ಸಾರಾಂಶ
ಸರ್ಕಾರಿ ಕೆಲಸ ಸಿಕ್ಕಿದೆ ಎಂದು ನೆಪ ಮಾತ್ರಕ್ಕೆ ನೌಕರಿ ಮಾಡೋದಲ್ಲ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ
ಮಸ್ಕಿ: ಸರ್ಕಾರಿ ಕೆಲಸ ಸಿಕ್ಕಿದೆ ಎಂದು ನೆಪ ಮಾತ್ರಕ್ಕೆ ನೌಕರಿ ಮಾಡೋದಲ್ಲ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ ಎಂದು ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್.ಬಸನಗೌಡ ತುರ್ವಿಹಾಳ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ಪ್ರಗತಿ ಪರೀಶಿಲನಾ ಸಭೆಯ ಅಧ್ಯಕ್ಷತೆವಹಿಸಿ ಮಂಗಳವಾರ ಮಾತನಾಡಿ, ಈಗಾಗಲೇ ಬೇಸಿಗೆ ಆರಂಭವಾಗಿರುವುದರಿಂದ ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮದಲ್ಲಿನ ವಿದ್ಯುತ್ ಸೇರಿದಂತೆ ವಿವಿಧ ಸಮಸ್ಯೆಗಳ ಪಟ್ಟಿ ಸಿದ್ಧಪಡಿಸಿ ತನ್ನಿ ಅಂದಾಗ ಸಮಸ್ಯೆಗಳು ಇತ್ಯರ್ಥ ಪಡಿಸಲು ಸಾಧ್ಯವಾಗುತ್ತದೆ. ಪ್ರತಿಯೊಂದು ಗ್ರಾಮ ಹಾಗೂ ಪಟ್ಟಣಗಳಲ್ಲಿ ಖಾಸಗಿ ಬೋರ್ವೆಲ್ ಸೇರಿದಂತೆ ಟ್ಯಾಂಕರ್ ಬಳಸಿಕೊಂಡು ನೀರಿನ ಸಮಸ್ಯೆ ನೀಗಿಸಿ ಇನ್ನೂ ನಾಲ್ಕು ತಿಂಗಳುಗಳ ಕಾಲ ನೀರಿನ ಅಭಾವ ಸೃಷ್ಟಿಯಾಗದಂತೆ ಮುಂಜಾಗ್ರತೆ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು. ಒಂದು ವೇಳೆ ನೀರಿನ ತೊಂದರೆ ಉಂಟಾದರೆ ಅಧಿಕಾರಿಗಳೇ ನೇರ ಹೊಣೆಯಾಗುತ್ತಿರಿ ಎಂದು ಎಚ್ಚರಿಕೆ ನೀಡಿದರು.ಕಾಲುವೆಯಿಂದ ಬಳಗಾನೂರು ಹಳ್ಳಕ್ಕೆ ನೀರು: ತುಂಗಭದ್ರಾ ಕಾಲುವೆಗೆ ನೀರು ಬಂದಾಗ ಬಳಗಾನೂರು ಹಳ್ಳಕ್ಕೆ ನೀರು ಹರಿಸುವ ವ್ಯವಸ್ಥೆ ಮಾಡಿ ಇದರಿಂದ ಜನರಿಗೆ ಹಾಗೂ ಜಾನುವಾರುಗಳಿಗೆ ಅನುಕೂಲವಾಗುತ್ತದೆ ಎಂದು ನೀರಾವರಿ ಇಲಾಖೆಯ ದಾವೂದ್ ಅವರಿಗೆ ಶಾಸಕರು ಸೂಚನೆ ನೀಡಿದರು.
ಗ್ರಾಪಂ ಅಧಿಕಾರಿಗಳಿಗೆ ತರಾಟೆ: ಮಸ್ಕಿ ಕ್ಷೇತ್ರದ ಪಾಮನ ಕಲ್ಲೂರು ಗ್ರಾಮ ಪಂಚಾಯಿತಿಯ ಪಿಡಿಓ ಕಚೇರಿಗೆ ಬರುವುದಿಲ್ಲ ಎಂದು ಆರೋಪಗಳು ಕೇಳಿ ಬಂದಿದೆ ಇನ್ನೂ ಮುಂದೆ ಸರಿಯಾಗಿ ಕೆಲಸ ಮಾಡದ್ದಿದ್ದರೆ ಹೀಗೆ ಮಾಡಿದರೆ ಅಲ್ಲಿಂದ ತೆಗೆದು ಹಾಕುತ್ತೇನೆ ಎಂದರು ತರಾಟೆಗೆ ತೆಗೆದುಕೊಂಡರು. ಅಲ್ಲದೇ ತೋರದಿನ್ನಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೋರ್ವೆಲ್ ಕೊರೆಸಿದರು ನಿಮಗೆ ಮಾಹಿತಿ ಇಲ್ಲ ಎಂದರೆ ನೀವೂ ಗ್ರಾಮಗಳಿಗೆ ಭೇಟಿ ನೀಡಿ ಎಷ್ಟು ದಿನ ಆಗಿದೆ ಎಂದು ಶಾಸಕ ಆರ್. ಬಸನಗೌಡ ಪಿಡಿಒಗೆ ತರಾಟೆಗೆ ತೆಗೆದುಕೊಂಡ ಘಟನೆ ಜರುಗಿತು. ಕೃಷಿ ಇಲಾಖೆಯ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲವಂತೆ ಆದ್ದರಿಂದ ನಾನೇ ಕಚೇರಿಗೆ ಬರ್ತೀನಿ ಎಂದರು.ಈ ಸಂದರ್ಭದಲ್ಲಿ ತಾಪಂ ಇಒ ಉಮೇಶ್, ಗ್ರೇಡ್-2 ತಹಸೀಲ್ದಾರ್ ಕೆ.ರಾಘವೇಂದ್ರರಾವ್, ಸಿಪಿಐ ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.