ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದಲ್ಲಿ ಸಂವಿಧಾನ ಶಿಲ್ಪಿ ಹಾಗೂ ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ ಅವರ 133ನೇ ಜನ್ಮದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಭಾನುವಾರ ಅದ್ದೂರಿಯಿಂದ ಆಚರಿಸಲಾಯಿತು.ಮೊದಲಿಗೆ ಸದಾಶಿವ ನಗರದಲ್ಲಿರುವ ಬುದ್ಧ ವಿಹಾರದಲ್ಲಿ ಬುದ್ಧನ ಪ್ರತಿಮೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಎಸ್‌ಪಿ ಡಾ.ಭೀಮಾಶಂಕರ ಗುಳೇದ, ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್, ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಪುಷ್ಪ ಸಮರ್ಪಿಸಿದರು. ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾಡಳಿತ ವತಿಯಿಂದ ಡಾ.ಬಿ.ಆರ್ ಅಂಬೇಡ್ಕರ ಜಯಂತಿಯನ್ನು ಸಂಭ್ರಮ ದಿಂದ ಆಚರಿಸಲಾಗುತ್ತಿದೆ. ,ಒಂದು ವಾರಗಳ ಕಾಲ ಜಿಲ್ಲೆಯಾದ್ಯಂತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ ಅವರು ವಿಶ್ವದಲ್ಲಿಯೇ ಮಾದರಿ ಹಾಗೂ ಅತ್ಯಂತ ಶ್ರೇಷ್ಠ ಸಂವಿಧಾನನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಿದ್ದಾರೆ ಅವರ ತತ್ವಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಬಳಿಕ ಧರ್ಮವೀರ ಸಂಭಾಜಿ ವೃತ್ತದಲ್ಲಿ ಡಾ. ಬಿ.ಆರ್.ಅಂಬೇಡ್ಕರ ಮೆರವಣಿಗೆ ಚಾಲನೆ ನೀಡಿದರು. ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಡಾ. ಅಂಬೇಡ್ಕರ ಉದ್ಯಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಜ್ಯೋತಿಯನ್ನು ಸ್ವಾಗತಿಸಿದರು. ಬಳಿಕ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.ಈ ಸಮಯದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ , ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್, ಜಿಪಂ ಸಿಇಒ ರಾಹುಲ್ ಶಿಂಧೆ, ಪಾಲಿಕೆ ಆಯುಕ್ತ ಪಿ.ಎನ್.ಲೋಕೇಶ್, ದಲಿತ ಮುಖಂಡ ಮಲ್ಲೇಶ್ ಚೌಗಲೆ ದಲಿತ ಸಂಘಟನೆಗಳ ಮುಖಂಡರು ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))