ಸಾರಾಂಶ
ರಾಮನಗರ: ಸವಿತಾ ಸಮಾಜದ ನಿಷೇಧಿತ ಪದ ಬಳಕೆ ಮಾಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ಸವಿತಾ ಸಮಾಜದ ಬಾಂಧವರು ನಗರದಲ್ಲಿ ಮಂಗಳವಾರ ಕತ್ತೆಗಳ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು.
ನಗರದ ಐಜೂರು ವೃತ್ತದಲ್ಲಿ ಜಿಲ್ಲಾ ಸವಿತಾ ಸಮಾಜ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾ ಹಿಂದುಳಿದ ಜಾತಿಗಳ ಮಹಾ ಒಕ್ಕೂಟದ ನೇತೃತ್ವದಲ್ಲಿ ಸವಿತಾ ಸಮಾಜದ ಬಾಂಧವರು ಸಿ.ಟಿ.ರವಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.ಈ ವೇಳೆ ಮಾತನಾಡಿದ ಹಿಂದುಳಿದ ಜಾತಿಗಳ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ರೈಡ್ ನಾಗರಾಜು, ಯಾವುದೇ ಶುಭ ಕಾರ್ಯ ನಡೆಯಲು ಮಂಗಳವಾದ್ಯ ನುಡಿಸುವ ಸವಿತಾ ಸಮಾಜದ ಬಂಧುಗಳ ಬಗ್ಗೆ ಅವಹೇಳನ ಪದ ಬಳಕೆ ಮಾಡಿರುವ ಸಿ.ಟಿ. ರವಿ ವಿರುದ್ಧ ಜಾತಿ ನಿಂದನೆ ಕೇಸು ದಾಖಲಿಸಬೇಕು. ಈ ಕೂಡಲೇ ಸವಿತಾ ಸಮಾಜದ ಬಂಧುಗಳ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.
ಸವಿತಾ ಸಮಾಜದ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಎಸ್. ಮುತ್ತುರಾಜ್ ಮಾತನಾಡಿ, ಸಿ.ಟಿ. ರವಿ ತಾವೊಬ್ಬ ಜನಪ್ರತಿನಿಧಿಯಾಗಿ ಒಂದು ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ. ಈ ಕೂಡಲೇ ತಮ್ಮ ಹೇಳಿಕೆ ಹಿಂಪಡೆದು ಸವಿತಾ ಸಮಾಜದ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಜಿ.ವಿ. ಶ್ರೀನಿವಾಸ್, ಉಪಾಧ್ಯಕ್ಷ ಮುನಿಕೃಷ್ಣ, ಮಾಗಡಿ ತಾಲ್ಲೂಕು ಅಧ್ಯಕ್ಷ ಸುರೇಶ್, ಕನಕಪುರ ತಾಲೂಕು ಅಧ್ಯಕ್ಷ ಶ್ರೀನಿವಾಸ್, ಚನ್ನಪಟ್ಟಣ ತಾಲೂಕು ಅಧ್ಯಕ್ಷ ಆರ್.ಪಿ. ಲೋಕೇಶ್, ಹಿಂದುಳಿದ ಜಾತಿಗಳ ಮಹಾ ಒಕ್ಕೂಟದ ಯುವ ಘಟಕದ ಅಧ್ಯಕ್ಷ ಜನಾರ್ಧನ್, ಮಹಿಳಾ ಘಟಕದ ಶೃತಿ, ಮಂಜುಳಾ, ಅನಿತಾ, ಹಾರೋಹಳ್ಳಿ ತಾಲೂಕು ಅಧ್ಯಕ್ಷ ಶ್ರೀನಿವಾಸ್, ಮುಖಂಡರಾದ ವೆಂಕಟೇಶ್, ರವಿಕುಮಾರ್, ಪ್ರವೀಣ್, ವಿನು ಶಿವಾನಂದ್, ರಮೇಶ್, ಗೋವಿಂದ್ ರಾಜು, ಭರತ್ ಮತ್ತಿತರರು ಭಾಗವಹಿಸಿದ್ದರು.
4ಕೆಆರ್ ಎಂಎನ್ 1.ಜೆಪಿಜಿರಾಮನಗರದ ಐಜೂರು ವೃತ್ತದಲ್ಲಿ ಸವಿತಾ ಸಮಾಜದ ಬಾಂಧವರು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಕತ್ತೆಗಳ ಮೆರವಣಿಗೆ ನಡೆಸಿ ಪ್ರತಿಭಟಿಸಿದರು.
;Resize=(128,128))
;Resize=(128,128))
;Resize=(128,128))
;Resize=(128,128))