ಸಮಾಜದಲ್ಲಿನ ಅನೇಕ ತಾರತಮ್ಯಗಳನ್ನು ಹೋಗಲಾಡಿಸಿ ಸಮಾನತೆಯ ದೃಢ ಸಂಕಲ್ಪವನ್ನು ತೊಟ್ಟಿದ್ದ ಡಾ.ಬಿ.ಆರ್. ಅಂಬೇಡ್ಕರ್‌ರವರು ದೌರ್ಜನ್ಯ-ತಾರತಮ್ಯದಿಂದ ನೊಂದವರಿಗೆ ಧನಿಯಾಗಿ ಜನರಲ್ಲಿ ಹೊಸ ಚಿಂತನೆಯನ್ನು ಮೂಢಿಸಿದರು. ಅಂಬೇಡ್ಕರ್‌ರವರು ಜ್ಞಾನ ಸಾಗರ ಅವರ ಆದರ್ಶಗಳು ಬದುಕಿದ ರೀತಿ ಪ್ರತಿಯೊಬ್ಬರಿಗೂ ದಾರಿ ದೀಪ ಎಂದು ವಕೀಲ ಮಂಜುನಾಥ ಗಿಳಿಯಾರು ಹೇಳಿದರು.
ಉಡುಪಿ : ಸಮಾಜದಲ್ಲಿನ ಅನೇಕ ತಾರತಮ್ಯಗಳನ್ನು ಹೋಗಲಾಡಿಸಿ ಸಮಾನತೆಯ ದೃಢ ಸಂಕಲ್ಪವನ್ನು ತೊಟ್ಟಿದ್ದ ಡಾ.ಬಿ.ಆರ್. ಅಂಬೇಡ್ಕರ್‌ರವರು ದೌರ್ಜನ್ಯ-ತಾರತಮ್ಯದಿಂದ ನೊಂದವರಿಗೆ ಧನಿಯಾಗಿ ಜನರಲ್ಲಿ ಹೊಸ ಚಿಂತನೆಯನ್ನು ಮೂಢಿಸಿದರು. ಅಂಬೇಡ್ಕರ್‌ರವರು ಜ್ಞಾನ ಸಾಗರ ಅವರ ಆದರ್ಶಗಳು ಬದುಕಿದ ರೀತಿ ಪ್ರತಿಯೊಬ್ಬರಿಗೂ ದಾರಿ ದೀಪ ಎಂದು ವಕೀಲ ಮಂಜುನಾಥ ಗಿಳಿಯಾರು ಹೇಳಿದರು.ಅವರು ಹಿರಿಯಡ್ಕದ ಸರಕಾರಿ ಪ್ರಥಮ ದರ್ಜೆ ಕಾಲೇಜುನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.
ಮಹಿಳೆಯರ ಸ್ವಾತಂತ್ರ್ಯ ಸಮಾನತೆಗಾಗಿ ಹೋರಾಡಿದ ಅವರು ಮಹಿಳೆಯರಿಗೆ ಸಮಾಜದಲ್ಲಿ ಸಮಾನ ಗೌರವವನ್ನು ಒದಗಿಸುವುದರ ಜೊತೆಗೆ ಮಹಿಳೆಯರ ಶಿಕ್ಷಣಕ್ಕೆ ಪ್ರಾಮುಖ್ಯತೆಯನ್ನು ನೀಡಿ ಇಂದು ಮಹಿಳೆಯರು ಶಿಕ್ಷಣ ಪಡೆಯುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ ಎಂದರು.ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಜಯಪ್ರಕಾಶ್ ಶೆಟ್ಟಿ ಹೆಚ್, ಗಾಂಧೀಜಿ ಹಾಗೂ ಅಂಬೇಡ್ಕರ್ ದೇಶದ ಅಭಿವೃದ್ಧಿ ಮತ್ತು ಸ್ವತಂತ್ರಕ್ಕಾಗಿ ಅನೇಕ ಕೊಡುಗೆಗಳನ್ನು ನೀಡಿದ್ದು, ಇಂದಿನ ಯುವ ಪೀಳಿಗೆಯು ಅವರ ಸಿದ್ಧಾಂತ ಹಾಗೂ ಮಾರ್ಗದರ್ಶಗಳನ್ನು ಅನುಸರಿಸಿ ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದರು.
ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಸೌಮ್ಯಲತಾ ಪಿ., ಐ.ಕ್ಯೂ.ಎ.ಸಿ ಸಂಚಾಲಕ ಡಾ.ಲಿತಿನ್ ಬಿ.ಎಂ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ ಪಂಜು ನಿರೂಪಿಸಿ, ಸಾಂಸ್ಕೃತಿಕ ವೇದಿಕೆಯ ಸಂಚಾಲಕಿ ಮೀನಾಕ್ಷಿ ನಾಯ್ಕ ವಂದಿಸಿದರು.