ತಂತ್ರಜ್ಞಾನ ಮತ್ತು ನಾವೀನ್ಯತಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿರುವ ಮಹಿಳೆಯರನ್ನು ಗೌರವಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಪ್ರತಿಷ್ಠಿತ ಇನ್‍ಸ್ಟಿಟ್ಯೂಷನ್ ಆಫ್ ಎಲೆಕ್ಟ್ರಾನಿಕ್ಸ್ ಆ್ಯಂಡ್ ಟೆಲಿಕಮ್ಯುನಿಕೇಶನ್ ಇಂಜಿನಿಯರ್ಸ್ (ಐಇಟಿಇ) ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಪ್ರಶಸ್ತಿಯನ್ನು ಈ ಬಾರಿ ಪುಣೆಯ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)ಯ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ವಿಭಾಗದ ಡಾ. ಶ್ರೀಪರ್ಣಾ ಸಾಹಾ ಪಡೆದಿದ್ದಾರೆ.
ಕನ್ನಡಪ್ರಭ ವಾರ್ತೆ ಕಲಬುರಗಿ
ತಂತ್ರಜ್ಞಾನ ಮತ್ತು ನಾವೀನ್ಯತಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿರುವ ಮಹಿಳೆಯರನ್ನು ಗೌರವಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಪ್ರತಿಷ್ಠಿತ ಇನ್‍ಸ್ಟಿಟ್ಯೂಷನ್ ಆಫ್ ಎಲೆಕ್ಟ್ರಾನಿಕ್ಸ್ ಆ್ಯಂಡ್ ಟೆಲಿಕಮ್ಯುನಿಕೇಶನ್ ಇಂಜಿನಿಯರ್ಸ್ (ಐಇಟಿಇ) ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಪ್ರಶಸ್ತಿಯನ್ನು ಈ ಬಾರಿ ಪುಣೆಯ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)ಯ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ವಿಭಾಗದ ಡಾ. ಶ್ರೀಪರ್ಣಾ ಸಾಹಾ ಪಡೆದಿದ್ದಾರೆ.ಕೋಲ್ಕತ್ತಾದಲ್ಲಿ ನಡೆದ 69ನೇ ವಾರ್ಷಿಕ ಐಇಟಿಇ ಸಮಾವೇಶದಲ್ಲಿ ವಿವಿಧ ಗಣ್ಯರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 37 ಐಇಟಿಇ ಪ್ರಶಸ್ತಿಗಳೊಂದಿಗೆ, ಎರಡು ಜೀವಮಾನ ಸಾಧನೆ ಪ್ರಶಸ್ತಿಗಳು, ಮೂರು ಐಇಟಿಇ ಕಾರ್ಪೋರೇಟ್ ಪ್ರಶಸ್ತಿಗಳು ಹಾಗೂ ಎರಡು ಐಇಟಿಇ ಅತ್ಯುತ್ತಮ ಸಂಶೋಧನಾ ಪ್ರಬಂಧ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
ಈ ವರ್ಷ ಇದೇ ಮೊದಲ ಬಾರಿಗೆ ಪರಿಚಯಿಸಲಾದ ಐಇಟಿಇ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಪ್ರಶಸ್ತಿಯನ್ನು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಐಇಟಿಇ ಪದಾಧಿಕಾರಿಗಳ ಸಮ್ಮುಖದಲ್ಲಿ ಡಾ. ಶ್ರೀಪರ್ಣಾ ಸಾಹಾ ಅವರಿಗೆ ಪ್ರದಾನ ಮಾಡಿದರು.ಡಾ. ಶರಣಬಸವಪ್ಪ ಅಪ್ಪಾಜಿ ಪ್ರಶಸ್ತಿಗಾಗಿ ಒಟ್ಟು 37 ಅರ್ಜಿಗಳು/ನಾಮನಿರ್ದೇಶನಗಳು ದಾಖಲಾಗಿದ್ದು, ತೀರ್ಪುಗಾರರ ಸಮಿತಿ ಡಾ. ಸಾಹಾ ಅವರ ವಿಶೇಷ ಪರಿಣಿತಿ ಕ್ಷೇತ್ರದಲ್ಲಿನ ಸಾಧನೆ ಹಾಗೂ ನವೀನ ಚಿಂತನೆಗಳನ್ನು ಪರಿಗಣಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿತು.
ಶರಣಬಸವೇಶ್ವರ ಸಂಸ್ಥಾನದ 9ನೇ ಮಹಾದಾಸೋಹ ಪೀಠಾಧಿಪತಿ ಪೂಜ್ಯ ದೊಡ್ಡಪ್ಪ ಅಪ್ಪಾಜಿ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶರಣಬಸವ ವಿವಿ ಕುಲಾಧಿಪತಿ ಡಾ. ದಾಕ್ಷಾಯಿಣಿ ಅವ್ವಾಜಿ ಅವರು ಡಾ. ಶ್ರೀಪರ್ಣಾ ಸಾಹಾ ಅವರಿಗೆ ಅಭಿನಂದಿಸಿದ್ದಾರೆ.ಶರಣಬಸವ ವಿವಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ, ಕುಲಸಚಿವೆ ಡಾ. ಲಕ್ಷ್ಮೀ ಪಾಟೀಲ ಮಾಕಾ, ಮೌಲ್ಯಮಾಪನ ಕುಲಸಚಿವ ಡಾ. ಎಸ್.ಎಚ್. ಹೊನ್ನಳ್ಳಿ ಹಾಗೂ ಡೀನ್ ಡಾ. ಶಿವಕುಮಾರ ಜವಳಿಗಿ ಇವರು ಡಾ. ಶ್ರೀಪರ್ಣಾ ಸಾಹಾ ಅವರನ್ನು ಅಭಿನಂದಿಸಿದ್ದಾರೆ.