ಚೆನ್ನಮ್ಮ ಶಿಕ್ಷಣ ಸಂಸ್ಥೆಗೆ ಮಿಸ್ಟಿ ಹಿಲ್ಸ್ ನಿಂದ 2 ಲಕ್ಷ ಮೌಲ್ಯದ ಕಂಪ್ಯೂಟರ್ ಕೊಡುಗೆ

| Published : Jan 14 2025, 01:01 AM IST

ಚೆನ್ನಮ್ಮ ಶಿಕ್ಷಣ ಸಂಸ್ಥೆಗೆ ಮಿಸ್ಟಿ ಹಿಲ್ಸ್ ನಿಂದ 2 ಲಕ್ಷ ಮೌಲ್ಯದ ಕಂಪ್ಯೂಟರ್ ಕೊಡುಗೆ
Share this Article
  • FB
  • TW
  • Linkdin
  • Email

ಸಾರಾಂಶ

ಮಡಿಕೇರಿಯ ರೋಟರಿ ಮಿಸ್ಟಿ ಹಿಲ್ಸ್‌ ವತಿಯಿಂದ 5 ಕಂಪ್ಯೂಟರ್‌ಗಳನ್ನು ಶಿಕ್ಷಣ ಸಂಸ್ಥೆಗೆ ನೀಡಲಾಯಿತು.

ಮಡಿಕೇರಿ: ಗರಗಂದೂರಿನ ಶ್ರೀಮತಿ ಡಿ.ಚೆನ್ನಮ್ಮ ಎಜುಕೇಷನ್ ಸೊಸೈಟಿಯ ವಜ್ರಮಹೋತ್ಸವ ಸಂದರ್ಭ ಮಡಿಕೇರಿಯ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ 2 ಲಕ್ಷ ರು. ಮೌಲ್ಯದ 5 ಕಂಪ್ಯೂಟರ್ ಗಳನ್ನು ಶಿಕ್ಷಣ ಸಂಸ್ಥೆಗೆ ನೀಡಲಾಯಿತು.ಸಂಸ್ಥೆಯಲ್ಲಿ ಆಯೋಜಿತ ವಜ್ರಮಹೋತ್ಸವ ಸಂದರ್ಭದಲ್ಲಿ ರೋಟರಿ ಮಾಜಿ ಜಿಲ್ಲಾ ಗವರ್ನರ್ ಎಚ್.ಆರ್.ಕೇಶವ್ ಕಂಪ್ಯೂಟರ್ ಗಳಿಗೆ ಚಾಲನೆ ನೀಡಿದರು. ಶ್ರೀಮತಿ ಡಿ.ಚೆನ್ನಮ್ಮ ಎಜುಕೇಷನ್ ಸೊಸೈಟಿಯ ಆಡಳಿತ ಮಂಡಳಿ ಅಧ್ಯಕ್ಷ ಕರ್ನಲ್ ಬಿ.ಜಿ.ವಿ. ಕುಮಾರ್, ಸಂಸ್ಥೆಯ ಕಾರ್ಯದರ್ಶಿ ಎಂ.ಬಿ. ಬೋಪಣ್ಣ, ಎಂ.ಜಿ.ಬೋಪಣ್ಣ, ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್, ಕಾರ್ಯದರ್ಶಿ ಕಟ್ಟೆಮನೆ ಸೋನಜಿತ್, ಮಾಜಿ ಸಹಾಯಕ ಗವರ್ನರ್‌ ಗಳಾದ ಡಾ.ಸಿ.ಆರ್. ಪ್ರಶಾಂತ್, ಅನಿಲ್ ಎಚ್.ಟಿ., ರತನ್ ತಮ್ಮಯ್ಯ, ರೋಟರಿ ಮಿಸ್ಟಿ ಹಿಲ್ಸ್ ಮಾಜಿ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಸದಸ್ಯ ಪಿ. ಡಬ್ಲು . ಫ್ರಾನ್ಸಿಸ್, ಕರ್ನಾಟಕ ಸರ್ಕಾರದ ಚೀಫ್ ಎಲೆಕ್ಟ್ರಿಕಲ್ ಇನ್ಸ್ ಪೆಕ್ಟರ್ ತೀತೀರ ರೋಷನ್ ಅಪ್ಪಚ್ಚು, ನಗರಸಭೆ ಮಾಜಿ ಪೌರಾಯುಕ್ತೆ ಬಿ.ಬಿ. ಪುಪ್ಪಾವತಿ, ಸಂಸ್ಥೆಯ ಪ್ರಾಂಶುಪಾಲ ಸಿ.ಜಿ. ಮಂದಪ್ಪ, ಮುಖ್ಯ ಶಿಕ್ಷಕಿ ರೀಟಾ, ಕಂಪ್ಯೂಟರ್ ವಿಭಾಗದ ಶಿಕ್ಷಕಿ ಸವಿತ, ಆಡಳಿತ ಮಂಡಳಿ ನಿರ್ದೇಶಕರು ಹಾಜರಿದ್ದರು.