ಸಾರಾಂಶ
ಪ್ರಸ್ತುತ ಮಳೆಗಾಲ ಪ್ರಾರಂಭವಾಗುತ್ತಿದ್ದು, ವಾಹನಗಳ ಚಾವಣಿ ಸೋರದಂತೆ ಕ್ರಮಕೈಗೊಳ್ಳಲು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಬಸ್ ಸಾರಿಗೆ ಕಾರ್ಯಾಚರಣೆ ಮಾಡಿ.
ಹುಬ್ಬಳ್ಳಿ:
ಇಲ್ಲಿನ ಸಿಬಿಟಿ ಬಸ್ ನಿಲ್ದಾಣಕ್ಕೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ಶುಕ್ರವಾರ ಭೇಟಿ ನೀಡಿ ಪಾಸ್ ವಿತರಣೆ ವ್ಯವಸ್ಥೆಯ ಕುರಿತು ಪರಿಶೀಲಿಸಿದರು.ಇದೇ ವೇಳೆ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿದ ಓರ್ವ ವಿದ್ಯಾರ್ಥಿಯ ಬಸ್‌ಪಾಸ್‌ನ್ನು ವ್ಯವಸ್ಥಾಪಕ ನಿರ್ದೇಶಕರು ವಿತರಿಸಿದರು. ವಿದ್ಯಾರ್ಥಿ ಬಸ್‌ಪಾಸ್ ವಿತರಣೆಯಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗೆ ಕಟ್ಟುನಿಟ್ಟಾಗಿ ಕ್ರಮಕೈಗೊಳ್ಳಲು ನಿರ್ದೇಶಿಸಿದರು.
ನಂತರ ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗ ಮತ್ತು ಹುಬ್ಬಳ್ಳಿ ಗ್ರಾಮಾಂತರ ವಿಭಾಗಗಳಿಗೆ ಭೇಟಿ ನೀಡಿ ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ಕಚೇರಿಯಲ್ಲಿ ಸಭೆ ನಡೆಸಿದರು. ನಂತರ ಸಿಬಿಟಿ ಬಹುಮಹಡಿ ಕಟ್ಟಡದ ವಾಣಿಜ್ಯ ಮಳಿಗೆ, ಬಸ್ ನಿಲ್ದಾಣದ ಸ್ವಚ್ಛತೆ ಪರಿಶೀಲಿಸಿದರು.ಪ್ರಸ್ತುತ ಮಳೆಗಾಲ ಪ್ರಾರಂಭವಾಗುತ್ತಿದ್ದು, ವಾಹನಗಳ ಚಾವಣಿ ಸೋರದಂತೆ ಕ್ರಮಕೈಗೊಳ್ಳಲು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಬಸ್ ಸಾರಿಗೆ ಕಾರ್ಯಾಚರಣೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಚಿಸಿದರು. ನಂತರ ಹುಬ್ಬಳ್ಳಿಯ ಸಿಬಿಟಿಯಿಂದ ಹೊಸೂರ ಕ್ರಾಸ್‌ವರೆಗೆ ಬಿಆರ್‌ಟಿಎಸ್ ಬಸ್ಸಿನಲ್ಲಿ ಪ್ರಯಾಣಿಸಿದರು.