ಸಾರಾಂಶ
ಯಲಬುರ್ಗಾ: ಬಸವಲಿಂಗೇಶ್ವರ ಸ್ವಾಮೀಜಿಗಳ ಮಠದ ಆಸ್ತಿ ಅಲ್ಪ-ಸ್ವಲ್ಪವಿದ್ದರೂ ಬಡ ಮಕ್ಕಳ ಶಿಕ್ಷಣಕ್ಕಾಗಿ ಎರಡು ಎಕರೆ ಭೂಮಿ ದಾನ ಮಾಡಿರುವ ಕಾರ್ಯ ಶ್ಲಾಘನೀಯ ಎಂದು ಬ್ಲಾಕ್ ಕಾಂಗೇಸ್ ತಾಲೂಕಾಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಹೇಳಿದರು.ಪಟ್ಟಣದ ಶ್ರೀ ಮೊಗ್ಗಿಬಸವೇಶ್ವರ ದೇವಸ್ಥಾನ ಆವರಣದಲ್ಲಿ ಗುರುವಾರ ರಾತ್ರಿ ಆಯೋಜಿಸಿದ್ದ ಶ್ರೀಧರ ಮುರಡಿ ಹಿರೇಮಠದಲ್ಲಿ ಮುರಡಿ ಹಿರೇಮಠದ ಪೀಠಾಧಿಪತಿ ಬಸಲಿಂಗೇಶ್ವರ ಸ್ವಾಮೀಜಿಗಳ ೨೨ನೇ ವರ್ಷದ ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಶಾಸಕ ಬಸವರಾಜ ರಾಯರಡ್ಡಿ ಗಮನಕ್ಕೆ ತಂದು ಪ್ರೌಢಶಾಲೆಗೆ ಬಸವಲಿಂಗೇಶ್ವರ ಸರ್ಕಾರಿ ಪ್ರೌಢ ಶಾಲೆಯೆಂದು ಸರ್ಕಾರದಿಂದ ನಾಮಕರಣ ಮಾಡಲಾಗುವುದು ಎಂದರು.ಶ್ರೀಮಠದಲ್ಲಿ ದಾಸೋಹ ಸೇವಿಸಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಉನ್ನತ ಹುದ್ದೆಯಲ್ಲಿರುವುದು ಹೆಮ್ಮೆಯ ಎನಿಸುತ್ತದೆ. ಇಂದಿನ ಶ್ರೀಗಳು ಪರಂಪರೆಯಾಗಿ ನಡೆಸಿಕೊಂಡು ಬಂದ ಸಂಪ್ರದಾಯಗಳನ್ನು ಈಗಿನ ಪೀಠಾಧಿಪತಿ ಬಸವಲಿಂಗೇಶ್ವರ ಸ್ವಾಮೀಜಿಗಳು ಮುನ್ನಡೆಸಿಕೊಂಡು ಶ್ರೀಮಠದಲ್ಲಿ ಪ್ರತಿ ವರ್ಷ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಜನಸಾಮಾನ್ಯರ ಮನದಲ್ಲಿ ಶ್ರೀಮಠ ಶಾಶ್ವತವಾಗಿ ಉಳಿಸಿ, ಬೆಳೆಸಿಕೊಂಡು ಬಂದಿದ್ದಾರೆ ಎಂದು ಹೇಳಿದರು.ಶ್ರೀಮಠದ ಪೀಠಾಧಿಪತಿ ಬಸವಲಿಂಗೇಶ್ವರ ಸ್ವಾಮೀಜಿ ತುಲಾಭಾರ ಸ್ವೀಕರಿಸಿದರು.ಪಪಂ ಮಾಜಿ ಅಧ್ಯಕ್ಷ ಸುರೇಶಗೌಡ ಶಿವನಗೌಡ್ರ, ಯುವ ಕಾಂಗ್ರೆಸ್ ಮುಖಂಡ ಅಂದಾನಗೌಡ ಪೊಲೀಸ್ ಪಾಟೀಲ, ಪಪಂ ಸದಸ್ಯೆ ಡಾ.ನಂದಿತಾ ದಾನರಡ್ಡಿ, ಗವಿಮಠದ ನವಲಗುಂದದ ಬಸವಲಿಂಗ ಸ್ವಾಮೀಜಿ, ಜಿಗೇರಿ ಹಿರೇಮಠದ ಗುರುಸಿದ್ದೇಶ್ವರ ಸ್ವಾಮೀಜಿ, ಚಿಕ್ಕಮ್ಯಾಗೇರಿ-ಇಟಗಿ ಡಾ.ಗುರುಶಾಂತವೀರ ಸ್ವಾಮೀಜಿ, ಡಾ.ಮಹಾದೇವ ದೇವರು ಇದ್ದರು.ಅತಿಥಿಗಳಾಗಿ ಪಪಂ ಸದಸ್ಯ ರೇವಣೆಪ್ಪ ಹಿರೇಕುರಬರ, ಡಾ.ಬಿ.ವಿ.ಇಟಗಿ, ಛೇತ್ರಪ್ಪ ಛಲವಾದಿ ಪಾಲ್ಗೊಂಡಿದ್ದರು. ಮಂಗಳೇಶ ಶ್ಯಾಗೋಟಿ, ಶರಣಕುಮಾರ ಬಂಡಿ ಸಂಗೀತ ಸೇವೆ ನೀಡಿದರು. ಶಿಕ್ಷಕ ಬಸವರಾಜ ಕೊಂಡಗುರಿ ನಿರೂಪಿಸಿದರು. ಬಳಿಕ ಅನ್ನ ಸಂತರ್ಪಣೆ ನಡೆಯಿತು.