೀರಪ್ಪ ಪಾಂಡೆಗಾವಿ, ವಿಠ್ಠಲ ಗಡದಿ, ಧರೆಪ್ಪ ತೊದಲಬಾಗಿ, ರಮೇಶ ನಾಟಿಕಾರ, ಮುತ್ತು ಹಿರೇಮಠ, ರವಿ ಟಕ್ಕಳಕಿ, ಲಕ್ಷ್ಮಣ ಕಾತ್ರಾಳ, ಸಾಬು ಕಾತ್ರಾಳ, ಸಚಿನ ಮಾನೆ, ಗುರುಸಿದ್ದ ಗೊಟ್ಯಾಳ, ಮಂಜು ಗೊಳಚಿ ಸೇರಿದಂತೆ ಮತ್ತಿತರರು ಇದ್ದರು.

ಅಲ್ಲದೇ, ಉಪಸ್ಥಿತರಿದ್ದ ತಹಸೀಲ್ದಾರ್‌ ಪ್ರಶಾಂತ ಚನಗೊಂಡ ಅವರಿಗೆ ವಕ್ಫ್ ನೋಟಿಸ್‌ ಮತ್ತು ಸಂಬಂಧಿತ ಆಸ್ತಿಗಳ ಕುರಿತು ಸಂಪೂರ್ಣ ವಿವರಗಳನ್ನು ಮುಂದಿನ ಸಭೆಯಲ್ಲಿ ಒದಗಿಸುವಂತೆ ಸಚಿವರು ಸೂಚಿಸಿದರು.

------------

ಕೋಟ್.....

ಅನಗತ್ಯವಾಗಿ ಯಾವುದೇ ಖಾಸಗಿ ಆಸ್ತಿ ಅಥವಾ ಜಮೀನುಗಳು ವಕ್ಫ್ ಹೆಸರಿನಲ್ಲಿ ದಾಖಲಾಗುವುದಿಲ್ಲ. ಯಾವುದೇ ನೋಟಿಸ್ ಪಡೆದರೆ ಅದಕ್ಕೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದರೆ ಸಾಕು. ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಈ ವಿಷಯ ಚರ್ಚಿಸಿದ್ದೇನೆ. ಮುಂದಿನವಾರ ಜಿಲ್ಲಾ ಮಟ್ಟದ ಸಭೆಯನ್ನು ನಡೆಸಿ, ಕೂಲಂಕಷವಾಗಿ ಎಲ್ಲ ವಿಷಯಗಳನ್ನು ಚರ್ಚಿಸಲಾಗುವುದು. ಜನರು ಹಾಗೂ ರೈತರು ಅನಗತ್ಯವಾಗಿ ಯಾವುದೇ ಆತಂಕ ಪಡುವ ಅವಶ್ಯಕತೆಯೇ ಇಲ್ಲ.

- ಎಂ.ಬಿ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ