ಸರ್ಕಾರಿ ಶಾಲೆಗೆ ಪ್ರೊಜೆಕ್ಟರ್ ಕೊಡುಗೆ

| Published : Jun 17 2024, 01:32 AM IST

ಸಾರಾಂಶ

ದಾಬಸ್‌ಪೇಟೆ: ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ, ಸ್ಮಾರ್ಟ್ ಕ್ಲಾಸ್ ಬೋಧನೆ ಕಡೆಗೆ ಹೆಚ್ಚು ಗಮನಹರಿಸುವ ಉದ್ದೇಶದಿಂದ ಶಾಲೆಗೆ ಪ್ರೊಜೆಕ್ಟರ್ ಕೊಡುಗೆ ನೀಡಲಾಗಿದೆ ಎಂದು ಇನ್ನರ್ ವೀಲ್ ಕ್ಲಬ್ ಚಳ್ಳಕೆರೆ ಶಾಖೆ ಅಧ್ಯಕ್ಷೆ ಮೀರಾ ತಿಳಿಸಿದರು.

ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇನ್ನರ್ ವೀಲ್ ಕ್ಲಬ್ ತುಮಕೂರು ಶಾಖೆಯಿಂದ ಪ್ರೊಜೆಕ್ಟರ್ ಕೊಡುಗೆ ನೀಡಿ ಮಾತನಾಡಿದರು.

ತುಮಕೂರು ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಕಾತ್ಯಾಯಿನಿ ಮಾತನಾಡಿ, ಸರ್ಕಾರಿ ಶಾಲೆಗಳು ಬಲಗೊಂಡರೆ ಗ್ರಾಮೀಣ ಭಾಗದಲ್ಲಿ ವಿದ್ಯಾಭ್ಯಾಸ ಹೆಚ್ಚಾಗುತ್ತದೆ. ನಾನು ಹಳ್ಳಿಯಿಂದ ಬಂದವನು. ಹಳ್ಳಿಯ ಶಾಲೆಗಳಲ್ಲಿ ತಂತ್ರಜ್ಞಾನ ಹೆಚ್ಚಾದರೆ ನಮ್ಮ ಹಳ್ಳಿ ಮಕ್ಕಳು ಎಲ್ಲ ರೀತಿಯ ಕೋರ್ಸ್‌ಗಳನ್ನು ಮಾಡುತ್ತಾರೆಂಬ ನಿಟ್ಟಿನಲ್ಲಿ ಕ್ಲಬ್ ವತಿಯಿಂದ ಕೊಡುಗೆ ನೀಡಿದ್ದೇವೆ ಎಂದರು.

ಸಿಆರ್‌ಪಿ ರಾಮಕೃಷ್ಣಯ್ಯ ಮಾತನಾಡಿ, ಖಾಸಗಿ ಶಾಲೆಗಳಲ್ಲಿ ಶ್ರೀಮಂತರ ಮಕ್ಕಳಿಗೆ ಸಿಗುವ ಸೌಲಭ್ಯಗಳು ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೂ ಸಿಗಬೇಕು, ಹಳ್ಳಿಯ ಮಕ್ಕಳು ಸಹ ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಬೇಕು ಎಂಬ ಮಹದಾಸೆಯಿಂದ ಇನ್ನರ್ ವೀಲ್ ಕ್ಲಬ್ ವತಿಯಿಂದ ನೀಡಿರುವ ಕೊಡುಗೆ ಅಪಾರವಾಗಿದೆ ಎಂದರು.

ಈ ಸಂದರ್ಭದಲ್ಲಿ ಮುಖ್ಯಶಿಕ್ಷಕ ಚಿಕ್ಕಣ್ಣ, ನಿವೃತ್ತ ಮುಖ್ಯಶಿಕ್ಷಕಿ ಸರೋಜಮ್ಮ, ವೇದಾವತಿ, ಮಂಜುಳ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಕ್ಲಬ್‌ನ ಸದಸ್ಯರು ಉಪಸ್ಥಿತರಿದ್ದರು.ಪೋಟೋ 9 :

ದಾಬಸ್‌ಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇನ್ನರ್ ವೀಲ್ ಕ್ಲಬ್ ವತಿಯಿಂದ ಪ್ರೊಜೆಕ್ಟರ್‌ ಕೊಡುಗೆ ನೀಡಿದರು.