ಮೇಕೆದಾಟು ಯೋಜನೆಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಲಾಗಿದ್ದು, ಈ ಯೋಜನೆಯ ಕಚೇರಿ ಆರಂಭಿಸಿದ್ದೇವೆ. ಶೀಘ್ರವೇ ಕೇಂದ್ರಕ್ಕೆ ಡಿಪಿಆರ್‌ ಸಲ್ಲಿಸುತ್ತೇವೆ. ಕೇಂದ್ರ ಸರ್ಕಾರ ಅನುಮತಿ ನೀಡಿದ ಬಳಿಕ ಯೋಜನೆಯ ಭೂಮಿ ಪೂಜೆ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ

ಮೇಕೆದಾಟು ಯೋಜನೆಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಲಾಗಿದ್ದು, ಈ ಯೋಜನೆಯ ಕಚೇರಿ ಆರಂಭಿಸಿದ್ದೇವೆ. ಶೀಘ್ರವೇ ಕೇಂದ್ರಕ್ಕೆ ಡಿಪಿಆರ್‌ ಸಲ್ಲಿಸುತ್ತೇವೆ. ಕೇಂದ್ರ ಸರ್ಕಾರ ಅನುಮತಿ ನೀಡಿದ ಬಳಿಕ ಯೋಜನೆಯ ಭೂಮಿ ಪೂಜೆ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ದರ್ಗಾ- ಭರಚುಕ್ಕಿ ಮುಖ್ಯರಸ್ತೆಯ ಸಮೀಪದಲ್ಲಿ ಹೆಲಿಪ್ಯಾಡ್‌ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯ ಜಮೀನು ನೀಡಲು ಸ್ಥಳ ಗುರುತಿಸುತ್ತಿದ್ದೇವೆ. ಕಾವೇರಿ ವಿಚಾರದಲ್ಲಿ ತಮಿಳುನಾಡಿಗೆ 177 ಟಿಎಂಸಿ ನೀರನ್ನು ಬಿಡಲೇಬೇಕು ಎಂದು ಸ್ಪಷ್ಟ ಆದೇಶ ನೀಡಲಾಗಿದೆ. ಇದನ್ನು ಹೇಗೆ ಬಗೆಹರಿಸಬೇಕು ಎಂಬುದನ್ನು ಮುಂದಿನ ದಿನಗಳಲ್ಲಿ ಚರ್ಚೆ ಮಾಡುತ್ತೇನೆ. ಮೇಕೆದಾಟು ಯೋಜನೆಗೆ ಆಕ್ಷೇಪ ಸಲ್ಲಿಸಲು ತಮಿಳುನಾಡಿಗೆ ಯಾವುದೇ ರೀತಿಯ ಹಕ್ಕಿಲ್ಲ. ಇದರ ಬಗ್ಗೆ ಕೇಂದ್ರ ಜಲ ಆಯೋಗ ತೀರ್ಮಾನ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ ಎಂದರು.

ನಾನು ಯಾವಾಗ ಸಿಎಂ ಆಗಬೇಕು

ಎಂದುದನ್ನು ಕಾಲ ತಿಳಿಸುತ್ತೆ: ಡಿಕೆಶಿಕಾಲ, ಸರಿಯಾದ ಸಮಯ ನಾನು ಯಾವಾಗ ಸಿಎಂ ಆಗಬೇಕು ಎಂಬುದನ್ನು ತೀರ್ಮಾನ ಮಾಡಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸುದ್ದಿಗಾರರರು ನೀವು ಯಾವಾಗ ಸಿಎಂ ಆಗುತ್ತೀರಿ ಎಂದು ಪ್ರಶ್ನಿಸುತ್ತಿದ್ದಂತೆ ‘ಅದನ್ನು ಕಾಲ ತೀರ್ಮಾನ ಮಾಡುತ್ತದೆ. ಮಾಧ್ಯಮದವರ ಸಹಕಾರವೂ ಅಗತ್ಯ’ ಎಂದರು.ಚಾಮರಾಜನಗರ ಐತಿಹಾಸಿಕವಾದಂತಹ ಜಿಲ್ಲೆ. ಧಾರ್ಮಿಕ, ಪ್ರಾಕೃತಿಕ ಸಂಪತ್ತು ಹೊಂದಿರುವ ಕಾವೇರಿ ನದಿ ತೀರದಲ್ಲಿರುವ ಪವಿತ್ರ ಪುಣ್ಯಭೂಮಿಯಾಗಿದೆ. ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೌಢ್ಯ. ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತ ಇದ್ದಾನೆ. ಮಲೆ ಮಹದೇಶ್ವರ, ಮಧ್ಯರಂಗ, ಸಿದ್ದಪ್ಪಾಜಿ, ಗೋಪಾಲಸ್ವಾಮಿ ಪುಣ್ಯಕ್ಷೇತ್ರಗಳಿಗೆ ಬಂದು ಜನ ನೆಮ್ಮದಿ ಕಂಡುಕೊಳ್ಳುತ್ತಾರೆ. ಬೆಳಗ್ಗೆಯಿಂದ ಸೂರ್ಯಮುಳುಗುವ ವೇಳೆಗೆ ಶ್ರೀರಂಗಪಟ್ಟಣ ಆದಿರಂಗ, ಮಧ್ಯರಂಗ ಹಾಗೂ ತಮಿಳುನಾಡಿನಲ್ಲಿರುವ ಅಂತ್ಯರಂಗ ದೇವಾಲಯಗಳಿಗೆ ಭೇಟಿ ನೀಡುವ ಪದ್ಧತಿ ನಡೆದುಕೊಂಡು ಬಂದಿದೆ ಎಂದರು.