ಡಾ.ಅಂಬೇಡ್ಕರ್, ಡಾ.ಬಾಬು ಜಗಜೀವನ್ ರಾಂ ಬೃಹತ್ ಮೆರವಣಿಗೆ

| Published : May 13 2024, 01:09 AM IST

ಡಾ.ಅಂಬೇಡ್ಕರ್, ಡಾ.ಬಾಬು ಜಗಜೀವನ್ ರಾಂ ಬೃಹತ್ ಮೆರವಣಿಗೆ
Share this Article
  • FB
  • TW
  • Linkdin
  • Email

ಸಾರಾಂಶ

ಬೀರೂರು. ಸರಸ್ವತಿಪುರಂ ಬಡಾವಣೆ ಶ್ರೀ ಮೈಲಾರಲಿಂಗಸ್ವಾಮಿ ಯುವಕ ಸಂಘ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ 133ನೇ ಜಯಂತ್ಯುತ್ಸವದ ಅಂಗವಾಗಿ ಭಾನುವಾರ ಸಂಜೆ ಬೃಹತ್ ಮೆರವಣಿಗೆ ನಡೆಸಿದರು.

ಶ್ರೀ ಮೈಲಾರಲಿಂಗಸ್ವಾಮಿ , ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದಿಂದ ಜಯಂತ್ಯುತ್ಸವ

ಕನ್ನಡಪ್ರಭವಾರ್ತೆ,ಬೀರೂರು. ಸರಸ್ವತಿಪುರಂ ಬಡಾವಣೆ ಶ್ರೀ ಮೈಲಾರಲಿಂಗಸ್ವಾಮಿ ಯುವಕ ಸಂಘ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ 133ನೇ ಜಯಂತ್ಯುತ್ಸವದ ಅಂಗವಾಗಿ ಭಾನುವಾರ ಸಂಜೆ ಬೃಹತ್ ಮೆರವಣಿಗೆ ನಡೆಸಿದರು.ಮೆರವಣಿಗೆಯನ್ನು ಮಧ್ಯಾಹ್ನ ಮೈಲಾರಲಿಂಗೇಶ್ವರ ದೇವಾಲಯದ ಮುಂಭಾಗದಲ್ಲಿ ದೇವಾಲಯ ಗೌಡರು ಮತ್ತು ಮುಖಂಡರು ಚಾಲನೆ ನೀಡಿ ನಂತರ ವಿವಿಧ ವಾದ್ಯಗೋಷ್ಠಿ, ಚಿಟ್ಟಿಮೇಳ, ಡೊಳ್ಳು ಕುಣಿತ, ಮತ್ತಿತರ ಕಲಾ ತಂಡಗಳೊಂದಿಗೆ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆ ನಡೆಸಿ, ಮಹಾತ್ಮ ಗಾಂಧಿ ವೃತ್ತದಲ್ಲಿ ಗಾಂಧೀಜಿ ಪುತ್ಥಳಿ ಹಾಗೂ ಕೆಎಸ್ಆರ್ಟಿಸಿ ಮುಂಭಾಗದ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ವಾಪಾಸು ಮಹಾತ್ಮ ಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.ಸರಸ್ವತಿಪುರಂ ಬಡಾವಣೆಯ ವಿವಿಧ ಸ್ತ್ರೀ ಶಕ್ತಿ ಸಂಘದ ಮಹಿಳೆಯರು, ಬಡಾವಣೆಯ ಗೌಡರು, ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಅಂಬೇಡ್ಕರ್ ಅಭಿಮಾನಿಗಳು ಸಂವಿಧಾನ ಶಿಲ್ಪಿಗೆ ಜಯಘೋಷ ಕೂಗುತ್ತಾ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.ಪಿಎಸೈ ಸಚಿತ್ ಬೃಹತ್ ಮೆರವಣಿಗೆಯ ಬಂದೋಬಸ್ತ್ ವಹಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.12 ಬೀರೂರು 1ಬೀರೂರಿನ ಸರಸ್ವತಿ ಪುರಂ ಬಡಾವಣೆ ಶ್ರೀ ಮೈಲಾರಲಿಂಗೇಶ್ವರಸ್ವಾಮಿ ಯುವಕ ಸಂಘದಿಂದ ಭಾನುವಾರ ಸಂಜೆ ಡಾ.ಬಿ.ಆರ್.ಅಂಬೇಡ್ಕರ್ ರವರ 133ನೇ ಜಯಂತ್ಯುತ್ಸವದ ಅಂಗವಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನ ರಾಂ ರವರ ಭಾವಚಿತ್ರವನ್ನು ಪಟ್ಟಣದಾಧ್ಯಂತ ಬೃಹತ್ ಮೆರವಣಿಗೆ ನಡೆಸಿದರು.