ಹೊಸಕೋಟೆ: ಡಾ.ಬಿ.ಆರ್.ಅಂಬೇಡ್ಕರ್ ಸಮಾನತೆಯ ನವ ಸಮಾಜ ನಿರ್ಮಿಸುವ ದೃಷ್ಟಿಯಿಂದ ಸಂವಿಧಾನ ರಚನೆ ಮಾಡಿದ್ದು ಅವರ ಕನಸು ನನಸು ಮಾಡಬೇಕು ಎಂದು ಭೀಮ್ ಸೇವಾ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀಕಾಂತ್ ರಾವಣ್ ತಿಳಿಸಿದರು.

ಹೊಸಕೋಟೆ: ಡಾ.ಬಿ.ಆರ್.ಅಂಬೇಡ್ಕರ್ ಸಮಾನತೆಯ ನವ ಸಮಾಜ ನಿರ್ಮಿಸುವ ದೃಷ್ಟಿಯಿಂದ ಸಂವಿಧಾನ ರಚನೆ ಮಾಡಿದ್ದು ಅವರ ಕನಸು ನನಸು ಮಾಡಬೇಕು ಎಂದು ಭೀಮ್ ಸೇವಾ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀಕಾಂತ್ ರಾವಣ್ ತಿಳಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನದ ಅಂಗವಾಗಿ ನಗರದ ಗೌತಮ್ ಕಾಲೋನಿಯಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಬಾಬಾ ಸಾಹೇಬರು ಪ್ರಜಾಸತ್ತಾತ್ಮಕ ತತ್ವಗಳಾದ ಸ್ವಾತಂತ್ರ್ಯ, ಸಮಾನತೆ, ಭಾತೃತ್ವ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಜೀವನವಿಡೀ ಹೋರಾಟ ಮಾಡಿದವರು. ಸೌಹಾರ್ದತೆ ಮತ್ತು ರಾಷ್ಟ್ರೀಯ ಏಕತೆಯ ಮನೋಭಾವ ಮನದಲ್ಲಿಟ್ಟುಕೊಂಡು ಸಂವಿಧಾನ ರಚಿಸಿದರು. ಸಂವಿಧಾನದಡಿ ಬದುಕುತ್ತಿರುವ ಪ್ರತಿಯೊಬ್ಬರು ಅಂಬೇಡ್ಕರ್ ಅವರನ್ನು ಮನೆಯಲ್ಲಿ ಪ್ರತಿದಿನ ಪೂಜಿಸಬೇಕು ಎಂದರು.

ಸಿಲಿಕಾನ್ ಸಿಟಿ ಆಸ್ಪತ್ರೆ ಡಾ.ಸುಪ್ರಿತ್ ಮಾತನಾಡಿ, ಜಾತಿ, ಧರ್ಮ ಲಿಂಗಾಧಾರಿತ ಶೋಷಣೆಯಿಂದ ಸಮಾನತೆಯ ಸಮಾಜ ನಿರ್ಮಾಣ ಅಂಬೇಡ್ಕರ್‌ ಕನಸಾಗಿತ್ತು. ಅಂಬೇಡ್ಕರ್‌ ಆಶಯಗಳನ್ನು ಈಡೇರಿಸುವ ಕಾರ್ಯ ಮಾಡೋಣ. ಶೋಷಿತ, ವಂಚಿತ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿ ಸಂವಿಧಾನ ರಚಿಸಿದ ಅಂಬೇಡ್ಕರ್ ಡಿಸೆಂಬರ್ 6ರಂದು 1956ರಲ್ಲಿ ನಿಧನರಾದರು. ಅವರು ನಿಧನರಾದ ದಿನವನ್ನು ಪರಿನಿರ್ವಾಣ ದಿನವನ್ನಾಗಿ ಆಚರಿಸುತ್ತಿದ್ದೇವೆ ಎಂದರು. ಭೀಮ್ ಸೇವಾ ಸಮಿತಿ ಯುವ ಘಟಕದ ರಾಜ್ಯಾಧ್ಯಕ್ಷ ಗಂಗಾಧರ್‌, ಆಟೋ ಘಟಕದ ರಾಜ್ಯಾಧ್ಯಕ್ಷ ಮೂರ್ತಿ, ಜಿಲ್ಲಾಧ್ಯಕ್ಷ ಬಾಲಚಂದ್ರ ಬಾಲು, ಪ್ರ.ಕಾರ್ಯದರ್ಶಿ ಮುನಿರಾಜು, ಕಾರ್ಯದರ್ಶಿ ವರುಣ್ ರಾಜ್ ಚಕ್ರವರ್ತಿ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಸೂರ್ಯ ಸೂರಿ ಹಾಜರಿದ್ದರು.