ಸಾರಾಂಶ
ಹನೂರು ತಾಲೂಕಿನ ಮಲೆಮಾದೇಶ್ವರ ಬೆಟ್ಟದ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಚೇರಿ ಆವರಣದಲ್ಲಿ 134 ನೇ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನ ಕಾರ್ಯಕ್ರಮ ನಡೆಯಿತು.
ಕನ್ನಡ ಪ್ರಭ ವಾರ್ತೆ ಹನೂರು
ಸಾಮಾಜಿಕ ಸಮಾನತೆ ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ನಾಯಕ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನ ದೇಶಾದಂತ್ಯ ನಡೆಯುತ್ತಿದೆ ಎಂದು ಸಾಲೂರು ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದರು.ಹನೂರು ತಾಲೂಕಿನ ಮಲೆಮಾದೇಶ್ವರ ಬೆಟ್ಟದ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ 134 ನೇ ಡಾ. ಬಿ.ಆರ್.ಅಂಬೇಡ್ಕರ್ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಮಾನತೆಯ ಹಕ್ಕುಗಳಿಗಾಗಿ ಹೋರಾಡಿದ ಸಾಮಾಜಿಕ ಚಳವಳಿಗಳಲ್ಲಿ ಅಂಬೇಡ್ಕರ್ ಕೂಡ ಪ್ರಮುಖ ಪಾತ್ರ ವಹಿಸಿದ್ದರು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ಮಾತನಾಡಿ ಡಾ.ಬಿ. ಆರ್.ಅಂಬೇಡ್ಕರ್ ಸಮಾನತೆಯ ಹರಿಕಾರ, ಭಾರತೀಯ ಸಂವಿಧಾನದ ಪಿತಾಮಹ, ಭಾರತದ ಸಂವಿಧಾನ ರಚನೆ ಪ್ರಕ್ರಿಯೆಯಲ್ಲಿ ಪ್ರಮುಖ ವ್ಯಕ್ತಿಯಾಗಿದ್ದರು, ಅತ್ಯಂತ ನಿರ್ಣಾಯಕ ಸಮಿತಿಯ ಅಧ್ಯಕ್ಷರಾಗಿದ್ದರು ಅವರ ಜನ್ಮ ದಿನಾಚರಣೆಯನ್ನು ಸಂಭ್ರಮ ಸಡಗರದೊಂದಿಗೆ ಆಚರಿಸಲಾಗುತ್ತಿದೆ. ಮಹಾನ್ ನಾಯಕರ ಜನ್ಮದಿನಾಚರಣೆ ಪ್ರತಿಯೊಬ್ಬರಿಗೂ ಆದರ್ಶ ದಾಯಕವಾಗಿದ್ದರು ಎಂದರು.ಇದೇ ಸಂದರ್ಭದಲ್ಲಿ ಉಪ ಕಾರ್ಯದರ್ಶಿ ಚಂದ್ರಶೇಖರ್ ಪಾರು ಪತ್ತೆಗಾರ ಮಹದೇವಸ್ವಾಮಿ, ಸರಗೂರು ಮಹದೇವ ಸ್ವಾಮಿ, ಜನಾರ್ದನ್, ಮಲೆಮಾದೇಶ್ವರ ಬೆಟ್ಟದ ಪ್ರಾಧಿಕಾರದ ಸಿಬ್ಬಂದಿ ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))