ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ.ಆಂಜಿನಪ್ಪ ಆಯ್ಕೆ

| Published : Jan 12 2024, 01:45 AM IST

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ.ಆಂಜಿನಪ್ಪ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಹೊಸಕೋಟೆ: ಜನವರಿ 21 ಹಾಗೂ 22ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಜಿಲ್ಲಾ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಾ.ಆಂಜನಪ್ಪ ಅವರನ್ನು ತಾಲೂಕಿನ ನಂದಗುಡಿ ಹೋಬಳಿ ಕಸಾಪ ಅಧ್ಯಕ್ಷ ತರಬಹಳ್ಳಿ ಹರೀಶ್, ಸೂಲಿಬೆಲೆ ಹೋಬಳಿ ಕಸಾಪ ನಿಕಟಪೂರ್ವ ಅಧ್ಯಕ್ಷ ಎಂ.ಆರ್. ಉಮೇಶ್, ಕಸಾಪ ನಿಕಟಪೂರ್ವ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸೂಲಿಬೆಲೆ ಮಂಜುನಾಥ್, ಕಸಾಪ ಸದಸ್ಯ ಬೆಟ್ಟಹಳ್ಳಿ ಅಂಜಿನಪ್ಪ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಅಭಿನಂದಿಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಡಾ.ಆಂಜನಪ್ಪ, ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆಯಲಿರುವ ಜಿಲ್ಲಾ ಸಮ್ಮೇಳನಕ್ಕೆ ಅಧ್ಯಕ್ಷನಾಗಿ ಆಯ್ಕೆ ಮಾಡಿರುವುದು ಸಂತೋಷವಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಪ್ರತಿಯೊಬ್ಬ ಕನ್ನಡಿಗರ ಸಹಕಾರ ಅಗತ್ಯವಿದೆ. ನಾಡು ನುಡಿ ವಿಚಾರ ಬಂದಾಗ ಪ್ರತಿಯೊಬ್ಬರೂ ಜಾತಿ ಧರ್ಮ ಭೇದವನ್ನ ಮರೆತು ಪರಸ್ಪರ ಸಹಕಾರ ನೀಡಬೇಕು. ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ನಾಡು ನುಡಿ ವಿಚಾರವಾಗಿ ಕನ್ನಡಿಗರಾದ ಪ್ರತಿಯೊಬ್ಬರ ಕರ್ತವ್ಯದ ಬಗ್ಗೆ ಜಾಗೃತಿ ಹಾಗೂ ಅರಿವು ಪಡೆದುಕೊಳ್ಳಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡ ಅಭಿಮಾನಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಫೋಟೋ : 11 ಹೆಚ್‌ಎಸ್‌ಕೆ 1

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆಯಲಿರುವ ಕಸಾಪ ಜಿಲ್ಲಾ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ.ಆಂಜನಪ್ಪ ಅವರನ್ನು ಹೊಸಕೋಟೆ ತಾಲೂಕು ನಂದಗುಡಿ, ಸೂಲಿಬೆಲೆ ಕಸಾಪ ಪದಾಧಿಕಾರಿಗಳು ಅಭಿನಂದಿಸಿದರು.