ಹೊಸಕೋಟೆ: ದಾನಿಗಳ ನೆರವಿನೊಂದಿಗೆ ಅಂಗನವಾಡಿ ಕೇಂದ್ರ ನಿರ್ಮಿಸುತ್ತಿದ್ದು, ಶೈಕ್ಷಣಿಕ ಪ್ರಗತಿಗೆ ಸರ್ಕಾರದ ಜೊತೆಗೆ ದಾನಿಗಳು ಕೈಜೋಡಿಸಿದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ಹೊಸಕೋಟೆ: ದಾನಿಗಳ ನೆರವಿನೊಂದಿಗೆ ಅಂಗನವಾಡಿ ಕೇಂದ್ರ ನಿರ್ಮಿಸುತ್ತಿದ್ದು, ಶೈಕ್ಷಣಿಕ ಪ್ರಗತಿಗೆ ಸರ್ಕಾರದ ಜೊತೆಗೆ ದಾನಿಗಳು ಕೈಜೋಡಿಸಿದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಮುತ್ಸಂದ್ರ ಗ್ರಾಮದಲ್ಲಿ ಟಿ.ಕೃಷ್ಣಾರೆಡ್ಡಿ, ಬಾಬುರೆಡ್ಡಿ ಹಾಗೂ ಪಟೇಲ್ ಬಾಬು ಅವರ ಕುಟುಂಬದಿಂದ ಸುಮಾರು ೩೦ ಲಕ್ಷ ರುಪಾಯಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಹೈಟೆಕ್ ಮಾದರಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಖಾಸಗಿ ಶಿಕ್ಷಣ ಸಂಸ್ಥೆಗಳ ಪೈಪೋಟಿ ನಡುವೆ ಸರ್ಕಾರಿ ಶಾಲೆಗಳು ಇನ್ನು ತಮ್ಮ ಗಟ್ಟಿತನ ಉಳಿಸಿಕೊಳ್ಳಲು ಸರ್ಕಾರದ ಜೊತೆಗೆ ಇಂತಹ ದಾನಿಗಳ ಬೆನ್ನೆಲುಬಾಗಿ ನಿಂತಿರುವುದೇ ಕಾರಣ. ಟಿ.ಕೃಷ್ಣಾರೆಡ್ಡಿ , ಬಾಬುರೆಡ್ಡಿ ಹಾಗೂ ಪಟೇಲ್ ಬಾಬು ಅವರ ಕುಟುಂಬದ ನೆರವು ಮುಂದಿನ ಪೀಳಿಗೆಯ ಮಕ್ಕಳ ಶಿಕ್ಷಣ ಭವಿಷ್ಯಕ್ಕೆ ದಾರಿ ದೀಪವಾಗಿದೆ ಎಂದರು.

ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಅಧ್ಯಕ್ಷ ಕೋಡಿಹಳ್ಳಿ ಸುರೇಶ್, ಮಾಜಿ ಅಧ್ಯಕ್ಷ ಮುತ್ಸಂದ್ರ ಬಾಬುರೆಡ್ಡಿ, ಗ್ರಾಪಂ ಅಧ್ಯಕ್ಷ ಪಟೇಲ್ ಬಾಬು, ಪಿಡಿಒ ಮೆಹಬೂಬ್ ಪಾಷಾ, ತಾಪಂ ಇಒ ಮುನಿಯಪ್ಪ, ಹೊಸಕೋಟೆ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಕೃಷ್ಣಾರೆಡ್ಡಿ, ಮುಖಂಡರಾದ ಮುರಳಿ, ಎಂ.ಸಿ.ವೆಂಕಟೇಶ್ ಇತರರು ಹಾಜರಿದ್ದರು.

ಫೋಟೋ – 23 ಹೆಚ್‌ಎಸ್‌ಕೆ 2

ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಶಾಸಕ ಶರತ್ ಬಚ್ಚೇಗೌಡ ಭೂಮಿ ಪೂಜೆ ನೆರವೇರಿಸಿದರು.