ವಿದ್ಯಾದಾನದಂತೆ ರಕ್ತದಾನ ಶ್ರೇಷ್ಠದಾನ: ನ್ಯಾ. ಹನುಮಂತಪ್ಪ

| Published : Jun 15 2024, 01:08 AM IST

ವಿದ್ಯಾದಾನದಂತೆ ರಕ್ತದಾನ ಶ್ರೇಷ್ಠದಾನ: ನ್ಯಾ. ಹನುಮಂತಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ಅನ್ನದಾನ, ವಿದ್ಯಾದಾನದಂತೆ ರಕ್ತದಾನವು ಸಹ ಶ್ರೇಷ್ಠವಾದ ದಾನ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಹನುಮಂತಪ್ಪ ಹೇಳಿದರು.

- ಐ.ಡಿ.ಎಸ್.ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದ ವಿಶ್ವ ರಕ್ತದಾನಿಗಳ ದಿನಾಚರಣೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಅನ್ನದಾನ, ವಿದ್ಯಾದಾನದಂತೆ ರಕ್ತದಾನವು ಸಹ ಶ್ರೇಷ್ಠವಾದ ದಾನ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಹನುಮಂತಪ್ಪ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಶುಕ್ರವಾರ ನಗರದ ಐ.ಡಿ.ಎಸ್.ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದ ಮಲ್ಲೇಗೌಡ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ರಕ್ತದಾನಿಗಳ ದಿನ ಕಾರ್ಯಕ್ರಮ ಉದ್ಘಾಟಸಿ ಮಾತನಾಡಿದರು.ರಕ್ತದಾನ ಮಾಡುವುದು ಇಷ್ಟವಾದ ಕಾರ್ಯ, ರಕ್ತದಾನದಿಂದ ಇತರರ ಜೀವ ಉಳಿಸುವುದಲ್ಲದೆ ದೇಹ ದಲ್ಲಿ ಹೊಸ ರಕ್ತ ವೃದ್ಧಿಯಾಗಿ ಚೈತನ್ಯ ಮೂಡುತ್ತದೆ. 18 ವರ್ಷ ಮೇಲ್ಪಟ್ಟ ಯಾವುದೇ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡಬಹುದು. ಆರೋಗ್ಯವನ್ನು ಉತ್ತಮವಾಗಿರಿಸಿಕೊಂಡು ಯಾವುದೇ ಫಲಪೇಕ್ಷ ಇಲ್ಲದೆ ರಕ್ತದಾನ ಮಾಡುವುದರಿಂದ ಅಪಘಾತಕ್ಕೆ ಒಳಗಾದವರ ಜೀವ ಉಳಿಸಬಹುದು. ರಕ್ತಕ್ಕೆ ಯಾವುದೇ ಪರ್ಯಾಯ ವಸ್ತುವಿಲ್ಲ ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ತಾವು ದಾನ ಮಾಡಿದ 24 ಗಂಟೆಗಳಲ್ಲಿ ರಕ್ತ ಪುನರ್‌ ಉತ್ಪತ್ತಿಯಾಗುತ್ತದೆ. ಯಾವುದೇ ಆತಂಕ ಇಲ್ಲದೆ ಪ್ರತಿಯೊಬ್ಬ ಆರೋಗ್ಯವಂತ ಯುವಕರು ರಕ್ತದಾನ ಮಾಡಬೇಕು ಎಂದು ತಿಳಿಸಿದರು.ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ ಮಾತನಾಡಿ, ಯುವ ಜನತೆ ದೇಶದ ಆಧಾರ ಸ್ತಂಭ. ದುಶ್ಚಟಗಳಿಗೆ ಒಳಗಾಗಿ ತಮ್ಮ ಆರೋಗ್ಯ ಹದಗೆಡಿಸಿಕೊಳ್ಳದೆ ಆರೋಗ್ಯ ವಂತರಾಗಿ ರಕ್ತದಾನ ಮಾಡುವ ಮೂಲಕ ಇನ್ನೊಬ್ಬರ ಜೀವ ಉಳಿಸಲು ನೆರವಾಗಬೇಕು. ರಕ್ತದಾನ ಮಾಡಲು ಯಾವುದೇ ಆತಂಕ ಬೇಡ. ರಕ್ತದಾನ ಮಾಡುವ ಮೂಲಕ ಆರೋಗ್ಯ ಇನ್ನಷ್ಟು ಉತ್ತಮ ವಾಗಿರುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಐ.ಡಿ.ಎಸ್. ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ರಾದ ಡಾ. ಚಾಂದಿನಿ ಮಾತನಾಡಿ, ಕಾಲೇಜಿನ 40 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ರಕ್ತದಾನಕ್ಕೆ ಸ್ವಯಂ ಪ್ರೇರಿತವಾಗಿ ತಮ್ಮ ಹೆಸರು ನೋಂದಾಯಿಸಿದ್ದಾರೆ. ರಕ್ತದಾನ ಶ್ರೇಷ್ಠ ಕೆಲಸ, ಇದು ಪ್ರತಿ ಆರೋಗ್ಯ ವಂತ ವ್ಯಕ್ತಿಯ ಕರ್ತವ್ಯ ಆಗಾಗ ರಕ್ತದಾನ ಮಾಡಿ ರೋಗಗ್ರಸ್ತರು ಮತ್ತು ಗಾಯಗೊಂಡವರನ್ನು ಬದುಕಿಸಲು ಸಾಧ್ಯವಾಗುತ್ತದೆ ಎಂದರು.ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಹೆಚ್ಚು ಬಾರಿ ರಕ್ತದಾನ ಮಾಡಿದ ಐದು ಜನ ರಕ್ತದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲಾ ಆಸ್ಪತ್ರೆ ಉಪ ಅರೋಗ್ಯ ಶಿಕ್ಷಣ ಅಧಿಕಾರಿಗಳಾದ ಜಲಜಾಕ್ಷಿ ರಕ್ತದಾನ ಪ್ರತಿಜ್ಞಾವಿಧಿ ಬೋಧಿಸಿದರು. ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಹಾಗೂ ಜಿಪಂ ಸಿಇಒ ಡಾ. ಗೋಪಾಲಕೃಷ್ಣ, ಆರ್ ಸಿ ಎಚ್ ಅಧಿಕಾರಿ ಡಾ. ಮಂಜುನಾಥ ರಕ್ತದಾನ ಮಾಡಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಶ್ವಥ್ ಬಾಬು, ಮಲ್ಲೇಗೌಡ ಜಿಲ್ಲಾ ಸರ್ಕಾರಿ ಆಸ್ಪತ್ರೆ ರಕ್ತ ಕೇಂದ್ರದ ಹಿರಿಯ ತಜ್ಞ ಡಾ. ಎನ್‌. ಮುರುಳೀಧರ್‌, ಡಾ. ಗೀತಾ ಉಪಸ್ಥಿತರಿದ್ದರು.

14 ಕೆಸಿಕೆಎಂ 2ಚಿಕ್ಕಮಗಳೂರಿನ ಐಡಿಎಸ್ ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ರಕ್ತದಾನಿಗಳ ದಿನ ಕಾರ್ಯಕ್ರಮವನ್ನು ನ್ಯಾ. ಹನುಮಂತಪ್ಪ ಉದ್ಘಾಟಿಸಿದರು. ಜಿಪಂ ಸಿಇಒ ಡಾ. ಗೋಪಾಲಕೃಷ್ಣ, ಎಡಿಸಿ ನಾರಾಯಣರಡ್ಡಿ ಕನಕರಡ್ಡಿ, ಡಾ. ಅಶ್ವತ್‌ಬಾಬು ಇದ್ದರು.