ಸಾರಾಂಶ
ಗ್ರಾಮಾಂತರ ಪ್ರದೇಶದಲ್ಲಿ ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟಲು ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಇನ್ಸ್‌ಪೆಕ್ಟರ್ ಪಿ. ಆನಂದ್ ಕುಮಾರ್ ತಿಳಿಸಿದರು.
ಕನ್ನಡಪ್ರಭ ವಾರ್ತೆ ಹನೂರು
ಗ್ರಾಮಾಂತರ ಪ್ರದೇಶದಲ್ಲಿ ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟಲು ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಇನ್ಸ್‌ಪೆಕ್ಟರ್ ಪಿ. ಆನಂದ್ ಕುಮಾರ್ ತಿಳಿಸಿದರು.ಪಟ್ಟಣ ಪೊಲೀಸ್ ಠಾಣೆಯಲ್ಲಿ ಬಿಎಂಜಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲೆ ನಡೆಯುವ ದೈಹಿಕ ಮಾನಸಿಕವಾಗಿ ನಡೆಯುವ ದೌರ್ಜನ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಇತ್ತೀಚೆಗೆ ಆಯೋಜಿಸಲಾಗಿದೆ. ಜೊತೆಗೆ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.ಮಕ್ಕಳು ತಮ್ಮ ಮೇಲೆ ನಡೆಯುವ ದೌರ್ಜನ್ಯಗಳನ್ನು ನೇರವಾಗಿ ಎದುರಿಸಲು ಪೊಲೀಸ್ ಇಲಾಖೆ ನಿಮ್ಮೊಂದಿಗೆ ಇದೆ. ಗ್ರಾಮಗಳಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆ ತಡೆಗಟ್ಟಲು ಮಕ್ಕಳು ಪೊಲೀಸ್ ಠಾಣೆಗೆ ಬಂದು ತಿಳಿಸಬೇಕು. ಅಂತಹ ಮಕ್ಕಳ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ಜೊತೆಗೆ ಅನಾಹುತ ಅಥವಾ ಘಟನೆಗಳು ನಡೆಯುವುದನ್ನು ತಡೆಗಟ್ಟಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಪಿಎಸ್ಐ ಮಂಜುನಾಥ್ ಪ್ರಸಾದ್ ಮಾತನಾಡಿ, ಪೊಲೀಸ್ ಠಾಣೆ ಎಂದರೆ ಭಯಬೇಡ. ವಿದ್ಯಾರ್ಥಿಗಳು ತಮ್ಮಲ್ಲಿ ಇರುವ ಸಮಸ್ಯೆಗಳನ್ನು ಹೇಳಿಕೊಳ್ಳಲು ಪೊಲೀಸರಿಗೆ ನೇರವಾಗಿ ತಿಳಿಸಿ ಎಂದು ತಿಳಿಸಿದರು.ಬಿಎಂಜಿ ಪ್ರೌಢಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಪೊಲೀಸ್ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.