ವಿಜಯಪುರ: ಪಟ್ಟಣದ ಪುರಸಭಾ ಕಚೇರಿ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ೧೩೫ನೇ ಜಯಂತಿ ಕಾರ್ಯಕ್ರಮವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು

ವಿಜಯಪುರ: ಪಟ್ಟಣದ ಪುರಸಭಾ ಕಚೇರಿ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ೧೩೫ನೇ ಜಯಂತಿ ಕಾರ್ಯಕ್ರಮವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಪುರಸಭಾಧ್ಯಕ್ಷರಾದ ಭವ್ಯ ಮಹೇಶ್ ಮಾತನಾಡಿ, ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ ಇಡೀ ರಾಷ್ಟ್ರದ ಆಸ್ತಿಯಾಗಿದ್ದಾರೆ. ಅವರ ಸಿದ್ಧಾಂತಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ತಿಳಿಸಿದರು.

ಪುರಸಭಾ ಮುಖ್ಯಾಧಿಕಾರಿ ಸತ್ಯನಾರಾಯಣ ಮಾತನಾಡಿ, ಸಂವಿಧಾನದ ಮೂಲಕ ಎಲ್ಲರಿಗೂ ಸಮಾನ ಹಕ್ಕುಗಳನ್ನು ದೊರಕಿಸಿಕೊಟ್ಟ ಮಹಾನ್ ಮಾನವತಾವಾದಿ ಎಂದರು.

ಸದಸ್ಯರಾದ ನಂದಕುಮಾರ್ ಅಂಬೇಡ್ಕರ್ ಅವರ ಶಿಕ್ಷಣದ ಮಹತ್ವದ ಬಗ್ಗೆ ವಿವರಿಸಿದರೆ, ಸದಸ್ಯೆ ವಿಮಲಾ ಬಸವರಾಜು ಅವರು ಮಹಿಳಾ ಸಬಲೀಕರಣಕ್ಕೆ ಅಂಬೇಡ್ಕರ್ ನೀಡಿದ ಕೊಡುಗೆ ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಪುರಸಭಾ ಸದಸ್ಯರಾದ ಶಿಲ್ಪಾ ಅಜಿತ್, ಎಂ.ನಾರಾಯಣಸ್ವಾಮಿ, ಶಹರಿ ರೋಜಗಾರ ಯೋಜನಾಧಿಕಾರಿ ಶಿವನಾಗೇಗೌಡ, ಆರೋಗ್ಯ ಅಧಿಕಾರಿ ಲಾವಣ್ಯ, ಜನಾರ್ಧನ್, ನಾರಾಯಣಸ್ವಾಮಿ ಹಾಗೂ ಮುಖಂಡರಾದ ಭಾನು ಚಂದ್ರ, ಇಮ್ದಾದ್ ಸುಲ್ತಾನ್, ರಾಘವ, ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.