ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರುಉತ್ತಮ ಹವ್ಯಾಸಗಳು ವಿದ್ಯಾರ್ಥಿಗಳಲ್ಲಿ ಜ್ಞಾನ ಮತ್ತು ಕೌಶಲ್ಯವನ್ನು ಹೆಚ್ಚಿಸುತ್ತವೆ ಎಂದು ಮೈಸೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕಿ ಡಾ. ಏಂಜಲ್ ರಾಜ್ ತಿಳಿಸಿದರು.ನಗರದ ಸರಸ್ವತಿಪುರಂನಲ್ಲಿರುವ ಮಹಾಬೋಧಿ ಶಾಲೆಯಲ್ಲಿ ಫಿಲಾಟೆಲಿ ಕ್ಲಬ್ ಉದ್ಘಾಟಿಸಿ ಮಾತನಾಡಿದ ಅವರು, ಅಂಚೆ ಚೀಟಿ ಹವ್ಯಾಸವನ್ನು ಹವ್ಯಾಸಗಳ ರಾಜ ಎಂದು ಕರೆಯಲಾಗುತ್ತದೆ. ಅಂಚೆ ಚೀಟಿಗಳು ದೇಶದ ಇತಿಹಾಸ, ಸಂಸ್ಕೃತಿ, ಪರಂಪರೆ ಸೇರಿದಂತೆ ವಿವಿಧ ವಿಷಯಗಳ ಮೇಲೆ ಬೆಳಕು ಚೆಲ್ಲುತ್ತವೆ ಎಂದು ಹೇಳಿದರು.ಮಹಾಬೋಧಿ ಶಾಲೆಯ ಸಿಇಓ ಜಿಕ್ಮೆಟ್ ವಾಂಗ್ಡಸ್ ಜ್ಯೋತಿ ಮಾತನಾಡಿ, ಸಾಮಾಜಿಕ ಮಾಧ್ಯಮಗಳ ಆಗಮನದಿಂದಾಗಿ ಪತ್ರ ಬರೆಯುವ ಸಂಸ್ಕೃತಿ ದೂರವಾಗುತ್ತಿದೆ. ವಿದ್ಯಾರ್ಥಿಗಳು ಅಂಚೆ ಚೀಟಿ ಸಂಗ್ರಹವನ್ನು ಹವ್ಯಾಸವನ್ನಾಗಿ ಮಾಡಿಕೊಳ್ಳುವ ಮೂಲಕ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಈ ಶ್ರೀಮಂತ ಪರಂಪರೆಯನ್ನು ಪುನರ್ಜೀವನಗೊಳಿಸುವ ನಿಟ್ಟಿನಲ್ಲಿ ಮಹಾಬೋಧಿ ಶಾಲೆಯಲ್ಲಿ ಫಿಲಾಟೆಲಿ ಕ್ಲಬ್ ಅನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.ಸೋಬನ್ ಬಂತೇಜಿ, ವಿಮಲಕಿತ್ತಿ ಬಂತೇಜಿ, ಮೈಸೂರು ಅಂಚೆ ವಿಭಾಗದ ಮಾರುಕಟ್ಟೆ ವ್ಯವಸ್ಥಾಪಕ ಡಾ. ಸುರೇಶ್ ಕುಮಾರ್, ಶಿಕ್ಷಣ ಸಂಯೋಜಕ ವಿ. ವೆಂಕಟೇಶ್ವರಲು, ಪ್ರಾಂಶುಪಾಲೆ ಶ್ರುತಿ ಇದ್ದರು.